Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗಡಿ ವಿವಾದ ಸೌಹಾರ್ದ ಬದುಕಿಗೆ...

ಗಡಿ ವಿವಾದ ಸೌಹಾರ್ದ ಬದುಕಿಗೆ ಅಡ್ಡಿಯಾಗದಿರಲಿ: ನ್ಯಾ.ಕೆ.ಎಲ್.ಮಂಜುನಾಥ್

ವಾರ್ತಾಭಾರತಿವಾರ್ತಾಭಾರತಿ3 Feb 2020 11:02 PM IST
share
ಗಡಿ ವಿವಾದ ಸೌಹಾರ್ದ ಬದುಕಿಗೆ ಅಡ್ಡಿಯಾಗದಿರಲಿ: ನ್ಯಾ.ಕೆ.ಎಲ್.ಮಂಜುನಾಥ್

ಬೆಳಗಾವಿ, ಫೆ.3: ನಾವೆಲ್ಲರೂ ಭಾರತೀಯರು ಎಲ್ಲರೂ ಅನ್ಯೂನ್ಯತೆಯಿಂದ ಇರಬೇಕು. ಗಡಿ ವಿಷಯ ಸುಪ್ರೀಂಕೋರ್ಟ್‌ನಲ್ಲಿ ಇರುವುದರಿಂದ ಯಾರು ಗಲಾಟೆ ಮಾಡದೆ ಶಾಂತಿ ಕಾಪಾಡಬೇಕು ಎಂದು ಕರ್ನಾಟಕ ಗಡಿ ಹಾಗೂ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಹೇಳಿದ್ದಾರೆ.

ಸೋಮವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗಡಿ ವಿವಾದದ ದಾವೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗಡಿ ವಿವಾದ ಎಂದರೆ ಏನೂ ಎಂಬುದು ಬಹಳಷ್ಟು ಜನರಿಗೆ ಇದೂವರೆಗೆ ತಿಳಿದಿಲ್ಲ, ಮಹಾದಾಯಿ ವಿಚಾರ ಏನು ಎಂಬುದು ಸಹ ಬಹಳಷ್ಟು ಜನರಿಗೆ ಮಾಹಿತಿ ಇಲ್ಲ ಎಂದು ಮಂಜುನಾಥ್ ಅಭಿಪ್ರಾಯಪಟ್ಟರು. 1956ರಲ್ಲಿ ಮೈಸೂರು ರಾಜ್ಯ ಎಂದು ನಾಮಕರಣವಾದ ಮೇಲೆ ಅನೇಕ ಪ್ರದೇಶಗಳು ಕರ್ನಾಟಕದಲ್ಲಿ ಸೇರಿಕೊಂಡರೆ, ಕೆಲ ಪ್ರದೇಶಗಳು ಅಕ್ಕಪಕ್ಕದ ರಾಜ್ಯಗಳ ಪಾಲಾದವು, ಅದೇ ರೀತಿ ಚಂದಗಡ ಹೊರತುಪಡಿಸಿ ಬೆಳಗಾವಿ ಕರ್ನಾಟಕದ ಮಡಿಲಿಗೆ ಬಂದಿದೆ ಎಂದು ಅವರು ಮಾಹಿತಿ ನೀಡಿದರು.

ಮಹಾರಾಷ್ಟ್ರ ಸರಕಾರ ನಮಗೆ ಅನ್ಯಾಯವಾಗಿದೆ ಎಂದು 1956ರಲ್ಲಿ ಮನವಿ ಸಲ್ಲಿಸಿದಾಗ ಗಡಿ ಭಾಗದ ಕುರಿತು ಕರ್ನಾಟಕ ಮಾತ್ರ ಕೇಂದ್ರಕ್ಕೆ ಗಡಿ ಸಮಸ್ಯೆ ಕುರಿತು ವರದಿ ಸಲ್ಲಿಸಿದೆ ಎಂದು ಮಂಜುನಾಥ್ ತಿಳಿಸಿದರು.

ಮಹಾಜನ್ ಆಯೋಗ ಗಡಿ ಪ್ರದೇಶದ ಕುರಿತು ವರದಿಯನ್ನು 1957ರಲ್ಲಿ ನೀಡಿದಾಗ ಮಹಾರಾಷ್ಟ್ರದವರು ಅದಕ್ಕೆ ಒಪ್ಪಿರಲಿಲ್ಲ. ಕರ್ನಾಟಕದ ಬೀದರ್, ಗುಲ್ಬರ್ಗಾ, ಬಸವಕಲ್ಯಾಣ, ಅಳಂದ, ಕಾರವಾರ, ಹಳಿಯಾಳ, ಬೆಳಗಾವಿ, ಹುಕ್ಕೇರಿ, ಚಿಕ್ಕೋಡಿ, ಹೀಗೆ 814 ಹಳ್ಳಿಗಳು ಮಹಾರಾಷ್ಟ್ರಕ್ಕೆ ಸೇರಿದ್ದು ಎಂದು ಮಹಾರಾಷ್ಟ್ರದವರು ವಾದ ಮಾಡಿದರು ಎಂದು ಅವರು ತಿಳಿಸಿದರು.

