ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮಟ್ಟಾರ್ ರತ್ನಾಕರ ಹೆಗ್ಡೆ ನೇಮಕ

ಬೆಂಗಳೂರು, ಫೆ. 7: ಉಡುಪಿಯ ಬೈಲೂರು, ಬಡಗಬೆಟ್ಟುವಿನ ನ್ಯಾಯವಾದಿ ಮಟ್ಟಾರ್ ರತ್ನಾಕರ ಹೆಗ್ಡೆ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಮಂಗಳೂರಿನ ‘ಕರಾವಳಿ ಅಭಿವೃದ್ಧಿ ಪ್ರಾಧಿಕಾರ’ದ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.
2008ರ ಸೆಪ್ಟಂಬರ್ 8ರಂದು ರಚಿಸಲಾಗಿರುವ ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ ರಾಜ್ಯ ಸರಕಾರದ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರನ್ನು ಅಧ್ಯಕ್ಷರನ್ನಾಗಿ 2019ರ ಆಗಸ್ಟ್ 1ರಂದು ನೇಮಿಸಿದ್ದು, ಸದರಿಯವರ ಅಧಿಕಾರಾವಧಿಯನ್ನು ಕೂಡಲೇ ಜಾರಿಗೆ ಬರುವಂತೆ ರದ್ದುಪಡಿಸಲಾಗಿದೆ ಎಂದು ಸರಕಾರ ಆದೇಶದಲ್ಲಿ ತಿಳಿಸಿದೆ.
Next Story





