Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಲ್ಕೇ ತಿಂಗಳಲ್ಲಿ ಲೋಕಸಭಾ ಚುನಾವಣೆಯ...

ನಾಲ್ಕೇ ತಿಂಗಳಲ್ಲಿ ಲೋಕಸಭಾ ಚುನಾವಣೆಯ ವಿವಿಪ್ಯಾಟ್ ಮತಚೀಟಿಗಳ ನಾಶ: ಆರ್ ಟಿಐಯಿಂದ ಬಹಿರಂಗ

ನಿಯಮ ಉಲ್ಲಂಘಿಸಿದ ಚುನಾವಣಾ ಆಯೋಗ

ವಾರ್ತಾಭಾರತಿವಾರ್ತಾಭಾರತಿ7 Feb 2020 9:40 PM IST
share
ನಾಲ್ಕೇ ತಿಂಗಳಲ್ಲಿ ಲೋಕಸಭಾ ಚುನಾವಣೆಯ ವಿವಿಪ್ಯಾಟ್ ಮತಚೀಟಿಗಳ ನಾಶ: ಆರ್ ಟಿಐಯಿಂದ ಬಹಿರಂಗ

► ಸಂಶಯ ಸೃಷ್ಟಿಸಿದ ತರಾತುರಿಯ ನಡೆ

ಹೊಸದಿಲ್ಲಿ,ಫೆ.7: "ಚುನಾವಣೆಯಲ್ಲಿ ಬಳಕೆಯಾದ ಅಥವಾ ಮುದ್ರಿತವಾದ ವಿವಿಪ್ಯಾಟ್ ಕಾಗದದ ಸ್ಲಿಪ್ ‌ಗಳನ್ನು ಒಂದು ವರ್ಷದವರೆಗೆ ಉಳಿಸಿಕೊಳ್ಳಬೇಕು ಹಾಗೂ ಆನಂತರ ಅದನ್ನು ನಾಶಪಡಿಸಬಹುದಾಗಿದೆ’’ ಎಂದು 1961ರ ಚುನಾವಣಾ ನಿಯಮಾವಳಿಗಳ ತಿದ್ದುಪಡಿ ಕಾನೂನು 94 (ಬಿ) ಹೇಳುತ್ತದೆ. ಆದರೆ ಭಾರತೀಯ ಚುನಾವಣಾ ಆಯೋಗವು 2019ರ ಲೋಕಸಭಾ ಚುನಾವಣೆಗೆ ಬಳಸಿದ್ದ ಮುದ್ರಿತ ವಿವಿಪ್ಯಾಟ್ ಕಾಗದ ಸ್ಲಿಪ್ ‌ಗಳನ್ನು ಈಗಾಗಲೇ ನಾಶಪಡಿಸಿದೆಯೆಂದು ಸುದ್ದಿಜಾಲ ತಾಣ Thequint.com ಪ್ರಕಟಿಸಿದ ಪೂನಂ ಅಗರ್ವಾಲ್ ಅವರ ವಿಶೇಷ ವರದಿಯು ಬಹಿರಂಗಪಡಿಸಿದೆ. 2019ರ ಮೇನಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಕೇವಲ ನಾಲ್ಕು ತಿಂಗಳೊಳಗೆ ವಿವಿ ಪ್ಯಾಟ್‌ನ ಕಾಗದಪತ್ರಗಳನ್ನು ನಾಶಪಡಿಸಲಾಯಿತೆಂದು ಅದು ಹೇಳಿದೆ.

ಈ ಬಗ್ಗೆ ಮಾಹಿತಿ ಹಕ್ಕು ಕಾಯ್ದೆಯಡಿ Thequint.com ಸಲ್ಲಿಸಿದ ಅರ್ಜಿಗೆ ಉತ್ತರಿಸಿದ ದಿಲ್ಲಿ ಚುನಾವಣಾ ಆಯೋಗದ ಸಾರ್ವಜನಿಕ ಮಾಹಿತಿ ಅಧಿಕಾರಿಯವರು ‘ ವಿವಿ ಪ್ಯಾಟ್‌ನ ಮತದೃಢೀಕರಣ ಪತ್ರಗಳನ್ನು ವಿಲೇವಾರಿ ಮಾಡಲಾಗಿದೆಯೆಂದು ತಿಳಿಸಿರುವುದಾಗಿ ಅದು ಹೇಳಿದೆ.

