ಚಲಿಸುತ್ತಿದ್ದ ರೈಲಿನಿಂದ ಬಿದ್ದು ಗಾಯಗೊಂಡಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು

ಕಾಸರಗೋಡು, ಫೆ.4: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪದವಿ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
ಉದುಮ ಆರಾಮಂಗಾನ ನಿವಾಸಿ ಇ.ಅಶ್ವಥಿ(18) ಮೃತಪಟ್ಟವರು.
ಮುನ್ನಾಡ್ ನ ಖಾಸಗಿ ಕಾಲೇಜಿನ ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿನಿಯಾಗಿದ್ದ ಅಶ್ವಥಿ ಎರಡು ದಿನಗಳ ಹಿಂದೆ ಮಂಜೇಶ್ವರ ಬಳಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು. ರೈಲು ಹಳಿ ಸಮೀಪ ಗಂಭೀರ ಸ್ಥಿತಿಯಲ್ಲಿ ಬಿದ್ದಿದ್ದ ಈಕೆಯನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
Next Story





