ಶಾಹೀನ್ ಬಾಗ್ ಪ್ರತಿಭಟನೆ ವಿರುದ್ಧ ಅರ್ಜಿ: ಸೋಮವಾರಕ್ಕೆ ವಿಚಾರಣೆ ನಿಗದಿಪಡಿಸಿದ ಸುಪ್ರೀಂಕೋರ್ಟ್

ಹೊಸದಿಲ್ಲಿ, ಫೆ.7: ಶಾಹೀನ್ ಬಾಗ್ ಪ್ರತಿಭಟನೆಯ ವಿರುದ್ಧ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಫೆಬ್ರವರಿ 10ರಂದು ಸೋಮವಾರ ನಡೆಸಲಾಗುವುದು. ಶುಕ್ರವಾರವೇ ಈ ಅರ್ಜಿಯ ವಿಚಾರಣೆಗೆ ಕೈಗೆತ್ತಿಕೊಂಡು ದಿಲ್ಲಿಯ ವಿಧಾನಸಭಾ ಚುನಾವಣೆಯ ಮೇಲೆ ‘ಪ್ರಭಾವ’ ಬೀರಲು ಇಷ್ಟಪಡುವುದಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಶನಿವಾರ ಚುನಾವಣೆ ನಡೆಯಲಿದೆ.
‘‘ಸಮಸ್ಯೆ ಇದೆ ಎಂಬ ಬಗ್ಗೆ ನಮಗೆ ಅರ್ಥವಾಗುತ್ತದೆ. ಈ ಸಮಸ್ಯೆಯನ್ನು ಹೇಗೆ ಬಗೆಹರಿಸಬಹುದೆಂಬ ಕುರಿತು ನಾವು ಗಮನ ಹರಿಸಲಿದ್ದೇವೆ. ನಾವು ಈ ಕುರಿತ ಅರ್ಜಿಯನ್ನು ಸೋಮವಾರ ವಿಚಾರಣೆಗೆ ಕೈಗೆತ್ತಿಕೊಳ್ಳುತ್ತೇವೆ’’ ಎಂದು ಜಸ್ಟಿಸ್ ಎಸ್.ಕೆ. ಕೌಲ್ ಹಾಗೂ ಕೆ.ಎ. ಜೋಸೆಫ್ ಅವರಿದ್ದ ನ್ಯಾಯಪೀಠ ತಿಳಿಸಿದೆ.
Next Story





