Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂದು ಅಂಡರ್-19 ವಿಶ್ವಕಪ್ ಫೈನಲ್ ಹಣಾಹಣಿ

ಇಂದು ಅಂಡರ್-19 ವಿಶ್ವಕಪ್ ಫೈನಲ್ ಹಣಾಹಣಿ

ಬಾಂಗ್ಲಾದೇಶ ವಿರುದ್ಧ ಭಾರತವೇ ಫೇವರಿಟ್

ವಾರ್ತಾಭಾರತಿವಾರ್ತಾಭಾರತಿ9 Feb 2020 9:11 AM IST
share
ಇಂದು ಅಂಡರ್-19 ವಿಶ್ವಕಪ್ ಫೈನಲ್ ಹಣಾಹಣಿ

ಜೋಹಾನ್ಸ್‌ಬರ್ಗ್(ದ. ಆಫ್ರಿಕಾ), ಫೆ,.8: ಹಾಲಿ ಚಾಂಪಿಯನ್ ಭಾರತ ತಂಡ ರವಿವಾರ ಇಲ್ಲಿ ನಡೆಯಲಿರುವ ಐಸಿಸಿ ಅಂಡರ್-19 ವಿಶ್ವಕಪ್‌ನ ಫೈನಲ್‌ನಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ. ಐದನೇ ಬಾರಿ ಜೂನಿಯರ್ ವಿಶ್ವಕಪ್‌ನ್ನು ಜಯಿಸಿ ದಾಖಲೆ ನಿರ್ಮಿಸುವತ್ತ ಚಿತ್ತಹರಿಸಿರುವ ಭಾರತ ಪಂದ್ಯ ಗೆಲ್ಲುವ ಫೇವರಿಟ್ ತಂಡವಾಗಿ ಹೊರಹೊಮ್ಮಿದೆ.

2018ರ ಆವೃತ್ತಿಯ ವಿಶ್ವಕಪ್ ಜಯಿಸಿದ್ದ ಭಾರತ ತಂಡದಲ್ಲಿದ್ದ ಪೃಥ್ವಿ ಶಾ ಹಾಗೂ ಶುಭಮನ್ ಗಿಲ್ ಈಗ ಹಿರಿಯರ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈಗಿನ ವಿಶ್ವಕಪ್ ತಂಡದಲ್ಲಿರುವ ಸ್ಫೋಟಕ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್, ಸ್ಪಿನ್ನರ್ ರವಿ ಬಿಶ್ನೋಯ್ ಹಾಗೂ ವೇಗದ ಬೌಲರ್ ಕಾರ್ತಿಕ್ ತ್ಯಾಗಿ ರಾತೋರಾತ್ರಿ ಸ್ಟಾರ್‌ಗಳಾಗಿ ಮಿಂಚುತ್ತಿದ್ದಾರೆ.

ಅಂಡರ್-19 ಕ್ರಿಕೆಟ್‌ನಲ್ಲಿ ಭಾರತ ಅದ್ವಿತೀಯ ಸಾಧನೆ ಮಾಡುತ್ತಾ ಬಂದಿದೆ. ವಿಶ್ವದಲ್ಲಿ ಇತರ ಕ್ರಿಕೆಟ್ ಮಂಡಳಿಗೆ ಹೋಲಿಸಿದರೆ ಬಿಸಿಸಿಐ ಕ್ರಿಕೆಟ್ ಬೆಳವಣಿಗೆಗಾಗಿ ಹೆಚ್ಚು ಶ್ರಮವಹಿಸುತ್ತಿದೆ.

ಮಂಗಳವಾರ ನಡೆದ ಟೂರ್ನಿಯ ಮೊದಲ ಸೆಮಿ ಫೈನಲ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 10 ವಿಕೆಟ್‌ಗಳ ಅಂತರದಿಂದ ಹೀನಾಯವಾಗಿ ಸೋಲಿಸಿದ್ದ ಭಾರತ 2000ರ ಬಳಿಕ ಏಳನೇ ಬಾರಿ ಫೈನಲ್‌ಗೆ ಲಗ್ಗೆ ಇಟ್ಟಿದೆ. 2000ರಲ್ಲಿ ಭಾರತ ಮೊದಲ ಬಾರಿ ಟ್ರೋಫಿ ಎತ್ತಿಹಿಡಿದಿತ್ತು.

ಅಂಡರ್-19 ಕ್ರಿಕೆಟ್‌ನಲ್ಲಿ ಯಶಸ್ಸು ಸಾಧಿಸುವ ಎಲ್ಲ ಕ್ರಿಕೆಟ್ ಆಟಗಾರರು ಭಾರತದ ಪರ ಆಡಲು ಸಮರ್ಥರಾಗುತ್ತಾರೆ ಎಂದು ನಿರ್ಧರಿಸಲು ಸಾಧ್ಯವಿಲ್ಲ. ಇದಕ್ಕೆ 2012ರ ಚಾಂಪಿಯನ್ ತಂಡದ ನಾಯಕ ಉನ್ಮುಕ್ತ್ ಚಂದ್ ನಿದರ್ಶನ.

