Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಡವರ ಪರವಾಗಿಲ್ಲದ ಮಾಧ್ಯಮ ಬಾಗಿಲು...

ಬಡವರ ಪರವಾಗಿಲ್ಲದ ಮಾಧ್ಯಮ ಬಾಗಿಲು ಮುಚ್ಚಲಿದೆ: ರವೀಂದ್ರ ಭಟ್ಟ

► 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ7 Feb 2020 4:48 PM IST
share
ಬಡವರ ಪರವಾಗಿಲ್ಲದ ಮಾಧ್ಯಮ ಬಾಗಿಲು ಮುಚ್ಚಲಿದೆ: ರವೀಂದ್ರ ಭಟ್ಟ

ಕಲಬುರಗಿ, ಫೆ.7: ರೈತರ, ಕಾರ್ಮಿಕರ, ಶೋಷಿತರ, ಬಡವರ, ನಿರ್ಗತಿಕರ ಪರವಾಗಿ ಕಾರ್ಯನಿರ್ವಹಿಸದ ಮಾಧ್ಯಮಗಳು ಬಹುಬೇಗ ಬಾಗಿಲು ಹಾಕಿಕೊಳ್ಳುವುದು ನಿಶ್ಚಿತವೆಂದು ಹಿರಿಯ ಪತ್ರಕರ್ತ ರವೀಂದ್ರ ಭಟ್ಟ ಅಭಿಪ್ರಾಯಿಸಿದ್ದಾರೆ.

ಶುಕ್ರವಾರ ಶ್ರೀ ವಿಜಯ ಪ್ರಧಾನ ವೇದಿಕೆಯಲ್ಲಿ ಮಾಧ್ಯಮ: ಸವಾಲುಗಳು ಕುರಿತ ಗೋಷ್ಟಿಯಲ್ಲಿ ಮಾತನಾಡಿದ ಅವರು, ಜನರ ದನಿಗೆ ವೇದಿಕೆ ಕಲ್ಪಿಸುವುದು ಮಾಧ್ಯಮಗಳ ಜವಾಬ್ದಾರಿ. ಇದನ್ನು ಪಾಲಿಸದಿದ್ದರೆ ಜನರು ಪತ್ರಿಕೆ, ಟಿವಿ ಮಾಧ್ಯಮಗಳನ್ನು ಬಿಟ್ಟು, ಸಾಮಾಜಿಕ ಜಾಲತಾಣಗಳತ್ತ ಮುಖ ಮಾಡುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಕನ್ನಡ ಮಾಧ್ಯಮಗಳ ಬಗ್ಗೆ ಮಾತ್ರ ಮಾತನಾಡುವುದಾದರೆ ಕನ್ನಡ ಭಾಷೆಗೂ ಮಾಧ್ಯಮಕ್ಕೂ ಬಿಡಿಸಲಾರದ ನಂಟಿದೆ. ಕನ್ನಡ ಉಳಿದರೆ ಮಾತ್ರ ಕನ್ನಡ ಪತ್ರಿಕೆ, ಮಾಧ್ಯಮಗಳು ಉಳಿಯಲು ಸಾಧ್ಯ. ಹೀಗಾಗಿ ಕನ್ನಡ ಭಾಷೆಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಜೊತೆಯಾಗಿ ಸಾಗಬೇಕಾಗಿದೆ ಎಂದು ಅವರು ಹೇಳಿದರು.

ಇವತ್ತಿನ ಆಧುನಿಕ ಯುಗದಲ್ಲಿ ಮೊಬೈಲ್‍ಗಳೆ ಎಲ್ಲವೂ ಆಗಿದೆ. ಇಂತಹ ಹೊತ್ತಿನಲ್ಲಿ ಮಾಧ್ಯಮಗಳು ವಿಶ್ವಾಸರ್ಹತೆಯ ಕಡೆಗೆ ಹೆಚ್ಚು ಒತ್ತು ಕೊಡಬೇಕು. ಒಂದು ಅಧ್ಯಯನದ ಪ್ರಕಾರ ಟಿವಿ ಚಾನೆಲ್‍ಗಳು ಬಂದ ಮೇಲೆ ಪತ್ರಿಕೆಗಳನ್ನು ಓದುವವರ ಸಂಖ್ಯೆ ಹೆಚ್ಚಾಗಿವೆ ಎನ್ನಲಾಗುತ್ತಿದೆ. ಒಂದು ವೇಳೆ ಪತ್ರಿಕೆಗಳು ವಿಶ್ವಾಸರ್ಹತೆಯನ್ನು ಕಳೆದುಕೊಂಡರೆ ಅದರಿಂದಲೂ ದೂರ ಸರಿಯಲು ಹೆಚ್ಚು ಕಾಲ ಬೇಕಾಗಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.

