Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು ಉತ್ತರ ವಿವಿಯಲ್ಲಿ ‘ನಾಲೆಡ್ಜ್...

ಬೆಂಗಳೂರು ಉತ್ತರ ವಿವಿಯಲ್ಲಿ ‘ನಾಲೆಡ್ಜ್ ಸಿಟಿ’: ಡಿಸಿಎಂ ಡಾ.ಅಶ್ವಥ್ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ5 Feb 2020 8:08 PM IST
share
ಬೆಂಗಳೂರು ಉತ್ತರ ವಿವಿಯಲ್ಲಿ ‘ನಾಲೆಡ್ಜ್ ಸಿಟಿ’: ಡಿಸಿಎಂ ಡಾ.ಅಶ್ವಥ್ ನಾರಾಯಣ

ಬೆಂಗಳೂರು, ಫೆ.5: ಬೆಂಗಳೂರು ಉತ್ತರ ವಿಶ್ವವಿದ್ಯಾಲಯವನ್ನು ಮಾದರಿ ವಿಶ್ವವಿದ್ಯಾಲಯವನ್ನಾಗಿಸುವ ನಿಟ್ಟಿನಲ್ಲಿ ಹಲವು ಹೊಸ ಪ್ರಯತ್ನಗಳು ಆಗಲಿದ್ದು, ಕ್ಯಾಂಪಸ್‌ನಲ್ಲಿ ‘ನಾಲೆಡ್ಜ್ ಸಿಟಿ’(ಜ್ಞಾನ ನಗರಿ) ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಉನ್ನತ ಶಿಕ್ಷಣ ಸಚಿವರು ಆಗಿರುವ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಹೇಳಿದ್ದಾರೆ.

ಬುಧವಾರ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಅಮರಾವತಿ ಗ್ರಾಮದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕ್ಯಾಂಪಸ್ ನಿರ್ಮಾಣಕ್ಕೆ ನಿಗದಿಯಾಗಿರುವ ಸ್ಥಳವನ್ನು ಪರಿಶೀಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ಭಾಗದ ಜನರ ಬಹುದಿನಗಳ ಅಪೇಕ್ಷೆ ಆದಷ್ಟು ಬೇಗ ಈಡೇರುವುದು. ವಿಶ್ವವಿದ್ಯಾಲಯಕ್ಕೆ ಸದ್ಯ 110 ಎಕರೆ ಜಾಗ ಲಭ್ಯವಾಗಿದ್ದು, 60 ಎಕರೆ ಖರೀದಿಗೆ ಪ್ರಕ್ರಿಯೆಗಳು ನಡೆದಿವೆ. ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿರುವ ಈ ಪ್ರದೇಶದಲ್ಲೇ ‘ನಾಲೆಡ್ಜ್ ಸಿಟಿ’ ಸ್ಥಾಪಿಸುವ ಉದ್ದೇಶ ಇದೆ ಎಂದು ಅವರು ಹೇಳಿದರು.

ವಿಶ್ವವಿದ್ಯಾಲಯಗಳಲ್ಲಿ ಸದಾ ಹೊಸತನ ಇರಬೇಕು. ಕಾಲ ಕಾಲಕ್ಕೆ ತಕ್ಕ ಬದಲಾವಣೆಗಳನ್ನು ತರಬೇಕು. ಈ ನಿಟ್ಟಿನಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯವನ್ನು ಮಾದರಿ ವಿಶ್ವವಿದ್ಯಾಲಯವನ್ನಾಗಿಸಲು ಹೊಸ ಪ್ರಯತ್ನಗಳು ಆಗಲಿವೆ ಎಂದು ಅಶ್ವಥ್ ನಾರಾಯಣ ತಿಳಿಸಿದರು.

ಅಮರಾವತಿ ಗ್ರಾಮಕ್ಕೆ ಭೇಟಿ ನೀಡುವ ಮುನ್ನ ದೇವನಹಳ್ಳಿಯ ಸರಕಾರಿ ಪದವಿ ಕಾಲೇಜಿಗೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ, ಅಲ್ಲಿನ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ಜೊತೆ ಸಮಾಲೋಚನೆ ನಡೆಸಿ, ಅವರ ಕುಂದು ಕೊರತೆಗಳನ್ನು ಆಲಿಸಿದರು.

ಬಸ್ ವ್ಯವಸ್ಥೆಗೆ ತುರ್ತು ಆದೇಶ: ದೇವನಹಳ್ಳಿಯಿಂದ ಕಾಲೇಜಿಗೆ ಬಿಎಂಟಿಸಿ ಬಸ್ ಸೌಲಭ್ಯ ಇಲ್ಲ ಎಂಬ ವಿದ್ಯಾರ್ಥಿಗಳ ಸಮಸ್ಯೆಗೆ ಕೂಡಲೇ ಸ್ಪಂದಿಸಿದ ಅಶ್ವತ್ಥ ನಾರಾಯಣ, ಬಿಎಂಟಿಸಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಕರೆ ಮಾಡಿ ಈ ಸಂಬಂಧ ತುರ್ತು ಕ್ರಮ ಕೈಗೊಳ್ಳಲು ಸೂಚಿಸಿದರು.

ಲ್ಯಾಪ್‌ಟಾಪ್ ಹಾಗೂ ಕೌಶಲ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಆಯೋಜಿಸಬೇಕೆಂಬ ವಿದ್ಯಾರ್ಥಿಗಳ ಬೇಡಿಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಶ್ವತ್ಥ ನಾರಾಯಣ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ವಿ. ಮುನಿಯಪ್ಪ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆಂಪರಾಜು ಸೇರಿಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X