Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ತ್ಯಾಜ್ಯ ಸಂಸ್ಕರಣಾ ಘಟಕ...

ಮಂಗಳೂರು: ತ್ಯಾಜ್ಯ ಸಂಸ್ಕರಣಾ ಘಟಕ ರಚಿಸಿಲ್ಲವೇ ? ಹಾಗಿದ್ದರೆ ಫೆ. 10ರಿಂದ ದಂಡ ತೆರಲು ಸಿದ್ಧರಾಗಿ

ಮನಪಾ ಆಯುಕ್ತರ ಖಡಕ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ7 Feb 2020 6:09 PM IST
share
ಮಂಗಳೂರು: ತ್ಯಾಜ್ಯ ಸಂಸ್ಕರಣಾ ಘಟಕ ರಚಿಸಿಲ್ಲವೇ ? ಹಾಗಿದ್ದರೆ ಫೆ. 10ರಿಂದ ದಂಡ ತೆರಲು ಸಿದ್ಧರಾಗಿ

ಮಂಗಳೂರು, ಫೆ. 7: ನಗರದ ಅಪಾರ್ಟ್‌ಮೆಂಟ್ ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ ತ್ಯಾಜ್ಯ ಸಂಸ್ಕರಣೆ ವ್ಯವಸ್ಥೆಯನ್ನು ಕಲ್ಪಿಸಲಾಗದಿದ್ದಲ್ಲಿ ಅಥವಾ ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ರಚಿಸದಿದ್ದಲ್ಲಿ ಫೆ. 10ರಿಂದ ಅನ್ವಯವಾಗುವಂತೆ ದಂಡ ವಿಧಿಸುವ ಪ್ರಕ್ರಿಯೆ ಆರಂಭಿಸುವುದಾಗಿ ಮನಪಾ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಎಚ್ಚರಿಕೆ ನೀಡಿದ್ದಾರೆ.

ಮನಪಾ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ನಗರದ ಎಲ್ಲಾ ಅಪಾರ್ಟ್‌ಮೆಂಟ್‌ಗಳಿಗೆ ಅಸೋಸಿಯೇಶನ್ ಮೂಲಕ ಹಾಗೂ ವಾಣಿಜ್ಯ ಸಂಸ್ಥೆಗಳಿಗೆ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ 2019ರ ಅಕ್ಟೋಬರ್ ಅಂತ್ಯದೊಳಗೆ ಘನತ್ಯಾಜ್ಯ ಘಟಕವನ್ನು ರಚಿಸುವಂತೆ ಸೂಚನೆ ನೀಡಲಾಗಿತ್ತು ಎಂದರು.

ಪ್ರಥಮ ಹಂತವಾಗಿ 1948 ಅಪಾರ್ಟ್‌ಮೆಂಟ್‌ಗಳಿಗೆ ನೋಟೀಸು ಕೂಡಾ ನೀಡಲಾಗಿದೆ. ಡಿಸೆಂಬರ್ 3ರಂದು ಎಲ್ಲಾ ಸಂಘ ಸಂಸ್ಥೆಗಳೊಂದಿಗೆ ಸಭೆ ಕರೆದು ಡಿಸೆಂಬರ್ ಅಂತ್ಯದೊಳಗೆ ತ್ಯಾಜ್ಯ ಸಂಸ್ಕರಣಾ ಘಟಕ ರಚಿಸುವಂತೆ ಮರು ಸೂಚನೆ ನೀಡಲಾಗಿತ್ತು. ಕೆಲವು ಅಪಾರ್ಟ್‌ಮೆಂಟ್ ಅಸೋಸಿಯೇಶನ್‌ಗಳು ತ್ಯಾಜ್ಯ ಸಂಸ್ಕರಣೆ ಮಾಡುವ ವ್ಯವಸ್ಥೆ ಕಲ್ಪಿಸಿದ್ದಾರೆ. ಆದರೆ ಹೆಚ್ಚಿನ ಅಪಾರ್ಟ್‌ಮೆಂಟ್ ಅಸೋಸಿಯೇಶನ್‌ಗಳು ಹಸಿ ತ್ಯಾಜ್ಯ ಸಂಸ್ಕರಣೆಯ ಘಟಕ ಸ್ಥಾಪಿಸಲು ಆಸಕ್ತಿ ತೋರುವುದು ಕಂಡು ಬಂದಿಲ್ಲ. ಮಾತ್ರವಲ್ಲದೆ ಪಾಲಿಕೆ ವತಿಯಿಂದ ಕಟ್ಟಡ ಪರವಾನಿಗೆ ನೀಡುವ ಸಮಯದಲ್ಲಿ ಘನತ್ಯಾಜ್ಯ ಸಂಸ್ಕರಣಾ ಘಟಕವನ್ನು ಸ್ಥಾಪಿಸಿ ನಿರ್ವಹಣೆ ಮಾಡಲು ಕಡ್ಡಾಯಗೊಳಿಸಿದ್ದರೂ ಬಿಲ್ಡರ್ ಹಾಗೂ ಅಪಾರ್ಟ್‌ಮೆಂಟ್ ಅಸೋಸಿಯೇಶನ್‌ಗಳು ಗಂಭೀರವಾಗಿ ಪರಿಗಣಿಸಿಲ್ಲ. ಹಾಗಾಗಿ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ಸೂಚನೆಯಂತೆ ಹಾಗೂ ಘನತ್ಯಾಜ್ಯ ನಿರ್ವಹಣೆ ಹಾಗೂ ವ್ಯವಸ್ಥಾಪನೆ ನಿಯಮಗಳ 2016ರಂತೆ ಭಾರೀ ತ್ಯಾಜ್ಯ ಉತ್ಪಾದಕರು ಸಂಸ್ಕರಣಾ ವ್ಯವಸ್ಥೆಯನ್ನು ಅನುಷ್ಠಾನಗೊಳಿಸದಿರುವವರ ವಿರುದ್ಧ ಫೆ. 10ರಿಂದ ಆರಂಭದಲ್ಲಿ 25,000 ರೂ. ದಂಡ ವಿಧಿಸಲಾಗುವುದು. ಎರಡನೆ ಬಾರಿಗೆ 50,000 ರೂ. ದಂಡ ಹಾಗೂ ಮೂರನೆ ಬಾರಿಗೆ ತ್ಯಾಜ್ಯ ಉತ್ಪಾದಕರ ವಿರುದ್ಧ ಪ್ರಕರಣ ದಾಖಲಿಸಲು ಮನಪಾ ನಿರ್ಧರಿಸಿದೆ ಎಂದವರು ಹೇಳಿದರು.

ಮನಪಾ ಜಂಟಿ ಆಯುಕ್ತರಾದ ಡಾ. ಸಂತೋಷ್ ಕುಮಾರ್, ಆರೋಗ್ಯ ಅಧಿಕಾರಿ ಮಂಜಯ್ಯ ಶೆಟ್ಟಿ, ಪರಿಸರ ಅಭಿಯಂತರ ಮಧು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X