ಹಿರಿಯ ಪತ್ರಕರ್ತ ಕೆ.ಎನ್.ಚನ್ನೇಗೌಡ ಮಾತನಾಡಿ, ಪತ್ರಿಕೆ ಮಾಧ್ಯಮಕ್ಕಿರುವ ಬಹುದೊಡ್ಡ ಸವಾಲು ಟಿವಿ ಮಾಧ್ಯಮವಲ್ಲ. ಬದಲಿಗೆ, ಸಾಮಾಜಿಕ ಜಾಲತಾಣಗಳಾಗಿವೆ. ಎಲ್ಲರ ಕೈಯಲ್ಲಿ ಮೊಬೈಲ್ ಇರುವುದರಿಂದ ಫೇಸ್‍ಬುಕ್, ವಾಟ್ಸಾಪ್‍ಗೆ ಚಟಕ್ಕೆ ಬೀಳುತ್ತಿದ್ದಾರೆ. ಇವರನ್ನು ಪುನಃ  ಪತ್ರಿಕೆಗಳತ್ತ ಮುಖ ಮಾಡುವಂತೆ ಮಾಡಬೇಕಾದದ್ದು ನಮ್ಮೆಲ್ಲರಿಗಿರುವ ದೊಡ್ಡ ಜವಾಬ್ದಾರಿಯೆಂದು ತಿಳಿಸಿದರು.

ಪತ್ರಿಕಾಲಯಗಳಲ್ಲಿ ನಿಪುಣ ಕೆಲಸಗಾರರ ಕೊರತೆ, ಸೇವಾ ಭದ್ರತೆ ಇಲ್ಲದಿರುವುದು ಹಾಗೂ ಪತ್ರಿಕಾ ವಿತರಕರ ಕೊರತೆಯೂ ಕೂಡ ಪತ್ರಿಕಾ ಕ್ಷೇತ್ರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇದೆಲ್ಲವನ್ನು ನಿಭಾಯಿಸುವ ನಿಟ್ಟಿನಲ್ಲಿ ನಾವೆಲ್ಲರು ಒಟ್ಟಾಗಿ ಪರಿಹಾರವನ್ನು ಕಂಡುಕೊಳ್ಳಬೇಕಾಗಿದೆ ಎಂದು ಅವರು ಹೇಳಿದರು. ಈ ವೇಳೆ ಪತ್ರಕರ್ತರಾದ ರಮಾಕಾಂತ್, ಕೋಡಿಬೆಟ್ಟು ರಾಜಲಕ್ಷ್ಮಿ, ಸುಭಾಷ್ ಹೂಗಾರ್, ಹರಿಪ್ರಕಾಶ್ ಕೋಣೆಮನೆ ಮತ್ತಿತರರಿದ್ದರು.

ಕೇಂದ್ರ ಸರಕಾರ ಮುದ್ರಣ ಕಾಗದದ ಮೇಲೆ ಹೆಚ್ಚಿನ ತೆರಿಗೆ ವಿಧಿಸಿದೆ. ಇದರಿಂದ ಪ್ರಕಾಶಕರು ಹೆಚ್ಚು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಶೂನ್ಯ ತರಿಗೆಯನ್ನು ವಿಧಿಸುವ ನಿಟ್ಟಿನಲ್ಲಿ ನಾವೆಲ್ಲರೂ  ಸರಕಾರದ ಮೇಲೆ ಒತ್ತಡ ಹಾಕಬೇಕಿದೆ ಹಾಗೂ ಜಾಹಿರಾತು ಕೂಡು ಕಡಿಮೆ ಆಗುತ್ತಿರುವುದು ಪತ್ರಿಕೆಗಳು ನಷ್ಟಕ್ಕೆ ಸಿಲುಕಿವೆ. ಈ ನಿಟ್ಟಿನಲ್ಲಿ ಪತ್ರಿಕೆಗಳ ಜಾಹಿರಾತಿಗೆ ಸಂಬಂಧಿಸಿದಂತೆ ಹೊಸ ಕಾನೂನು ರೂಪಿಸಬೇಕಾದ ಅಗತ್ಯವಿದೆ.

- ಕೆ.ಎನ್.ಚನ್ನೇಗೌಡ, ಹಿರಿಯ ಪತ್ರಕರ್ತ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X