ಮಣಿಪಾಲ: ಆಸ್ಪತ್ರೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಒಳರೋಗಿ ಮೃತ್ಯು
ಮಣಿಪಾಲ, ಫೆ.3: ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಒಳರೋಗಿಯೊಬ್ಬರು ಫೆ.2ರಂದು ಸಂಜೆ 6.45ರ ಸುಮಾರಿಗೆ ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿದ್ದಾರೆ.
ಮೃತರನ್ನು ಭಟ್ಕಳ ಶಿರಾಲಿಯ ಮಹಾದೇವ ಮೊಗೇರ ಎಂದು ಗುರುತಿಸಲಾಗಿದೆ. ಕುತ್ತಿಗೆಯ ಕ್ಯಾನ್ಸರ್ ಬಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು, ಮಾನಸಿಕ ಖಿನ್ನತೆಯಿಂದ ಜ.18ರಂದು ಆಸ್ಪತ್ರೆಯ ಜನರಲ್ ವಾರ್ಡ್‌ನ ಬೆಡ್‌ನಲ್ಲಿ ಮಲಗಿಕೊಂಡು ಟೀಶರ್ಟ್‌ನ್ನು ತನ್ನ ಕುತ್ತಿಗೆಗೆ ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡ ಇವರು, ಫೆ.2 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





