Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫೆ.7ರಿಂದ 39ನೇ ಎಬಿವಿಪಿ ರಾಜ್ಯ ಸಮ್ಮೇಳನ

ಫೆ.7ರಿಂದ 39ನೇ ಎಬಿವಿಪಿ ರಾಜ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ5 Feb 2020 9:46 PM IST
share
ಫೆ.7ರಿಂದ 39ನೇ ಎಬಿವಿಪಿ ರಾಜ್ಯ ಸಮ್ಮೇಳನ

ಮಂಗಳೂರು, ಫೆ.5: ಸುಮಾರು 20 ವರ್ಷಗಳ ಬಳಿಕ ಮಂಗಳೂರು ನಗರದಲ್ಲಿ 39ನೇ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ನ (ಎಬಿವಿಪಿ) ರಾಜ್ಯ ಸಮ್ಮೇಳನ ಜರುಗಲಿದೆ. ನಗರದ ಪುರಭವನದಲ್ಲಿ ಫೆ.7ರ ಅಪರಾಹ್ನ 4 ಗಂಟೆಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್‌ ನಾರಾಯಣ ಸಮ್ಮೇಳನವನ್ನು ಉದ್ಘಾಟಿಸಲಿದ್ದು, ಫೆ.9ರಂದು ಸಮ್ಮೇಳನ ಸಮಾರೋಪಗೊಳ್ಳಲಿದೆ ಎಂದು ಸ್ವಾಗತ ಸಮಿತಿಯ ಅಧ್ಯಕ್ಷ ಕೆ.ಸಿ. ನಾಯಕ್ ತಿಳಿಸಿದ್ದಾರೆ.

ನಗರದ ಖಾಸಗಿ ಹೊಟೇಲ್‌ನಲ್ಲಿ ಬುಧವಾರ ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಘಾಟನಾ ಸಮಾರಂಭದಲ್ಲಿ ಎಬಿವಿಪಿ ಮಾಜಿ ರಾಷ್ಟ್ರಾಧ್ಯಕ್ಷ, ನಾಗಲ್ಯಾಂಡ್ ಮಾಜಿ ರಾಜ್ಯಪಾಲ ಪಿ.ಬಿ.ಆಚಾರ್ಯ ಅಧ್ಯಕ್ಷತೆ ವಹಿಸುವರು. ಎಬಿವಿಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಆಶಿಷ್ ಚೌಹಾಣ್ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ಮುಖ್ಯಅತಿಥಿಗಳಾಗಿ ಭಾಗವಹಿಸುವರು. ಅಪರಾಹ್ನ 3:30ಕ್ಕೆ ಕರ್ನಾಟಕ ಜಾನಪದ ಅಕಾಡಮಿಯ ಅಧ್ಯಕ್ಷೆ ಮಂಜಮ್ಮ ಜೋಗತಿ ಪ್ರದರ್ಶಿನಿಯನ್ನು ಉದ್ಘಾಟಿಸುವರು ಎಂದು ಸ್ವಾಗತ ಸಮಿತಿ ಅಧ್ಯಕ್ಷರು ಹೇಳಿದರು.

ರಾಜ್ಯ ಸಮ್ಮೇಳನದಲ್ಲಿ ಸುಮಾರು 1,500 ವಿದ್ಯಾರ್ಥಿ-ಅಧ್ಯಾಪಕ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ವಿದ್ಯಾರ್ಥಿಗಳು, ಅಧ್ಯಾಪಕರು, ಶಿಕ್ಷಣ ತಜ್ಞರು, ಶೈಕ್ಷಣಿಕ ಆಡಳಿತಗಾರರು ಸಮ್ಮೇಳನದಲ್ಲಿ ಪಾಲ್ಗೊಂಡು ಶೈಕ್ಷಣಿಕ ಕ್ಷೇತ್ರದಲ್ಲಿನ ಸಾಮಾಜಿಕ ಸಮಸ್ಯೆ, ಸವಾಲುಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಿದ್ದಾರೆ ಎಂದು ಕೆ.ಸಿ.ನಾಯಕ್ ವಿವರಿಸಿದರು.

