Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿಯವರು ತಾವು ಹೇಳಲಾಗದನ್ನು...

ಬಿಜೆಪಿಯವರು ತಾವು ಹೇಳಲಾಗದನ್ನು ಆರೆಸ್ಸೆಸ್ ಮೂಲಕ ಹೇಳಿಸುತ್ತಿದ್ದಾರೆ: ಮಾಜಿ ಸಚಿವ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ9 Feb 2020 5:45 PM IST
share
ಬಿಜೆಪಿಯವರು ತಾವು ಹೇಳಲಾಗದನ್ನು ಆರೆಸ್ಸೆಸ್ ಮೂಲಕ ಹೇಳಿಸುತ್ತಿದ್ದಾರೆ: ಮಾಜಿ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಫೆ. 9: ಲೋಕಸಭೆ ಚುನಾವಣೆಯಲ್ಲಿ 25 ಕ್ಷೇತ್ರಗಳಲ್ಲಿ ಗೆದ್ದಿದ್ದರೂ ನಾವು ಗೆದ್ದಿರುವ ಒಂದು ಕ್ಷೇತ್ರವನ್ನು ಬಿಜೆಪಿಯವರಿಂದ ಸಹಿಸಲು ಸಾಧ್ಯವಾಗುತ್ತಿಲ್ಲ. ಅವರು ಚಡ್ಡಿ, ಪ್ಯಾಂಟ್, ಪಂಚೆ ಯಾವುದಾದರೂ ವೇಷದಲ್ಲಿ ಪಥ ಸಂಚಲನ ಮಾಡಿಕೊಳ್ಳಲಿ, ತಲೆ ಕೆಡಿಸಿಕೊಳ್ಳಲ್ಲ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ರವಿವಾರ ಇಲ್ಲಿನ ಸದಾಶಿವನಗರದಲ್ಲಿನ ತನ್ನ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಬಿಜೆಪಿಯವರಿಗೆ ಇಪ್ಪತ್ತೈದು ಸ್ಥಾನ ಗೆದ್ದಿದ್ದರೂ ತೃಪ್ತಿಯಾಗಿಲ್ಲ. ನಾವು ಹಾಗೂ ಜೆಡಿಎಸ್‌ನವರು ಗೆದ್ದಿರುವ ಒಂದೊಂದು ಕ್ಷೇತ್ರಗಳಲ್ಲಿ ವಿನಾಕಾರಣ ಏನೇನೋ ಪ್ರಯತ್ನ ಮಾಡುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು. ಅವರ ಪಕ್ಷದಲ್ಲಿ ಏನಾದರೂ ಮಾಡಿಕೊಳ್ಳಲಿ. ಆರೆಸ್ಸೆಸ್ ಸಿದ್ಧಾಂತ ಏನೂ ಅಂತಾ ನನಗೂ ಗೊತ್ತಿದೆ. ಬಿಜೆಪಿಯವರು ತಾವು ಹೇಳಲಾಗದನ್ನು ಆರೆಸ್ಸೆಸ್ ಮೂಲಕ ಹೇಳಿಸುತ್ತಿದ್ದಾರೆ. ಕೇವಲ ಒಂದು ಜಾತಿ-ಧರ್ಮದ ಪರವಾಗಿ ಹಾಗೂ ಬೇರೆ ಧರ್ಮಗಳ ಮೇಲೆ ಯುದ್ಧ ಮಾಡುತ್ತೇವೆಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು.

ರಾಮನಗರದಲ್ಲಿ ಪಥ ಸಂಚಲನಕ್ಕೆ ಎಷ್ಟು ಜನ ಬಂದಿದ್ದರು, ಯಾವ ಕಡೆಯಿಂದ ಎಷ್ಟು ವಾಹನ ಬಂದಿದ್ದವು. ಯಾರೆಲ್ಲಾ ಬಂದಿದ್ದರು ಎಂಬುದನ್ನು ನಮ್ಮ ಜಿಲ್ಲೆ ಪೊಲೀಸರು ವಿಡಿಯೋ ಮಾಡಿಸಿ ಇಟ್ಟಿದ್ದಾರೆ. ಇದರಿಂದ ನಮಗೆ ತೊಂದರೆ ಇಲ್ಲ ಎಂದು ತಿರುಗೇಟು ನೀಡಿದರು.

ಬಿಜೆಪಿಯವರು ಇಪ್ಪತ್ತೈದು ಕ್ಷೇತ್ರಗಳನ್ನು ಗೆದ್ದ ಮಾತ್ರಕ್ಕೆ ಕಾರ್ಯಕರ್ತರು ಕುಗ್ಗುವ ಅಥವಾ ಆತಂಕ ಪಡುವ ಅಗತ್ಯವಿಲ್ಲ. ನಾವು ಸ್ವಲ್ಪಯಾಮಾರಿದೆವು. ರಾಜಕೀಯ ಚದುರಂಗವನ್ನು ನಾವು ಹಾಗೂ ಜೆಡಿಎಸ್‌ನವರು ಸರಿಯಾಗಿ ಆಡಿದ್ದರೆ, ಬಿಜೆಪಿಗೆ 10 ಸೀಟು ಬರುತ್ತಿರಲಿಲ್ಲ. ನಮ್ಮ ತಪ್ಪುಗಳನ್ನು ನಾವು ಸರಿ ಮಾಡಿಕೊಳ್ಳುತ್ತೇವೆ. ಏನು ಮಾಡಬೇಕು, ರಾಜಕಾರಣ ಹೇಗೆ ಮಾಡಬೇಕೆಂದು ಗೊತ್ತಿದೆ ಎಂದು ಹೇಳಿದರು.

