ಕಾಸರಗೋಡು : ವ್ಯಾನ್ ಢಿಕ್ಕಿ; ಬೈಕ್ ಸವಾರ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

ಕಾಸರಗೋಡು : ಬೈಕ್ ಮತ್ತು ವ್ಯಾನ್ ನಡುವೆ ಉಂಟಾದ ಅಪಘಾತದಲ್ಲಿ ಬೈಕ್ ಸವಾರ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟು ಸಹ ಸವಾರ ಗಾಯಗೊಂಡ ಘಟನೆ ಬಂದ್ಯೋಡು ಸಮೀಪದ ಮುಟ್ಟ ಎಂಬಲ್ಲಿ ಶುಕ್ರವಾರ ನಡೆದಿದೆ.
ಮೃತರನ್ನು ಕಾಸರಗೋಡು ಸಿರಿಬಾಗಿಲು ನಿವಾಸಿ ಮುಹಮ್ಮದ್ ಶಾಬಿಲ್ (22) ಎಂದು ಗುರುತಿಸಲಾಗಿದೆ. ಈತ ಮಂಗಳೂರು ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ. ಜೊತೆಗಿದ್ದ ಆಶಿಮ್ (22) ಎಂಬಾತ ಗಾಯಗೊಂಡಿದ್ದು, ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Next Story





