Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೆಥೋಲಿಕ್ ಮಹಾ ಸಮಾವೇಶದ ನಿರ್ಣಯ...

ಕೆಥೋಲಿಕ್ ಮಹಾ ಸಮಾವೇಶದ ನಿರ್ಣಯ ಈಡೇರಿಕೆಗೆ ಆಗ್ರಹ: ಪಾವ್ಲ್ ರೊಲ್ಫಿ ಡಿಕೋಸ್ತಾ

ವಾರ್ತಾಭಾರತಿವಾರ್ತಾಭಾರತಿ5 Feb 2020 5:47 PM IST
share

ಮಂಗಳೂರು, ಫೆ. 5: ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಚರ್ಚ್ ಆವರಣದಲ್ಲಿ ಫೆ.2ರಂದು ನಡೆದ ಕೆಥೋಲಿಕ್ ಮಹಾ ಸಮಾವೇಶದಲ್ಲಿ ಕೈಗೊಂಡಿರುವ ನಿರ್ಣಯಗಳನ್ನು ಫೆ.22ರ ಬಳಿಕ ಮುಖ್ಯಮಂತ್ರಿ ಮತ್ತು ಪ್ರತಿಪಕ್ಷದ ನಾಯಕರಿಗೆ ಸಲ್ಲಿಸಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಗುವುದು ಎಂದು ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ್ ಇದರ ಅಧ್ಯಕ್ಷ ಪಾವ್ಲ್ ರೊಲ್ಫಿ ಡಿಕೋಸ್ತಾ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಅವರು ಮಂಗಳೂರು, ಬೆಳ್ತಂಗಡಿ, ಪುತ್ತೂರು ಧರ್ಮ ಪ್ರಾಂತಗಳ ಕೆಥೋಲಿಕ್ ಕ್ರೈಸ್ತರನ್ನು ಒಗ್ಗೂಡಿಸಿ ನಡೆಸಲಾದ ಈ ಸಮಾವೇಶದಲ್ಲಿ 35,000 ಮಂದಿ ಭಾಗವಹಿಸಿದ್ದರು. ಕರ್ನಾಟಕ ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪಿಸಿ 500 ಕೋ. ರೂ. ಅನುದಾನ ನೀಡುವುದು, ಆಪ್ತ ಸಮಾಲೋಚನ ಕೇಂದ್ರ ಸ್ಥಾಪನೆಗೆ ನಿವೇಶನ ಮತ್ತು ಅನುದಾನ ಒದಗಿಸುವುದು, ಡ್ರಗ್ಸ್ ಮತ್ತು ಅಪಾಯಕಾರಿ ಪಬ್‌ಜಿ ಮೊಬೈಲ್ ಗೇಮ್ಸ್ ನಿಷೇಧಿಸುವುದು, ಕ್ರೈಸ್ತರ ಜನಸಂಖ್ಯೆ ಆಧಾರದಲ್ಲಿ ವಿಧಾನಸಭೆ ಮತ್ತು ಲೋಕಸಭೆಗಳಲ್ಲಿ ಸ್ಪರ್ಧಿಸಲು ರಾಜಕೀಯ ಪಕ್ಷಗಳು ಅವಕಾಶ ಕಲ್ಪಿಸಬೇಕು ಎಂಬ ಹಕ್ಕೊತ್ತಾಯದ ನಿರ್ಣಯಗಳನ್ನು ಸಮಾವೇಶ ಅಂಗೀಕರಿಸಿದೆ. ಅವುಗಳನ್ನು ಸರಕಾರಕ್ಕೆ ಸಲ್ಲಿಸಲಾಗುವುದು ಎಂದರು.

ಮೂರು ಧರ್ಮ ಪ್ರಾಂತಗಳ ಬಿಷಪರಾದ ರೈ.ರೆ.ಡಾ.ಪೀಟರ್ ಪಾವ್ಲ್ ಸಲ್ಡಾನ್ಹಾ, ರೈ.ರೆ.ಡಾ. ಲಾರೆನ್ಸ್ ಮುಕ್ಕುಝಿ ಮತ್ತು ರೈ.ರೆ.ಡಾ. ಗೀವರ್ಗೀಸ್ ಮಾರ್ ಮಕಾರಿಯೋಸ್ ಸಮ್ಮುಖ ನಿರ್ಣಯ ಅಂಗೀಕರಿಸಲಾಗಿದೆ. ಹಾಗಾಗಿ ಸರಕಾರ ಮತ್ತು ಪ್ರತಿಪಕ್ಷಗಳು ಇದರತ್ತ ಗಮನ ಹರಿಸಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಮಹಾ ಸಮಾವೇಶ ಸಮಿತಿಯ ಸಂಚಾಲಕ ಜೋಯಲ್ ಮೆಂಡೊನ್ಸಾ, ಐಸಿವೈಎಂ ನಿರ್ದೇಶಕ ಫಾ. ರೊನಾಲ್ಡ್ ಪ್ರಕಾಶ್ ಡಿಸೋಜ, ಮಹಿಳಾ ಮಂಡಳಿಯ ನಿರ್ದೇಶಕ ಫಾ.ಫ್ರಾನ್ಸಿಸ್ ಡಿಸೋಜ, ಐಸಿವೈಎಂ ಅಧ್ಯಕ್ಷ ಲಿಯೋನ್ ಸಲ್ದಾನ್ಹಾ, ಮಾಧ್ಯಮ ಸಲಹೆಗಾರ ಇ. ಫೆರ್ನಾಂಡಿಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X