Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೀರಿಗಾಗಿ ಹೋರಾಟ: ಹೋರಾಟಗಾರರ ವಿರುದ್ಧದ...

ನೀರಿಗಾಗಿ ಹೋರಾಟ: ಹೋರಾಟಗಾರರ ವಿರುದ್ಧದ 51 ಪ್ರಕರಣಗಳು ಹಿಂಪಡೆಯಲು ಸಚಿವ ಸಂಪುಟ ತೀರ್ಮಾನ

ವಾರ್ತಾಭಾರತಿವಾರ್ತಾಭಾರತಿ4 Feb 2020 8:06 PM IST
share
ನೀರಿಗಾಗಿ ಹೋರಾಟ: ಹೋರಾಟಗಾರರ ವಿರುದ್ಧದ 51 ಪ್ರಕರಣಗಳು ಹಿಂಪಡೆಯಲು ಸಚಿವ ಸಂಪುಟ ತೀರ್ಮಾನ

ಬೆಂಗಳೂರು, ಫೆ.4: ಕಾವೇರಿ, ಎತ್ತಿನಹೊಳೆ, ಕಳಸಾ ಬಂಡೂರಿ ಸೇರಿದಂತೆ ಇನ್ನಿತರ ಹೋರಾಟಗಾರರ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 51 ಪ್ರಕರಣಗಳನ್ನು ಹಿಂಪಡೆಯಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹೋರಾಟಗಾರರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸಲಾಗಿದೆಯೇ ಹೊರತು, ಬಿಜೆಪಿ ಅಥವಾ ಆರೆಸೆಸ್ಸ್ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲಾಗಿದೆ ಎಂಬುದು ಆಧಾರ ರಹಿತವಾದದ್ದು ಎಂದರು.

ಹಾಸನ ಜಿಲ್ಲೆಯ ಹಳೆಬೀಡು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎತ್ತಿನಹೊಳೆ ಯೋಜನೆ ಹೋರಾಟಗಾರರ ವಿರುದ್ಧ ಪ್ರಕರಣ, ಸವದತ್ತಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳಸಾ ಬಂಡೂರಿ ಹೋರಾಟಗಾರರ ಮೇಲಿನ ಪ್ರಕರಣ, ಮಂಡ್ಯ ಜಿಲ್ಲೆಯಲ್ಲಿ ಹಿರಿಯ ಹೋರಾಟಗಾರ ಜಿ.ಮಾದೇಗೌಡ ಸೇರಿದಂತೆ ಕಾವೇರಿ ಹಿತ ರಕ್ಷಣಾ ಸಮಿತಿಯ ಹೋರಾಟಗಾರರ ವಿರುದ್ಧ ದಾಖಲಾಗಿದ್ದ 35 ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ಮಾಧು ಸ್ವಾಮಿ ತಿಳಿಸಿದರು.

2015ರಲ್ಲಿ ಗೋಕರ್ಣದಲ್ಲಿ ರಾಘವೇಶ್ವರ ಭಾರತಿ ಸ್ವಾಮಿ ವಿರುದ್ಧ ಅಶ್ಲೀಲ ಸಿಡಿ ಬಿಡುಗಡೆ ಮಾಡಿ ಅವರ ಘನತೆಗೆ ಧಕ್ಕೆ ತಂದ ಪ್ರಕರಣದ ಹಿನ್ನೆಲೆಯಲ್ಲಿ ಪ್ರಕರಣ ವಾಪಸ್ ಪಡೆಯಲು ಹಿಂದಿನ ಸರಕಾರ ಮುಂದಾಗಿತ್ತು. ಆದರೆ, ನಮ್ಮ ಸರಕಾರ ಈಗ ಆ ಪ್ರಕರಣವನ್ನು ಮುಂದುವರಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿದೆ ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿರುವ ಮುಖ್ಯ ಚುನಾವಣಾಧಿಕಾರಿ ಕಚೇರಿ(ನಿರ್ವಾಚನಾ ನಿಲಯ) ಆವರಣದಲ್ಲಿ ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕೆ 13.50 ಕೋಟಿ ರೂ.ಮಂಜೂರು ಮಾಡಲಾಗಿದೆ. ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಅಗತ್ಯ ಇರುವ ಜಿಲ್ಲಾಸ್ಪತ್ರೆಗಳಿಗೆ 120 ಆಂಬುಲೆನ್ಸ್‌ಗಳನ್ನು ಖರೀದಿಸಲು 32 ಕೋಟಿ ರೂ.ಬಿಡುಗಡೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಅನುಮತಿ ಅನುಮೋದನೆ ನೀಡಲಾಗಿದೆ ಎಂದು ಮಾಧುಸ್ವಾಮಿ ತಿಳಿಸಿದರು.

