Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿಧಾನ ಪರಿಷತ್ ಚುನಾವಣೆ: ಡಿಸಿಎಂ ಸವದಿಗೆ...

ವಿಧಾನ ಪರಿಷತ್ ಚುನಾವಣೆ: ಡಿಸಿಎಂ ಸವದಿಗೆ ತಲೆನೋವಾದ ಮೈತ್ರಿ ಅಭ್ಯರ್ಥಿ

ಕುತೂಹಲ ಸೃಷ್ಟಿಸಿದ ವಿರೋಧ ಪಕ್ಷಗಳ ಒಗ್ಗಟ್ಟಿನ ಮಂತ್ರ

ವಾರ್ತಾಭಾರತಿವಾರ್ತಾಭಾರತಿ7 Feb 2020 8:24 PM IST
share
ವಿಧಾನ ಪರಿಷತ್ ಚುನಾವಣೆ: ಡಿಸಿಎಂ ಸವದಿಗೆ ತಲೆನೋವಾದ ಮೈತ್ರಿ ಅಭ್ಯರ್ಥಿ

ಬೆಂಗಳೂರು, ಫೆ. 7: ವಿಧಾನಸಭೆ ಸದಸ್ಯರಾಗಿ ರಿಝ್ವಾನ್ ಅರ್ಶದ್ ಆಯ್ಕೆಯಾದ ಹಿನ್ನೆಲೆಯಲ್ಲಿ ತೆರವಾಗಿರುವ ಸ್ಥಾನಕ್ಕೆ ವಿಧಾನ ಪರಿಷತ್ತಿನ ಸದಸ್ಯರಾಗಿ ಅವಿರೋಧ ಆಯ್ಕೆ ಬಯಸಿದ್ದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಕನಸು ಭಗ್ನಗೊಂಡಿದೆ.

ಫೆ.17ರಂದು ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಕಾಂಗ್ರೆಸ್-ಜೆಡಿಎಸ್ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಬಿ.ಆರ್.ಅನಿಲ್‌ ಕುಮಾರ್ ಅಂತಿಮವಾಗಿ ಉಪಚುನಾವಣಾ ಕಣದಲಿದ್ದಾರೆ. ಸೂಚಕರ ಸಹಿ ಇಲ್ಲದಿರುವ ಕಾರಣ ಕೆ.ಪದ್ಮರಾಜನ್ ನಾಮಪತ್ರ ತಿರಸ್ಕರಿಸಲಾಗಿದೆ ಎಂದು ಪರಿಷತ್ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ.

ಲಕ್ಷ್ಮಣ ಸವದಿ ಮತ್ತು ಅನಿಲ್ ಕುಮಾರ್ ಮಧ್ಯೆ ನೇರ ಪೈಪೋಟಿ ಏರ್ಪಟ್ಟಿದ್ದು, ಅವಿರೋಧ ಆಯ್ಕೆ ಬಯಸಿದ್ದ ಲಕ್ಷ್ಮಣ ಸವದಿಗೆ ಇದೀಗ ಚಿಂತೆ ಶುರುವಾಗಿದೆ. ಸಚಿವ ಸಂಪುಟಕ್ಕೆ ಅರ್ಹರ ಸೇರ್ಪಡೆ ಬೆನ್ನಲ್ಲೆ ಬಿಜೆಪಿಯೊಳಗೆ ಎದ್ದಿರುವ ಅಸಮಾಧಾನ ಹೊಗೆಯನ್ನು ತನ್ನ ಅನುಕೂಲಕ್ಕೆ ಬಳಸಿಕೊಳ್ಳಬಹುದೆಂಬ ಲೆಕ್ಕಾಚಾರದಲ್ಲಿ ಮೈತ್ರಿ ಅಭ್ಯರ್ಥಿ ಇದ್ದಾರೆಂದು ಗೊತ್ತಾಗಿದೆ.

ವಿಧಾನಸಭೆಯಲ್ಲಿ ಒಬ್ಬ ನಾಮನಿರ್ದೇಶಿತ ಸದಸ್ಯರು ಸೇರಿ ಸದ್ಯ 223 ಸಂಖ್ಯಾಬಲ ಇದೆ. ಒಂದೇ ಸ್ಥಾನಕ್ಕೆ ಚುನಾವಣೆ ನಡೆಯುತ್ತಿರುವುದರಿಂದ ಮತಮೌಲ್ಯದ ಲೆಕ್ಕಾಚಾರದ ಬದಲು ಗರಿಷ್ಠ ಸಂಖ್ಯೆ ಮತಗಳನ್ನು ಪಡೆದವರು ಜಯ ಗಳಿಸಲಿದ್ದಾರೆ. ಲಕ್ಷ್ಮಣ ಸವದಿ ಅವರ ಸುಲಭ ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದ್ದು, ಫೆ. 17ರಂದು ನಡೆಯಲಿರುವ ಉಪಚುನಾವಣೆ ಗೆಲುವು ಯಾರದು ಎಂದು ತೀರ್ಮಾನಿಸಲಿದೆ.

ಗೌಪ್ಯ ಮತದಾನ ನಡೆಯುತ್ತಿರುವುದರಿಂದ ಶಾಸಕರು ಸೇರಿದಂತೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದೆ. ‘ಅಡ್ಡ ಮತದಾನ’ವೂ ಸುಲಭವಾಗಿದೆ. ಹೀಗಾಗಿಯೇ ಮೈತ್ರಿ ಮುಖಂಡರು ತೆರೆಮರೆಯಲ್ಲೆ ಸರಕಾರಕ್ಕೆ ಮರ್ಮಾಘಾತ ನೀಡಲು ಸಿದ್ದತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ.

ಫೆ.17ರಿಂದಲೇ ವಿಧಾನಸಭೆ ಜಂಟಿ ಅಧಿವೇಶನವೂ ಆರಂಭಗೊಳ್ಳಲಿದ್ದು, ಮಾರ್ಚ್ 2ರಿಂದ 1 ತಿಂಗಳ ಕಾಲ ಬಜೆಟ್ ಅಧಿವೇಶನವೂ ನಡೆಯಲಿದೆ. ಹೀಗಾಗಿ ಆಡಳಿತಾರೂಢ ಬಿಜೆಪಿ ಸರಕಾರವನ್ನು ಅಡ್ಡಕತ್ತರಿಯಲ್ಲಿ ಸಿಲುಕಿಸಲು ವಿರೋಧ ಪಕ್ಷಗಳು ಒಗ್ಗಟ್ಟಿನ ಮಂತ್ರಕ್ಕೆ ಶರಣಾಗಿದ್ದು, ಯಾರಿಗೆ ಗೆಲುವು ಸಿಗಲಿದೆ ಎಂಬ ಕುತೂಹಲ ಸೃಷ್ಟಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X