814 ಹಳ್ಳಿಗಳು ಎಂದರೆ 1/4 ಭಾಗ ಪ್ರದೇಶ ಕರ್ನಾಟಕದಿಂದ ದೂರ ಉಳಿಯುತ್ತದೆ. ಈ 814 ಹಳ್ಳಿಗಳನ್ನು ಮಹಾರಾಷ್ಟ್ರ ಕೇಳಿದೆ. ಶೇ.70ರಷ್ಟು ಒಂದೇ ಭಾಷೆ ಮಾತನಾಡುವ ಜನರಿದ್ದರೆ ಆ ಭಾಷೆಗೆ ಆ ಪ್ರದೇಶ ಸೇರಬೇಕು. ಆದರೆ ಆ ಎಲ್ಲ ಪ್ರದೇಶಗಳಲ್ಲೂ ಕನ್ನಡಿಗರೆ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ ಎಂದು ಮಂಜುನಾಥ್ ಹೇಳಿದರು.

1956ರ ಮುಂಚೆ ಸಂಸತ್ತಿನಲ್ಲಿ ಚಂದಗಡ ಹೊರತುಪಡಿಸಿ ಉಳಿದೆಲ್ಲಾ ಪ್ರದೇಶಗಳು ಕರ್ನಾಟಕಕ್ಕೆ ಸೇರಿದ್ದು ಎಂದು ಹೇಳಲಾಗಿದೆ. ಒಂದು ಸಲ ತಿರಸ್ಕಾರವಾದರೆ ಅದು ತಿರಸ್ಕಾರನೆ ಆಗುತ್ತದೆ. 1950ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಸ್ಥಾಪನೆ ಮಾಡಿದಾಗ ಬೆಳಗಾವಿ ಭಾಗ ಅದರಡಿ ಬರುತ್ತಿತ್ತು ಎಂದು ಅವರು ತಿಳಿಸಿದರು.

ಯಾವುದೇ ಒಂದು ರಾಜ್ಯವನ್ನು ಭಾಷೆ ಮೇಲೆ ಒಡೆಯಬಾರದು. ಕರ್ನಾಟಕದಲ್ಲಿ ಮರಾಠಿಗರು, ಕನ್ನಡಿಗರು ಸೌಹಾರ್ದತೆಯಿಂದ ಬಾಳುತ್ತಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ತೆಲುಗು ಮಾತನಾಡುವರು ವಾಸಿಸುತ್ತಿದ್ದಾರೆ. ಅದೇ ರೀತಿ ಚಾಮರಾಜನಗರದಲ್ಲಿ ಮಲಯಾಳಂ ಮಾತನಾಡುವ ಜನರು ವಾಸಿಸುತ್ತಾರೆ. ಹಾಗಂತ ಆ ಪ್ರದೇಶಗಳನ್ನು ತಮಿಳುನಾಡು, ಕೇರಳಕ್ಕೆ ಸೇರಿಸಲು ಆಗುವುದಿಲ್ಲ ಮಂಜುನಾಥ್ ತಿಳಿಸಿದರು.

ನಾವು ಬಂದುತ್ವವನ್ನು ಸಾಧಿಸಬೇಕು. 2001ರಲ್ಲಿ ಹಾಗೂ 2011ರಲ್ಲಿ ಗಡಿ ಭಾಷೆಯ ಗಣತಿ ಮಾಡಿಸಿದಾಗ ಕನ್ನಡ ಮಾತನಾಡುವ ಜನರೆ ಹೆಚ್ಚಿಗೆ ಇದ್ದಾರೆ. ಬೆಳಗಾವಿಯ ಪ್ರದೇಶದ ಗಡಿ ಭಾಷಾ ಗಣತಿ ಪ್ರಕಾರ ಕೆಲವೇ ಕೆಲವು ಪ್ರದೇಶಗಳು ಹೊರತುಪಡಿಸಿ ಕನ್ನಡಿಗರೇ ಹೆಚ್ಚಿಗೆ ವಾಸಿಸುವ ಜನರಿದ್ದಾರೆ ಎಂದು ಅವರು ಹೇಳಿದರು.

ನಮ್ಮ ಸರಕಾರ ಹಾಗೂ ನಮ್ಮ ಆಯೋಗ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಏನು ಕ್ರಮ ಕೈಗೊಳ್ಳಬೇಕು ಅದನ್ನು ಖಂಡಿತವಾಗಿಯೂ ಮಾಡುತ್ತದೆ. ನನ್ನ ಅಧಿಕಾರ ವ್ಯಾಪ್ತಿಯಲ್ಲಿ ನಾನು ಕೆಲಸ ಮಾಡಬೇಕು. ಕೋರ್ಟಿಗೆ ಹೋಗುವ ಅಧಿಕಾರ ಅವರಿಗೆ ಇದೆ. ಆದರೆ ತೀರ್ಮಾನ ಮಾಡುವ ಅಧಿಕಾರ ಅವರಿಗೆ ಇಲ್ಲ ಎಂದು ಮಂಜುನಾಥ್ ತಿಳಿಸಿದರು.

ಸಭೆಯಲ್ಲಿ ಗಡಿ ರಕ್ಷಣಾ ಆಯೋಗ ಸದಸ್ಯ ಎಸ್.ಎಂ ಕುಲಕರ್ಣಿ, ನ್ಯಾಯವಾದಿ ಜಿರ್ಲಿ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ನಗರ ಪೊಲೀಸ್ ಆಯುಕ್ತ ಎಸ್.ಎನ್.ಲೋಕೇಶ್ ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹಾಗೂ ಕನ್ನಡಪರ ಹೋರಾಟಗಾರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X