  ವಿವಿಪ್ಯಾಟ್‌ನ ಮುದ್ರಿತ ಕಾಗದಪತ್ರಗಳನ್ನು ವಿಲೇವಾರಿ ಮಾಡಬೇಕೆಂದು ಕೇಂದ್ರೀಯ ಚುನಾವಣಾ ಆಯೋಗವು 2019ರ ಸೆಪ್ಟೆಂಬರ್ 24ರಂದು ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ನೀಡಿರುವ ಆದೇಶದ ಪ್ರತಿಯನ್ನು ಕೂಡಾ ದಿಲ್ಲಿ ಚುನಾವಣಾ ಆಯೋಗವು ತನ್ನ ಆರ್‌ಟಿಐ ಅರ್ಜಿಯೊಂದಿಗೆ ಲಗತ್ತಿಸಿದೆ.

 ಲೋಕಸಭಾ ಚುನಾವಣೆ ನಡೆದ ಕೇವಲ ನಾಲ್ಕು ತಿಂಗಳುಗಳಲ್ಲಿ ಚುನಾವಣಾ ಆಯೋಗವು ಆತುರಾತುರಾಗಿ ಯಾಕೆ ವಿವಿಪ್ಯಾಟ್‌ನ ಮುದ್ರಿತ ಕಾಗದಚೀಟಿಗಳನ್ನು ನಾಶಪಡಿಸಿರುವ ಬಗ್ಗೆ Thequint.com ಸಂದೇಹ ವ್ಯಕ್ತಪಡಿಸಿದೆ. ಮತದಾರರ ಮತಚಲಾವಣೆಗೆ ನಿರ್ಣಾಯಕ ಪುರಾವೆಯಾಗಿರುವ ಈ ಕಾಗದಪತ್ರಗಳನ್ನು ಒಂದು ವರ್ಷದ ಅವಧಿಗೆ ಮುನ್ನವೇ ನಾಶಪಡಿಸಿರುವುದು ಚುನಾವಣಾ ನಿರ್ವಹಣೆಯ ನಿಯಮಗಳಿಗೆ ವಿರುದ್ಧವಾಗಿದೆ ಎಂದು ಅದು ಹೇಳಿದೆ.

 ಇಡೀ ಚುನಾವಣಾ ಪ್ರಕ್ರಿಯೆಯನ್ನು ತಿರುಚಿರುವ ಅಥವಾ ದುರ್ಬಳಕೆ ಮಾಡಿರುವ ಸಾಧ್ಯತೆಯನ್ನು ಪತ್ತೆಹಚ್ಚಲು ವಿವಿಪ್ಯಾಟ್‌ನ ಮತದೃಢೀಕರಣ ಪತ್ರಗಳು ಯಾವ ರೀತಿ ನಿರ್ಣಾಯಕ ಪುರಾವೆಗಳಾಗಬಲ್ಲವು ಎಂದು Thequint.com ಈ ಮೊದಲು ವರದಿ ಮಾಡಿತ್ತು.

 ರಾಜಸ್ಥಾನ, ಹಿಮಾಚಲಪ್ರದೇಶ, ಮಣಿಪುರ, ಮೇಘಾಲಯ, ಆಂಧ್ರಪ್ರದೇಶಗಳಲ್ಲಿ ಇವಿಎಂ ಹಾಗೂ ವಿವಿಪ್ಯಾಟ್‌ನ ಮತಏಣಿಕೆಯಲ್ಲಿ ಸಾಮ್ಯತೆಯಿಲ್ಲದಿರುವ ಕನಿಷ್ಠ ಎಂಟು ಪ್ರಕರಣಗಳನ್ನು Thequint.com ಪತ್ತೆ ಹಚ್ಚಿತ್ತು. ಚುನಾವಣಾ ಆಯೋಗ ಕೂಡಾ ಈ ಪ್ರಕರಣಗಳ ಬಗ್ಗೆ 2019ರಲ್ಲಿ ತನಿಖೆಗೆ ಆದೇಶಿಸಿತ್ತು.

ಒಂದು ವೇಳೆ ಈ ಎಂಟು ಪ್ರಕರಣಗಳಿಗೆ ಸಂಬಂಧಿಸಿ ವಿವಿ ಪ್ಯಾಟ್ ಮತದೃಢೀಕರಣ ಚೀಟಿಗಳನ್ನು ನಾಶಪಡಿಸಿದ್ದಲ್ಲಿ, ತನಿಖೆಯನ್ನು ಹೇಗೆ ಮುಂದುವರಿಸಲು ಸಾಧ್ಯವೆಂದು Thequint.com ವರದಿಯಲ್ಲಿ ಪ್ರಶ್ನಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X