Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು ಜಿಲ್ಲಾ ಉತ್ಸವ-2020 ಲಾಂಛನ...

ಚಿಕ್ಕಮಗಳೂರು ಜಿಲ್ಲಾ ಉತ್ಸವ-2020 ಲಾಂಛನ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ3 Feb 2020 5:42 PM IST
share
ಚಿಕ್ಕಮಗಳೂರು ಜಿಲ್ಲಾ ಉತ್ಸವ-2020 ಲಾಂಛನ ಬಿಡುಗಡೆ

ಚಿಕ್ಕಮಗಳೂರು, ಫೆ.3: ನಗರದಲ್ಲಿ ಫೆ.28ರಿಂದ ಮಾ.1ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಜಿಲ್ಲಾ ಉತ್ಸವ-2020 ಕಾರ್ಯಕ್ರಮಕ್ಕೆ 4 ಕೋಟಿ ರೂ. ಅನುದಾನ ಕೋರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಲಾಗಿದ್ದು, ಜಿಲ್ಲೆಯ ಎಲ್ಲ ಜನರ ಸಹಭಾಗಿತ್ವದಲ್ಲಿ ಉತ್ವವವನ್ನು ಸಡಗರ, ಸಂಭ್ರಮದಿಂದ ನಡೆಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಉತ್ಸವದ ಲಾಂಛನ ಬಿಡುಗಡೆ ಹಾಗೂ ಫೇಸ್‍ಬುಕ್ ಪೇಜ್‍ನ ಲೋಕಾರ್ಪಣೆ ಕಾರ್ಯಕ್ರಮದ ಲಾಂಛನ ಬಿಡುಗಡೆಗೊಳಿಸಿ ನಂತರ ಮಾತನಾಡಿದ ಅವರು, ಚಿಕ್ಕಮಗಳೂರು ಉತ್ಸವವನ್ನು ಅನೇಕ ವರ್ಷಗಳ ನಂತರ ಮತ್ತೆ ನಡೆಸುತ್ತಿರುವುದಕ್ಕೆ ಜಿಲ್ಲೆಯ ಜನರಿಂದ ವ್ಯಾಪಕ ಪ್ರಶಂಸೆ, ಸಹಕಾರ ಸಿಗುತ್ತಿದೆ. ಈ ಉತ್ಸವ ಜಿಲ್ಲೆಯ ಜನರ ಹಬ್ಬವನ್ನಾಗಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ, ರೂಪರೇಷೆಗಳನ್ನು ಕೈಗೊಳ್ಳಲಾಗುತ್ತಿದ್ದು, ಜಿಲ್ಲೆಯನ್ನು ಸಾಂಸ್ಕೃತಿಕ ಕೇಂದ್ರವನ್ನಾಗಿಸುವ ನಿಟ್ಟಿನಲ್ಲಿ ಈ ಉತ್ಸವ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಿಸಿದರು.

ಚಿಕ್ಕಮಗಳೂರು ಉತ್ಸವದ ಲಾಂಛನವನ್ನು ಕಲಾವಿದ ವಿಶ್ವಕರ್ಮ ಆಚಾರ್ಯ ಅವರು ಅತ್ಯಂತ ಸುಂದರವಾಗಿ ವಿನ್ಯಾಸಗೊಳಿಸಿದ್ದಾರೆ. ಜಿಲ್ಲೆಯ ಸಂಸ್ಕೃತಿಯನ್ನು ಬಿಂಬಿಸುವಂತಹ ಲಾಂಛನ ಅನ್ನು ಸುಂದರವಾಗಿ ವಿನ್ಯಾಸಗೊಳಿಸಲಾಗಿದೆ. ಇದರೊಂದಿಗೆ ಉತ್ಸವದ ಪ್ರಚಾರ, ಮಾಹಿತಿಗಾಗಿ ಫೇಸ್‍ಬುಕ್ ಪೇಜ್‍ಗೂ ಚಾಲೆನ ನೀಡಲಾಗಿದೆ. ಉತ್ಸವವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ವಿವಿಧ ಸಮಿತಿಗಳು ಕಾರ್ಯಪ್ರವೃತ್ತರಾಗಿದ್ದು, ಸಮಿತಿಗಳ ಮುಖಂಡರು ಉತ್ತಮ ಸಲಹೆ, ಸೂಚನೆ, ಸಹಕಾರ ನೀಡುತ್ತಿದ್ದಾರೆ. ಚಿಕ್ಕಮಗಳೂರು ಉತ್ಸವವನ್ನು ಜನರ ಹಬ್ಬವನ್ನಾಗಿ ಆಚರಿಸಲಾಗುವುದು ಎಂದು ಸಿ.ಟಿ.ರವಿ ಹೇಳಿದವರು.

ಜಿಲ್ಲಾ ಉತ್ಸವವನ್ನು ಅತ್ಯಂತ ಯಶಸ್ವಿಯಾಗಿ ನಡೆಸುವ ಉದ್ದೇಶದಿಂದ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಈಗಾಗಲೇ ಮೂರು ಪೂರ್ವಭಾವಿ ಸಭೆಗಳನ್ನು ನಡೆಸಲಾಗಿದೆ. ಈ ಸಂಬಂಧ ಅಂತಿಮವಾದ ನೀಲ ನಕ್ಷೆಯೊಂದನ್ನು ಶೀಘ್ರ ರೂಪಿಸಿ ಅದರಂತೆ ಚಿಕ್ಕಮಗಳೂರು ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು. ಉತ್ಸವದ ಯಶಸ್ವಿಗಾಗಿ ಸಾಂಸ್ಕೃತಿಕ ಚಿಂತಕರಾದ ಬಿ.ಎಲ್.ಶಂಕರ್, ಆಳ್ವಾಸ್ ಸಂಸ್ಥೆಯ ಡಾ.ಮೋಹನ್ ಆಳ್ವಾ ಅವರೂ ಸಹಕಾರ ನೀಡುತ್ತಿದ್ದಾರೆ ಎಂದು ರವಿ ಇದೇ ವೇಳೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಎಸ್ಪಿ ಹರೀಶ್ ಪಾಂಡೆ, ಅಪರ ಜಿಲ್ಲಾಧಿಕಾರಿ ಡಾ.ಕುಮಾರ್, ಎಎಸ್ಪಿ ಶೃತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X