ಸಮ್ಮೇಳನದ ಭಾಗವಾಗಿ ಫೆ.8ರಂದು ಪೂರ್ವಾಹ್ನ 11 ಗಂಟೆಗೆ ‘ವರ್ತಮಾನ ಭಾರತ’ ಎಂಬ ವಿಷಯದ ಕುರಿತಾಗಿ ಎಬಿವಿಪಿ ನಿಕಟಪೂರ್ವ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸುನೀಲ್  ಭಾಷಣ ಮಾಡುವರು. ಫೆ.9ರ ಪೂರ್ವಾಹ್ನ 9 ಗಂಟೆಗೆ ಎಬಿವಿಪಿ ನಿಕಟಪೂರ್ವ ಸಹ ಸಂಘಟನಾ ಕಾರ್ಯದರ್ಶಿ ಕೆ.ಎನ್. ರಘುನಂದನ್ ‘ನಮ್ಮ ಕಾರ್ಯಪದ್ಧತಿ-ಸ್ವರೂಪ ಮತ್ತು ಔಚಿತ್ಯ’ ವಿಷಯವಾಗಿ ವಿಶೇಷ ಉಪನ್ಯಾಸ ನೀಡುವರು ಎಂದು ಕೆ.ಸಿ.ನಾಯಕ್ ನುಡಿದರು.

ಫೆ.9ರ ಪೂರ್ವಾಹ್ನ 11 ಗಂಟೆಗೆ ‘ಶಿಕ್ಷಣ, ರಾಷ್ಟ್ರ ಮತ್ತು ಸಂಸ್ಕೃತಿ’ ಕುರಿತಾಗಿ ಅವಲೋಕನ ನಡೆಯಲಿದೆ. ಎಬಿವಿಪಿ ಮಾಜಿ ರಾಜ್ಯಾಧ್ಯಕ್ಷ ಚ.ನ.ಶಂಕರ ರಾವ್, ಕನ್ನಡ ಸಾಹಿತ್ಯ ಅಕಾಡಮಿ ಅಧ್ಯಕ್ಷ ಡಾ.ಬಿ.ವಿ. ವಸಂತಕುಮಾರ್ ಮತ್ತು ಎಬಿವಿಪಿ ರಾಜ್ಯ ಉಪಾಧ್ಯಕ್ಷ ರೋಹಿಣಾಕ್ಷ ಶಿರ್ಲಾಲು ಅವಲೋಕನದಲ್ಲಿ ಭಾಗವಹಿಸುವರು ಎಂದು ಅವರು ಹೇಳಿದರು.

ಫೆ.8ರ ಸಂಜೆ 5 ಗಂಟೆಗೆ ಆಯಾ ಪ್ರದೇಶಗಳ ಸಾಂಸ್ಕೃತಿಕ ವಿಶಿಷ್ಟತೆ-ಭವ್ಯತೆ ಸಾರುವ ಶೋಭಾಯಾತ್ರೆ ಮತ್ತು ಸಾರ್ವಜನಿಕ ಸಭೆ ನಡೆಯಲಿದೆ. ನಗರದ ಕಾರ್‌ಸ್ಟ್ರೀಟ್‌ನಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಎಬಿವಿಪಿ ರಾಜ್ಯ ಕಾರ್ಯದರ್ಶಿ ಹರ್ಷನಾರಾಯಣ ಪ್ರಧಾನ ಭಾಷಣ ಮಾಡಲಿರುವರು. ಎಬಿವಿಪಿ ರಾಜ್ಯ ನಾಯಕರು ಸಭೆಯನ್ನು ಉದ್ದೇಶಿಸಿ ಮಾತನಾಡಲಿರುವರು ಎಂದು ಕೆ.ಸಿ.ನಾಯಕ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಲೆಕ್ಕಪರಿಶೋಧಕ ಶಾಂತಾರಾಮ ಶೆಟ್ಟಿ, ಕೋಶಾಧಿಕಾರಿ ರವಿ ಮಂಡ್ಯ, ಎಬಿವಿಪಿ ಮಂಗಳೂರು ನಗರ ಅಧ್ಯಕ್ಷೆ ಭಾರತಿ ಸಂಜಯ ಪ್ರಭು ಮತ್ತು ನಗರ ಕಾರ್ಯದರ್ಶಿ ಮಣಿಕಂಠ ಕಳಸ ಉಪಸ್ಥಿತರಿದ್ದರು.

ಹಾಜಬ್ಬರಿಗೆ ಸನ್ಮಾನ

ಉದ್ಘಾಟನಾ ಸಮಾರಂಭದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ ಅವರನ್ನು ಸನ್ಮಾನಿಸಲಾಗುವುದು. ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ್‌ ನಾರಾಯಣ ಸನ್ಮಾನವನ್ನು ನೆರವೇರಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X