ಹೂಡೆ ಸಾಲಿಹಾತ್ ಕಾಲೇಜಿನಲ್ಲಿ ಮತದಾರ ದಿನಾಚರಣೆ

ಉಡುಪಿ, ಫೆ.4: ತೋನ್ಸೆ ಹೂಡೆಯ ಸಾಲಿಹಾತ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ಮತದಾರ ದಿನಾಚರಣೆ ಆಚರಿಸಲಾಯಿತು.
ವಿದ್ಯಾರ್ಥಿಗಳಿಗೆ ಮತದಾನ ದಿನಾಚರಣೆಯ ಪ್ರತಿಜ್ಞಾ ವಿಧಿ ಭೋದಿಸಿದ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಸ್ಲಮ್ ಹೈಕಾಡಿ ಮಾತನಾಡಿ, ಪ್ರತಿಯೊಬ್ಬ ಭಾರತೀಯ ಪ್ರಜೆ ಮತದಾನ ಪ್ರಕ್ರಿಯೆಯಲ್ಲಿ ಸಕ್ರೀಯವಾಗಿ ಭಾಗವಹಿಸು ವುದರ ಮೂಲಕ ಈ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ಬಲಗೊಳಿಸ ಬೇಕು. ಕೇವಲ ಚುನಾವಣೆ ಸಮಯದಲ್ಲಿ ಮತದಾನ ಮಾಡಿ ತಮ್ಮ ಕರ್ತವ್ಯ ಮುಗಿಯಿತೆಂದು ಭಾವಿಸದೆ ನಂತರ ದಿನಗಳಲ್ಲಿ ದೇಶದ ಆಗುಹೋಗುಗಳ ಬಗ್ಗೆ ಅವಲೋಕಿಸಬೇಕು. ಆಗ ಮಾತ್ರ ನಮ್ಮ ಆಯ್ಕೆಯನ್ನು ನಿರ್ಣಯಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಸಬೀನಾ ಅಧ್ಯಕ್ಷತೆ ವಹಿಸಿದ್ದರು. ವೇದಿಕೆ ಯಲ್ಲಿ ಉಪಪ್ರಾಂಶುಪಾಲ ದಿವ್ಯಾ ಪೈ, ವಿದ್ಯಾರ್ಥಿ ಪ್ರತಿನಿಧಿಗಳಾದ ರಾಫಿಯಾ ಬಳ್ಳಾರಿ, ಶಘುಫ್ತ ಮೊದಲಾದವರು ಉಪಸ್ಥಿತರಿದ್ದರು. ಬಿಬಿ ಅಯಿಶಾ ಪ್ರಾರ್ಥನೆಗೈದರು. ಶಾಝಿನ್ ಕಾರ್ಯಕ್ರಮ ನಿರೂಪಿಸಿದರು.
Next Story





