ಒಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ವಿರುದ್ಧ ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಪ್ರಕರಣ

ಶ್ರೀನಗರ,ಫೆ.6: ರಾಜ್ಯದ ವಿಶೇಷ ಸ್ಥಾನಮಾನ ರದ್ದುಗೊಂಡಾಗಿನಿಂದ ಬಂಧನದಲ್ಲಿರುವ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಉಮರ್ ಅಬ್ದುಲ್ಲಾ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಅವರ ವಿರುದ್ಧ ಗುರುವಾರ ಸಾರ್ವಜನಿಕ ಸುರಕ್ಷಾ ಕಾಯ್ದೆ (ಪಿಎಸ್‌ಎ)ಯನ್ನು ಹೇರಲಾಗಿದೆ ಎಂದು ಅಧಿಕಾರಿಗಳು ಇಲ್ಲಿ ತಿಳಿಸಿದರು.
ಪಿಎಸ್‌ಎ ಅಡಿ ಯಾವುದೇ ವ್ಯಕ್ತಿಯನ್ನು ವಿಚಾರಣೆ ಅಥವಾ ಆರೋಪವಿಲ್ಲದೆ ಎರಡು ವರ್ಷಗಳವರೆಗೆ ಬಂಧನದಲ್ಲಿಡಬಹುದಾಗಿದೆ. ಇದರಡಿ ಬಂಧನಕ್ಕಾಗಿ ಯಾವುದೇ ವಾರಂಟ್,ನಿರ್ದಿಷ್ಟ ಆರೋಪಗಳ ಅಗತ್ಯವಿಲ್ಲ.
ಪಿಡಿಪಿ ಮುಖ್ಯಸ್ಥೆ ಮೆಹಬೂಬ ಅವರನ್ನು ದಿಗ್ಬಂಧನದಲ್ಲಿರಿಸಲಾಗಿರುವ ಬಂಗ್ಲೆಗೆ ಪೊಲೀಸರೊಂದಿಗೆ ತೆರಳಿದ ಮ್ಯಾಜಿಸ್ಟ್ರೇಟ್‌ರು ಅವರಿಗೆ ಆದೇಶವನ್ನು ಜಾರಿಗೊಳಿಸಿದರು ಎಂದು ಅಧಿಕಾರಿಗಳು ತಿಳಿಸಿದರು.
ಇನ್ನೋರ್ವ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರ ವಿರುದ್ಧ ಈಗಾಗಲೇ ಪಿಎಸ್‌ಎ ಹೇರಲಾಗಿದೆ.
Next Story





