Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಕೊರೊನಾ ವೈರಸ್ ಶಂಕಿತರಿಗೆ...

ಉಡುಪಿ: ಕೊರೊನಾ ವೈರಸ್ ಶಂಕಿತರಿಗೆ ಪ್ರತ್ಯೇಕ ವಾರ್ಡಿನಲ್ಲಿ ಚಿಕಿತ್ಸೆ

ವಾರ್ತಾಭಾರತಿವಾರ್ತಾಭಾರತಿ8 Feb 2020 7:59 PM IST
share
ಉಡುಪಿ: ಕೊರೊನಾ ವೈರಸ್ ಶಂಕಿತರಿಗೆ ಪ್ರತ್ಯೇಕ ವಾರ್ಡಿನಲ್ಲಿ ಚಿಕಿತ್ಸೆ

ಉಡುಪಿ, ಫೆ.8: ಚೀನದಿಂದ 15-20 ದಿನಗಳ ಹಿಂದೆ ಉಡುಪಿ ಜಿಲ್ಲೆಯ ಹುಟ್ಟೂರಿಗೆ ಮರಳಿ ಬಂದ ನಾಲ್ವರು, ಶಂಕಿತ ಕೊರೊನಾ ವೈರಸ್ ಪರೀಕ್ಷೆಗಾಗಿ ಉಡುಪಿ ಜಿಲ್ಲಾಸ್ಪತ್ರೆಗೆ ನಿನ್ನೆ ದಾಖಲಾಗಿ, ಪ್ರತ್ಯೇಕಿತ ವಾರ್ಡುಗಳಲ್ಲಿ ಚಿಕಿತ್ಸೆಯನ್ನು ಮುಂದುವರಿಸಿದ್ದಾರೆ.

ಇವರಲ್ಲಿ ಯಾವುದೇ ವಿಧದ ರೋಗದ ಲಕ್ಷಣಗಳು ಕಾಣಿಸಿಕೊಳ್ಳದ ಮಹಿಳೆಯನ್ನು ಹಲವಾರು ಸೂಚನೆಗಳು, ನಿರ್ಬಂಧಗಳನ್ನು ವಿಧಿಸಿ ಇಂದು ಮನೆಗೆ ಕಳುಹಿಸಲಾಗಿದೆ ಎಂದು ಆಸ್ಪತ್ರೆಯ ಉನ್ನತ ಮೂಲಗಳು ತಿಳಿಸಿವೆ.

ಸಾಮಾನ್ಯ ಶೀತ, ಗಂಟಲು ನೋವು, ಜ್ವರದಿಂದ ಬಾಧಿತರಾಗಿರುವ ನಾಲ್ಕು ವರ್ಷದ ಮಗುವೂ ಸೇರಿದಂತೆ ಇತರ ಮೂವರಿಗೆ ಚಿಕಿತ್ಸೆಯನ್ನು ಮುಂದುವರಿಸಲಾಗಿದೆ. ಇವರೆಲ್ಲರೂ ಚೇತರಿಸಿಕೊಳ್ಳುತಿದ್ದಾರೆ ಎಂದು ಈ ಮೂಲ ತಿಳಿಸಿದೆ. ಮಹಿಳೆಯ ಗಂಡ ಮತ್ತು ಮಗು ಪ್ರತ್ಯೇಕ ವಾರ್ಡಿನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

ಕಾಪು ತಾಲೂಕಿನ ಯುವಕ ಇಂಜಿನಿಯರ್ ಆಗಿದ್ದು, 15 ದಿನಗಳ ಹಿಂದೆ ಚೀನದಿಂದ ಬಂದ ನಂತರ ಮನೆಯಿಂದ ಹೊರಗೆಲ್ಲೂ ಹೋಗಿರಲಿಲ್ಲ ಎಂದು ಹೇಳಲಾಗಿದೆ. ಕೊರೊನಾ ವೈರಸ್ ಕುರಿತಂತೆ ಮಾಹಿತಿಯನ್ನು ಹೊಂದಿರುವ ಇವರು ಯಾರನ್ನೂ ಸಹ ಭೇಟಿಯಾಗದೇ ಮನೆಯಲ್ಲೇ ಉಳಿದಿದ್ದರು. ಸ್ವಲ್ಪ ಶೀತ ಹಾಗೂ ಗಂಟಲು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೊರೊನಾ ವೈರಸ್ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಬಂದಿದ್ದರು. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಚೇತರಿಸಿಕೊಂಡಿದ್ದು, ವೈದ್ಯಕೀಯ ಪರೀಕ್ಷೆಯ ವರದಿಗಾಗಿ ಕಾಯುತಿದ್ದಾರೆ.