ಶಿಕ್ಷಣ ಇಲಾಖೆಯ ನಲಿ ಕಲಿ ಕಾರ್ಯಕ್ರಮದ ಅಡಿಯಲ್ಲಿ ಕನ್ನಡ ಮಾಧ್ಯಮದ ಒಂದರಿಂದ ಮೂರನೇ ತರಗತಿ ಹಾಗೂ ಉರ್ದು ಮಾಧ್ಯಮದ ಒಂದರಿಂದ ಎರಡನೆ ತರಗತಿಯ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ಒದಗಿಸಲು 27 ಕೋಟಿ ರೂ.ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

ಬೆಂಗಳೂರಿನ ಬೌರಿಂಗ್ ಮತ್ತು ಲೇಡಿಕರ್ಜನ್ ವೈದ್ಯಕೀಯ ವಿದ್ಯಾಲಯ ಮತ್ತು ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ 223 ಕೋಟಿ ರೂ.ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ಬೀದರ್ ಜಿಲ್ಲೆಯಲ್ಲಿ ವಿಶೇಷ ಕಾರಾಗೃಹ ನಿರ್ಮಾಣ ಮಾಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಮಾಧುಸ್ವಾಮಿ ತಿಳಿಸಿದರು.

ಸರಕಾರಿ ಮತ್ತು ಖಾಸಗಿ ಐಟಿಐ ಸಂಸ್ಥೆಗಳಲ್ಲಿ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 73 ಕೋಟಿ ರೂ.ವೆಚ್ಚದಲ್ಲಿ ಉಚಿತ ಲ್ಯಾಪ್‌ಟಾಪ್ ವಿತರಿಸಲು ನಿರ್ಧರಿಸಲಾಗಿದೆ. ರಾಯಚೂರಿನಲ್ಲಿ ಪ್ರತ್ಯೇಕ ವಿಶ್ವವಿದ್ಯಾಲಯ ಸ್ಥಾಪನೆಗೂ ಸಚಿವ ಸಂಪುಟ ಸಭೆಯಲ್ಲಿ ಮಂಜೂರಾತಿ ನೀಡಲಾಗಿದೆ ಎಂದು ಅವರು ಹೇಳಿದರು.

ಶಿವಮೊಗ್ಗ ವಿಮಾನ ನಿಲ್ದಾಣ ಅಭಿವೃದ್ಧಿಯ ಹೊಣೆಯನ್ನು ರೈಟ್ಸ್ ಇಂಡಿಯಾ ಪ್ರೈ.ಲಿ.ಸಂಸ್ಥೆಗೆ ಗುತ್ತಿಗೆ ನೀಡಲು ನಿರ್ಧರಿಸಲಾಗಿದ್ದು, ವಿಮಾನ ನಿಲ್ದಾಣ ಕಾಮಗಾರಿಗಳಿಗೆ 220 ಕೋಟಿ ರೂ.ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ಮಾಧುಸ್ವಾಮಿ ತಿಳಿಸಿದರು.

ನಾಲ್ಕನೆ ಶನಿವಾರದ ರಜೆ ಅನ್ವಯವಾಗದ ಸರಕಾರಿ ನೌಕರರಿಗೆ 15 ಸಾಂದರ್ಭಿಕ ರಜೆ ಮಂಜೂರು ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮಾಧುಸ್ವಾಮಿ ಹೇಳಿದರು.

ದಾಸೋಹ ಯೋಜನೆಯಡಿ ಅಕ್ಕಿ, ಗೋಧಿ ವಿತರಣೆ

ದಾಸೋಹ ಯೋಜನೆಯಡಿ 351 ಸಂಸ್ಥೆಗಳಿಗೆ ಅಕ್ಕಿ ಮತ್ತು ಗೋಧಿ ವಿತರಿಸಲಾಗುತ್ತಿತ್ತು. ಇದನ್ನು ಖಾಸಗಿ ಶಾಲೆಗಳಿಗೆ ನಿರ್ಬಂಧಿಸಲಾಗಿತ್ತು. ಇದೀಗ 18 ಕೋಟಿ ರೂ.ಸಬ್ಸಿಡಿ ನೀಡಿ ಅಕ್ಕಿ ಮತ್ತು ಗೋಧಿ ವಿತರಣೆ ಮುಂದುವರೆಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದರಿಂದ 32,700 ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

-ಜೆ.ಸಿ.ಮಾಧುಸ್ವಾಮಿ, ಕಾನೂನು ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X