Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗ್ರಂಥಾಲಯಗಳ ಆಧುನೀಕರಣ ಅತ್ಯಗತ್ಯ:...

ಗ್ರಂಥಾಲಯಗಳ ಆಧುನೀಕರಣ ಅತ್ಯಗತ್ಯ: ಪ್ರೀತಿ ಗೆಹ್ಲೋಟ್

ವಾರ್ತಾಭಾರತಿವಾರ್ತಾಭಾರತಿ3 Feb 2020 9:51 PM IST
share
ಗ್ರಂಥಾಲಯಗಳ ಆಧುನೀಕರಣ ಅತ್ಯಗತ್ಯ: ಪ್ರೀತಿ ಗೆಹ್ಲೋಟ್

ಉಡುಪಿ, ಫೆ.3: ಗ್ರಂಥಾಲಯಗಳು ಅತ್ಯಾಧುನಿಕ ಸೌಕರ್ಯಗಳನ್ನು ಅಳವಡಿಸಿಕೊಂಡು ಓದುಗರ ಸ್ನೇಹಿಯಾಗಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಗ್ರಂಥಾಲಯ ಗಳನ್ನು ಮೇಲ್ದರ್ಜೆಗೇರಿಸುವ ಚಿಂತನೆ ನಡೆದಿದೆ ಎಂದು ಉಡುಪಿ ಜಿಪಂನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್ ತಿಳಿಸಿದ್ದಾರೆ.

ಮಣಿಪಾಲದ ಜಿಪಂನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯ ಉಡುಪಿ ಸಹಭಾಗಿತ್ವದಲ್ಲಿ ಜಿಲ್ಲೆಯ ಗ್ರಾಪಂ ಗ್ರಂಥಾಲಯಗಳ ಮೇಲ್ವಿಚಾರಕ ರಿಗಾಗಿ ಹಮ್ಮಿಕೊಂಡ ಡಿಜಿಟಲ್ ಗ್ರಂಥಾಲಯ ತರಬೇತಿ ಕಾರ್ಯಾಗಾರದ ಸಮಾರೋಪ ಕಾರ್ಯಾಗಾರದಲ್ಲಿ ಭಾಗವಹಿಸಿ ಪ್ರಮಾಣ ಪತ್ರ ವಿತರಿಸಿ ಮಾತನಾಡುತಿದ್ದರು.

ಗ್ರಂಥಾಲಯದಲ್ಲಿ ಓದುಗರ ಸಂಖ್ಯೆ ಇಳಿಮುಖವಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಗ್ರಂಥಾಲಯಗಳಿಗೆ ಮಕ್ಕಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಮಕ್ಕಳ ಕಥೆಗಳು, ಸ್ಪರ್ಧಾತ್ಮಕ ಪರೀಕ್ಷಾ ಮಾಹಿತಿ ಪುಸ್ತಕಗಳು ಮೊದಲಾದ ಗ್ರಂಥಗಳನ್ನು ಹೊಂದಿರುವ ಅಗತ್ಯವಿದೆ. ಪ್ರಸ್ತುತ ಗ್ರಂಥಾಲಯಗಳನ್ನು ಡಿಜಿಟಲೀಕರಣಗೊಳಿಸುವ ನಿಟ್ಟಿನಲ್ಲಿ ಕಂಪ್ಯೂಟರ್, ಕಟ್ಟಡ ಮೊದಲಾದ ಸೌಕರ್ಯಗಳನ್ನು ಕಲ್ಪಿಸಲು ಪ್ರಯತ್ನಿಸಲಾ ಗುವುದು ಎಂದರು.