ಬ್ರಹ್ಮಾವರ ತಾಲೂಕಿನವರಾದ ಮತ್ತೊಬ್ಬರು ಚೀನದಲ್ಲಿ ನೌಕರಿಯಲ್ಲಿದ್ದು, ಪತ್ನಿ ಹಾಗೂ ಮಗುವಿನೊಂದಿಗೆ ಎರಡು ವಾರಗಳ ಹಿಂದೆ ಹುಟ್ಟೂರಿಗೆ ಬಂದಿದ್ದರು. ಇವರಲ್ಲಿ ಪತಿಗೆ ಶೀತ ಹಾಗೂ ಕೆಮ್ಮು ಇದ್ದು, ಮಗುವಿಗೆ ಶೀತ ಹಾಗೂ ಲಘು ಜ್ವರವಿದೆ. ಆದರೆ ಪತ್ನಿ ಸಂಪೂರ್ಣ ಆರೋಗ್ಯವಂತರಾಗಿದ್ದಾರೆ. ಚಿಕಿತ್ಸೆಯ ಬಳಿಕ ಇಬ್ಬರೂ ಚೇತರಿಸಿಕೊಂಡಿದ್ದಾರೆ. ಯಾರೊಂದಿಗೂ ಬೆರೆಯದೇ, ಪ್ರತ್ಯೇಕವಾಗಿ ತೆರಳಿ, ಮನೆಯಲ್ಲಿ ಪ್ರತ್ಯೇಕವಾಗಿ ಇರಬೇಕೆಂಬ ಷರತ್ತು ಹಾಗೂ ಸದಾ ಕಾಲ ಬಾಯಿ-ಮೂಗಿಗೆ ಸುರಕ್ಷಾ ಕವಚ (ಎನ್-95 ಮಾಸ್ಕ್) ಧರಿಸಿರಬೇಕೆಂಬ ಸೂಚನೆ ಮೇಲೆ ಮಹಿಳೆಯನ್ನು ಮನೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರತ್ಯೇಕ ವಾರ್ಡು 

ಶಂಕಿತ ಕೊರೊನಾ ವೈರಸ್ ಪರೀಕ್ಷೆಗೊಳಗಾದವರ ಚಿಕಿತ್ಸೆಗಾಗಿ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡನ್ನು ತೆರೆಯಲಾಗಿದೆ. ಇಲ್ಲಿ ನಿಯೋಜಿತರಾದ ಇಬ್ಬರು ವೈದ್ಯರು ಹಾಗೂ ಇಬ್ಬರು ನರ್ಸ್‌ಗಳನ್ನು ಹೊರತು ಪಡಿಸಿ ಬೇರೆ ಯಾರಿಗೂ ವಾರ್ಡಿನ ಬಳಿ ಸುಳಿಯಲು ಅವಕಾಶ ನೀಡುತ್ತಿಲ್ಲ. ಯಾರೇ ಆದರೂ ದಾರಿ ತಪ್ಪಿಯಾದರೂ ಅಕ್ಕಪಕ್ಕ ಬಾರದಂತೆ ವಾರ್ಡಿನ ಎರಡೂ ಬಾಗಿಲುಗಳಿಗೆ ಸದಾ ಕಾಲ ಬೀಗ ಹಾಕಿಡಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ರಕ್ತ, ಗಂಟಲು ದ್ರವ ಬೆಂಗಳೂರಿಗೆ

ಚೀನದಿಂದ ಜಿಲ್ಲೆಗೆ ಮರಳಿದ ನಾಲ್ವರ ರಕ್ತ ಹಾಗೂ ಗಂಟಲ ದ್ರವವನ್ನು ಶುಕ್ರವಾರ ಪಡೆದು, ಕೊರೊನಾ ವೈರಸ್ ಪರೀಕ್ಷೆಗಾಗಿ ಬೆಂಗಳೂರಿನ ಬೆಂಗಳೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ ನೂತನವಾಗಿ ಆರಂಭಿಸಲಾದ ವೈರಲ್ ಪತ್ತೆ ಪ್ರಯೋಗಾಲಯ (ವಿಡಿಎಲ್)ಕ್ಕೆ ಕಳುಹಿಸಲಾಗಿದೆ. ನಾಲ್ವರ ಪರೀಕ್ಷಾ ವರದಿ ಎರಡು-ಮೂರು ದಿನಗಳಲ್ಲಿ ಬರುವ ನಿರೀಕ್ಷೆ ಇದೆ. ಇದು ನೆಗಟೀವ್ ಆಗಿರುವ ಸಂಪೂರ್ಣ ವಿಶ್ವಾಸವಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಕೊರೊನಾ ವೈರಸ್‌ಗೆ ಇದುವರೆಗೆ ನಿರ್ದಿಷ್ಟವಾದ ಯಾವುದೇ ಔಷಧಿ ಯಾಗಲಿ, ವ್ಯಾಕ್ಸಿನ್ ಆಗಲಿ ಕಂಡು ಹಿಡಿದಿಲ್ಲದ ಕಾರಣ, ವ್ಯಕ್ತಿ ಯಾವ ರೋಗದಿಂದ ನರಳುತಿದ್ದಾರೋ ಅದಕ್ಕೆ ಸೂಕ್ತವಾದ ಔಷಧಿ ನೀಡಲಾಗುತ್ತಿದೆ. ಹೆಚ್ಚಾಗಿ ದೇಹದಲ್ಲಿ ಪ್ರತಿರೋಧದ ಅಂಶ ಕಡಿಮೆ ಇರುವವರು, ಬೇರೆ ಕಾಯಿಲೆಯಿಂದ ನರಳುತ್ತಿರುವವರು ಇದಕ್ಕೆ ಸುಲಭದ ತುತ್ತಾಗುತಿದ್ದಾರೆ ಎಂದು ಹೆಸರು ಬಹಿರಂಗಪಡಿಸಲು ಇಚ್ಚಿಸದ ಹಿರಿಯ ವೈದ್ಯರೊಬ್ಬರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X