 ಚಂದ್ ವೃತ್ತಿಜೀವನದ ಮೇಲೆ ಭಾರೀ ನಿರೀಕ್ಷೆ ಇಡಲಾಗಿತ್ತು. ಇದೀಗ ಅವರು ಉತ್ತರಾಖಂಡದ ರಣಜಿ ಟ್ರೋಫಿ ತಂಡದಲ್ಲಿ ಆಡುವ 11ರ ಬಳಗದಲ್ಲಿ ಸ್ಥಾನ ಪಡೆಯಲು ಪರದಾಡುತ್ತಿದ್ದಾರೆ. ಚಂದ್ ಕಳೆದ ವರ್ಷ ದಿಲ್ಲಿಯಿಂದ ಉತ್ತರಾಖಂಡ್‌ಗೆ ತನ್ನ ನೆಲೆ ಬದಲಿಸಿಕೊಂಡಿದ್ದರು. ಅದ್ಭುತ ಪ್ರತಿಭೆಗಳಾದ ಶಾ ಹಾಗೂ ಗಿಲ್ ಮಾತ್ರ ಟೀಮ್ ಇಂಡಿಯಾದಲ್ಲಿ ಆಡುವ ಕನಸನ್ನು ನನಸಾಗಿಸಿಕೊಂಡಿದ್ದಾರೆ. ಪ್ರತಿ ಬಾರಿಯೂ ಅಂಡರ್-19 ವಿಶ್ವಕಪ್‌ನಲ್ಲಿ ಭಾರತ ಮಾತ್ರ ಹೊಸ ತಂಡವನ್ನು ಕಣಕ್ಕಿಳಿಸುತ್ತಿದೆ. ಪ್ರತಿಭೆಗಳ ಕೊರತೆ ಇಲ್ಲದಿರುವುದು ಹಾಗೂ ಸರಿಯಾದ ಮೂಲಭೂತ ಸೌಕರ್ಯ ದೊರೆಯುತ್ತಿರುವುದು ಇದಕ್ಕೆ ಕಾರಣ.

 ಭಾರತ ಕಿರಿಯರ ತಂಡ ವಿಶ್ವಕಪ್‌ಗೆ ಮೊದಲು ವಿಶ್ವದಾದ್ಯಂತ 30 ಪಂದ್ಯಗಳಲ್ಲಿ ಆಡಿತ್ತು. ದಕ್ಷಿಣ ಆಫ್ರಿಕಾದ ವಾತಾವರಣಕ್ಕೆ ಹೊಂದಿಕೊಳ್ಳಲು ಶ್ರೀಲಂಕಾ ವಿರುದ್ಧ ವಿಶ್ವಕಪ್‌ನ ಮೊದಲ ಪಂದ್ಯ ಆಡುವ ಮೊದಲೇ ತ್ರಿಕೋನ ಸರಣಿಯಲ್ಲಿ ಭಾಗವಹಿಸಿತ್ತು. ಪ್ರಿಯಂ ಗರ್ಗ್ ನೇತೃತ್ವದ ಭಾರತ ಅಂಡರ್-19 ಕ್ರಿಕೆಟ್ ತಂಡ ಕಳೆದ ವರ್ಷ ಇಂಗ್ಲೆಂಡ್‌ನಲ್ಲಿ ತ್ರಿಕೋನ ಸರಣಿ ಹಾಗೂ ಏಶ್ಯಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿತ್ತು. ಬಾಂಗ್ಲಾದೇಶ ಇದೇ ಮೊದಲ ಬಾರಿ ಫೈನಲ್‌ಗೆ ಪ್ರವೇಶಿಸಿದೆ. 2018ರ ಆವೃತ್ತಿಯ ವಿಶ್ವಕಪ್‌ನಲ್ಲಿ ಕ್ವಾರ್ಟರ್ ಫೈನಲ್ ತಲುಪಿರುವುದು ಬಾಂಗ್ಲಾದ ಇದುವರೆಗಿನ ಉತ್ತಮ ಸಾಧನೆಯಾಗಿತ್ತು. ಒಂದು ವೇಳೆ ಬಾಂಗ್ಲಾ ಫೈನಲ್‌ನಲ್ಲಿ ಜಯ ಸಾಧಿಸಿದರೆ ಉಪಖಂಡದ ದೈತ್ಯ ತಂಡದ ವಿರುದ್ಧ ಸೇಡು ತೀರಿಸಿಕೊಂಡಂತಾಗುತ್ತದೆ. ಬಾಂಗ್ಲಾದೇಶದ ಸೀನಿಯರ್ ತಂಡ 2018ರ ನಿದಾಹಸ್ ಟ್ರೋಫಿ ಫೈನಲ್ ಹಾಗೂ 2016ರ ಟ್ವೆಂಟಿ-20 ವಿಶ್ವಕಪ್‌ನ ಗ್ರೂಪ್ ಹಂತದ ಪಂದ್ಯದಲ್ಲಿ ಭಾರತ ವಿರುದ್ಧ ವೀರೋಚಿತ ಸೋಲುಂಡಿತ್ತು.

ಉಭಯ ತಂಡಗಳಲ್ಲಿ ಯಾವುದೇ ಬದಲಾವಣೆಯಾಗುವ ಸಾಧ್ಯತೆಯಿಲ್ಲ. ಯಾವ ಆಟಗಾರನಿಗೂ ಗಾಯದ ಸಮಸ್ಯೆ ಕಂಡುಬಂದಿಲ್ಲ.

► ಪಂದ್ಯದ ಸಮಯ:ಮಧ್ಯಾಹ್ನ 1:30

share
ವಾರ್ತಾಭಾರತಿ
ವಾರ್ತಾಭಾರತಿ
Next Story
X