ಜಿಪಂ ಯೋಜನಾಧಿಕಾರಿ ಶ್ರೀನಿವಾಸ ರಾವ್ ಮಾತನಾಡಿ, ಗ್ರಂಥಾಲಯ ಗಳ ದೊಡ್ಡ ಸಮಸ್ಯೆ ಎಂದರೆ ಓದುಗರ ಸಂಖ್ಯೆಯನ್ನು ಹೆಚ್ಚಿಸುವು ದಾಗಿದೆ. ಸರಕಾರಿ ಶಾಲೆಗಳನ್ನು ಉಳಿಸಲು ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಿರುವಂತೆ, ಇಲಾಖೆ ಉಳಿಯಬೇಕಾದರೆ ಬದಲಾ ವಣೆ ತರುವುದು ಅಗತ್ಯವಾಗಿದೆ. ಹೀಗಾಗಿ ಗ್ರಂಥಾಲಯಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪಿಡಿಓಗಳ ಜೊತೆಗೆ ಚರ್ಚಿಸಲಾಗುವುದು ಎಂದರು.

ಬ್ಯಾಂಕಿಂಗ್, ಐಎಎಸ್, ಕೆಪಿಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಪುಸ್ತಕಗಳು ಲೈಬ್ರೇರಿಯಲ್ಲಿರಬೇಕು. ಹಾಗೆಯೇ ಹಿರಿಯ ನಾಗರಿಕರನ್ನು ಸೆಳೆಯಲು ಸೂಕ್ತ ಬದಲಾವಣೆಗಳು ಅಗತ್ಯವಾಗಿವೆ. ಪುಸ್ತಕಗಳನ್ನು ಖರೀದಿಸಲು ಅನುದಾನದ ಕೊರತೆ ಯಿದ್ದರೆ, ದಾನಿಗಳ ನೆರವಿನ ಮೂಲಕ ಪುಸ್ತಕಗಳನ್ನು ಹೊಂದಲು ಮೇಲ್ವಿಚಾರಕರು ಪ್ರಯತ್ನಿಸಬೇಕು. ಸ್ಥಳೀಯವಾಗಿ ಬೇಡಿಕೆ ಇರುವ ಪುಸ್ತಕಗಳನ್ನು ಹೆಚ್ಚಾಗಿ ತರಿಸಿಕೊಳ್ಳಿ ಎಂದು ಅವರು ಕಿವಿಮಾತು ಹೇಳಿದರು.

ಎರಡು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ಮಣಿಪಾಲ ವಿವಿಯ ಗ್ರಂಥಾಲಯ ಹಾಗೂ ಮಾಹಿತಿ ತಂತ್ರಜ್ಞಾನ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ಶಿವಾನಂದ ಭಟ್ ಅವರಿಂದ ಸಾರ್ವಜನಿಕ ಗ್ರಂಥಾಲಯ ಓದುಗರು ಮತ್ತು ಮಾಹಿತಿ ಆವಶ್ಯಕತೆಗಳು, ಪ್ರೊ. ಮಹಾಬಲೇಶ್ವರ ರಾವ್ ಇವರಿಂದ ಸ್ಮಾರ್ಟ್ ಲೈಬ್ರೇರಿ, ಕಾಪು ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕ ರಾಜಶೇಖರ ಕಂಬಾರ ಅವರು ಸಾರ್ವಜನಿಕ ಮಾಧ್ಯಮ ಪರಿಕರಗಳು ಮತ್ತು ಗ್ರಂಥಾಲಯದಲ್ಲಿ ಅದರ ಉಪಯೋಗಗಳು ಎಂಬ ವಿಷಯದ ಬಗ್ಗೆ ಹಾಗೂ ಜಗತ್ ವೆಂಚರ್ಸ್‌ ಬೆಂಗಳೂರು ಸಂಸ್ಥೆಯ ಕೀರ್ತಿ ಅವರಿಂದ ಇ-ಗ್ರಂಥಾಲಯ ಬಗ್ಗೆ ಉಪ್ಯಾಸ ನಡೆಯಿತು.

ಬ್ರಹ್ಮಾವರ ಕ್ರಾಸ್‌ಲ್ಯಾಂಡ್ ಕಾಲೇಜಿನ ಸೋಶಿಯಲ್ ಸೈನ್ಸ್ ವಿಭಾಗದ ಡಾ.ರಾಬರ್ಟ್ ಕ್ಲೈವ್ ಜಿ. ಅವರು ಒತ್ತಡ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ., ಶಕುಂತಳಾ ಕುಂದರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X