ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಚನೆ: ಸಿಎಂ ಯಡಿಯೂರಪ್ಪ ಸ್ವಾಗತ

ಬೆಂಗಳೂರು, ಫೆ. 5: ಅಯೋಧ್ಯೆಯ ಶ್ರೀರಾಮ ಜನ್ಮ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣ ಹಾಗೂ ಸಂಬಂಧಿಸಿದ ವಿಷಯಗಳ ಮೇಲ್ವಿಚಾರಣೆಗಾಗಿ ಸುಪ್ರೀಂಕೋರ್ಟ್ ಮಾರ್ಗಸೂಚಿಯಂತೆ ಕೇಂದ್ರ ಸರಕಾರ ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸ್ಥಾಪಿಸುವ ತೀರ್ಮಾನ ಕೈಗೊಂಡಿರುವುದನ್ನು ಮುಖ್ಯಮಂತ್ರಿ ಯಡಿಯೂರಪ್ಪ ಸ್ವಾಗತಿಸಿದ್ದಾರೆ.
ಟ್ರಸ್ಟ್ ರಚಿಸುವ ತೀರ್ಮಾನ ಕೈಗೊಂಡಿರುವುದಕ್ಕಾಗಿ ಪ್ರಧಾನಿ ಮೋದಿ ಅವರನ್ನು ವೈಯಕ್ತಿಕವಾಗಿ ಹಾಗೂ ಕರ್ನಾಟಕ ರಾಜ್ಯದ ಜನತೆಯ ಪರವಾಗಿ ಅಭಿನಂದಿಸುತ್ತೇನೆ. ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಚಿಸುವ ಐತಿಹಾಸಿಕ ನಿರ್ಧಾರದ ಮೂಲಕ ಪ್ರಧಾನಿ ಮೋದಿಜಿ ಅವರು ಭಾರತವಷ್ಟೇ ಅಲ್ಲ, ಜಗದಗಲದ ಲಕ್ಷಾಂತರ ಜನರ ಭಾವನೆಗಳಿಗೆ ಗೌರವ ಸಲ್ಲಿಸಿದ್ದಾರೆ. ಈ ಪುಣ್ಯ ಕಾರ್ಯದಲ್ಲಿ ಕರ್ನಾಟಕವು ಸಂಪೂರ್ಣವಾಗಿ ಕೇಂದ್ರದ ಜೊತೆಗಿದೆ ಎಂದು ಯಡಿಯೂರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





