Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೊನಾ ವೈರಸ್ ಬಗ್ಗೆ ಆತಂಕ ಬೇಡ : ಸಚಿವ...

ಕೊರೊನಾ ವೈರಸ್ ಬಗ್ಗೆ ಆತಂಕ ಬೇಡ : ಸಚಿವ ಕೋಟ

ವಾರ್ತಾಭಾರತಿವಾರ್ತಾಭಾರತಿ5 Feb 2020 8:52 PM IST
share
ಕೊರೊನಾ ವೈರಸ್ ಬಗ್ಗೆ ಆತಂಕ ಬೇಡ : ಸಚಿವ ಕೋಟ

ಮಂಗಳೂರು, ಫೆ. 5: ಚೀನಾ ಸೇರಿದಂತೆ 20ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕೊರೊನಾ ವೈರಸ್ ಸೋಂಕು ವ್ಯಾಪಿಸಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಸಾರ್ವಜನಿಕರು ಯಾವುದೇ ಭಯ, ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ಆದರೆ, ಮುಂಜಾಗರೂಕತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಕೊರೊನಾ ವೈರಸ್ ತುರ್ತು ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನಿಂದ ತಗುಲಿದ ಯಾವುದೇ ಪ್ರಕರಣ ದಾಖಲಾಗಿಲ್ಲ. ಆದರೂ ಜಿಲ್ಲೆಯ ಪಕ್ಕದ ಕೇರಳ ರಾಜ್ಯದಲ್ಲಿ ಇದು ಕಂಡು ಬಂದಿರುವ ಹಿನ್ನೆಲೆ ಜಿಲ್ಲೆಯಲ್ಲಿಯೂ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಸಾರ್ವಜನಿಕರು ಯಾವುದೇ ಸಂಶಯ, ಮಾಹಿತಿ ಹಾಗೂ ನೆರವಿಗೆ ಆರೋಗ್ಯ ಇಲಾಖೆಯ ಸಹಾಯವಾಣಿ 104ಕ್ಕೆ ಕರೆ ಮಾಡಬಹುದು. ಜಿಲ್ಲಾಡಳಿತವು ಎಲ್ಲ ರೀತಿಯಿಂದಲೂ ಸಂಪೂರ್ಣ ಸನ್ನದ್ಧವಾಗಿದೆ ಎಂದು ಸಚಿವರು ತಿಳಿಸಿದರು.

‘ಫೆ.4ರಂದು ನವಮಂಗಳೂರು ಬಂದರ್ ಟ್ರಸ್ಟ್‌ಗೆ (ಎನ್‌ಎಂಪಿಟಿ) ವಿದೇಶಿ ಪ್ರವಾಸಿಗರ ಹಡಗು ಬಂದಿದ್ದು, ಇದರಲ್ಲಿ ಬಂದಿದ್ದ ಚೀನಾದ ಮೂವರು ನಾಗರಿಕರಿಗೆ ಹಡಗಿನಿಂದ ಹೊರಗೆ ಬರಲು ಅವಕಾಶ ನೀಡಿಲ್ಲ’ ಎಂದು ಸಭೆಗೆ ಎನ್‌ಎಂಪಿಟಿ ಅಧಿಕಾರಿಗಳು ತಿಳಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ರಾವ್ ಮಾತನಾಡಿ, ವೆನ್ಲಾಕ್ ಆಸ್ಪತ್ರೆಯಲ್ಲಿ ಕೊರೊನಾ ವೈರಸ್ ಸೋಂಕು ಚಿಕಿತ್ಸೆಗಾಗಿ 10 ವಿಶೇಷ ಹಾಸಿಗೆ ಸಿದ್ಧತೆ ಮಾಡಲಾಗಿದೆ. ದಿನದ 24 ಗಂಟೆಯೂ ಇದರ ನಿರ್ವಹಣೆಗೆ ವೈದ್ಯರಿಗೆ, ಸಿಬ್ಬಂದಿಗೆ ತರಬೇತಿ ನೀಡಲಾಗಿದೆ ಎಂದರು.

ಡಾ.ಸತೀಶ್ಚಂದ್ರ ಮಾತನಾಡಿ, ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಹಾಗೂ ಸೀನುವಾಗ ಕರವಸ್ತ್ರ ಹಿಡಿದುಕೊಳ್ಳುವುದು ಈ ರೋಗ ನಿಯಂತ್ರಣಕ್ಕೆ ಸಹಾಯಕವಾಗಿದೆ ಎಂದರು. ಸಭೆಯಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ಸಂಧ್ಯಾ, ಡಾ.ನವೀನ್ ಚಂದ್ರ, ಡಾ.ರಾಜೇಶ್, ವಿವಿಧ ಇಲಾಖಾಧಿಕಾರಿಗಳು, ಮಂಗಳೂರು ವಿಮಾನ ನಿಲ್ದಾಣ, ಎನ್‌ಎಂಪಿಟಿ ಅಧಿಕಾರಿಗಳು ಉಪಸ್ಥಿತರಿದ್ದರು.

ರೈಲು, ವಿಮಾನ ನಿಲ್ದಾಣದಲ್ಲಿ ತಪಾಸಣೆ

ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ವಿಶೇಷವಾಗಿ ಅಂತಾರಾಷ್ಟ್ರೀಯ ಪ್ರಯಾಣಿಕರ ಆರೋಗ್ಯ ತಪಾಸಣೆಗೆ ವ್ಯವಸ್ಥೆ ಮಾಡಲಾಗಿದೆ. ಚೀನಾದಿಂದ ಮಂಗಳೂರಿಗೆ ನೇರ ವಿಮಾನ ಯಾನ ಇಲ್ಲದೇ ಇರುವುದರಿಂದ ಕೊರೊನಾ ವೈರಸ್ ಹಂಚಿಕೆ ಬಗ್ಗೆ ಆತಂಕವಿಲ್ಲ. ಆದಾಗ್ಯೂ ವಿಶೇಷವಾಗಿ ಕೆಲ ದಿನ ಹಿಂದೆ ಚೀನಾದಿಂದ ಜಿಲ್ಲೆಗೆ ಬಂದ ಇಬ್ಬರ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಯಾವುದೇ ರೋಗ ಲಕ್ಷಣ ಅವರಲ್ಲಿ ಕಂಡು ಬಂದಿಲ್ಲ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X