ಕಡಬ: ಕಾರು - ಟ್ಯಾಂಕರ್ ಲಾರಿ ಢಿಕ್ಕಿ; ಮಹಿಳೆ ಸೇರಿ ಇಬ್ಬರು ಮೃತ್ಯು

ಕಡಬ: ಕಾರು ಮತ್ತು ಟ್ಯಾಂಕರ್ ಲಾರಿ ನಡುವೆ ನಡೆದ ಭೀಕರ ಅಪಘಾತದಿಂದ ಇಬ್ಬರು ಮೃತಪಟ್ಟ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬೆದ್ರೋಡಿ ಎಂಬಲ್ಲಿ ರವಿವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಉಪ್ಪಿನಂಗಡಿ ಕಾಂಚನ ನಿವಾಸಿ ಶಾಜಿ ಎಂಬವರ ಪತ್ನಿ ಜೈನಿ ಶಾಜಿ (30) ಮತ್ತು ಜಿತಿನ್ (40) ಎಂದು ಗುರುತಿಸಲಾಗಿದೆ.
ಜಿತಿನ್ ಆಯುರ್ವೇದಿಕ್ ವೈದ್ಯರಾಗಿದ್ದು, ಇಂದು ಬೆಳಗ್ಗೆ ಕಾರಿನಲ್ಲಿ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಲ್ಲಿ ಬಂದ ಟ್ಯಾಂಕರ್ ಇವರಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ. ಮೃತದೇಹವನ್ನು ಪುತ್ತೂರು ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ.
ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಹಾಗೂ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Next Story