ಲೋಕಸಭೆ ಚುನಾವಣೆ ಬಳಿಕ ನಡೆದ ಹಲವು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷಿತ ಜನ ಬೆಂಬಲ ಪಡೆಯುವಲ್ಲಿ ವಿಫಲವಾಗಿದೆ. ಮಹಾರಾಷ್ಟ್ರದಲ್ಲಿ ಸಂಖ್ಯೆ ಇತ್ತಾದರೂ ಅವರ ನೀತಿ ವಿರೋಧಿಸಿ ಶಿವಸೇನೆ ಅವರನ್ನು ಬಿಟ್ಟು ಬಂದರು. ಹರಿಯಾಣದಲ್ಲೂ ಬೇರೆಯವರನ್ನು ಸೇರಿಸಿಕೊಂಡರು. ಉತ್ತರದ ರಾಜ್ಯಗಳಲ್ಲಿ ಒಂದೊಂದೇ ಕಡೆ ಅಧಿಕಾರ ಕಳೆದುಕೊಳ್ಳುತ್ತಿದೆ ಎಂದರು.

ಅವರು ಚುನಾವಣೆ ಹೇಗೆ ಮಾಡಿದರು ಎಂದು ನನಗೆ ಗೊತ್ತಿಲ್ವಾ? ಅವರು ಸತ್ಯ ಹರಿಶ್ಚಂದ್ರರು ಕೇವಲ 27ಲಕ್ಷ ರೂ.ನಲ್ಲೇ ಚುನಾವಣೆ ಮಾಡಿ ಮುಗಿಸಿದರಾ? ಮಾಧ್ಯಮಗಳಲ್ಲೇ ಅವರು ಎಷ್ಟು ದುಡ್ಡು ಖರ್ಚು ಮಾಡಿದ್ದರೆಂದು ವರದಿ ಬಂದಿತ್ತು. ಚುನಾವಣಾ ಆಯೋಗ ಏನು ಮಾಡುತ್ತಿತ್ತು, ಐಟಿ ಇಲಾಖೆ ಕಣ್ಣು ಮುಚ್ಚಿಕೊಂಡು ಕೂತಿತ್ತಾ? ಕೇವಲ ಹಾಸನ, ಶಿವಮೊಗ್ಗ, ಮಂಡ್ಯದಲ್ಲಿ ಮಾತ್ರ ದಾಳಿಮಾಡಿದ್ದೇಕೆ? ಎಂದು ಪ್ರಶ್ನಿಸಿದರು.

ಜನ ರೊಚ್ಚಿಗೆದ್ದು ಪ್ರತಿಭಟನೆ ಮಾಡುತ್ತಿದ್ದ ವೇಳೆ ಅವರನ್ನು ತಡೆಯಲು ಕುಮಾರಸ್ವಾಮಿ, ಸಿದ್ದರಾಮಯ್ಯ, ಪರಮೇಶ್ವರ್, ದಿನೇಶ್ ಗುಂಡೂರಾವ್, ನಾವೆಲ್ಲ ಸೇರಿದ್ದಾಗ ನಮ್ಮ ಮೇಲೆ ಸುಮ್ಮನೆ ಕೇಸ್ ಹಾಕಿಸಿದರು. ಈ ಸುಳ್ಳು ಕೇಸು, ಜೈಲಿಗೆಲ್ಲ ಹೆದರಿ ನಾವು ರಾಜಕೀಯ ಮಾಡುವುದಿಲ್ಲ. ನಮ್ಮ ಪಕ್ಷಕ್ಕೆ ಅದರದೇ ಆದ ಇತಿಹಾಸ, ತ್ಯಾಗ, ಬಲಿದಾನ ಇದೆ. ನಮ್ಮ ಜನರು ಸ್ವಾತಂತ್ರ್ಯಕ್ಕಾಗಿ ಹೋರಾಡಿ ಪ್ರಾಣ ಕೊಟ್ಟು ಈ ದೇಶಕ್ಕೆ ಪ್ರಜಾಪ್ರಭುತ್ವ ತಂದುಕೊಟ್ಟಿದ್ದಾರೆ. ಆ ಪ್ರಜಾಪ್ರಭುತ್ವದಲ್ಲಿ ಅವರಿಗೆ ಅಧಿಕಾರ ಸಿಕ್ಕಿದೆ ಎಂದು ಶಿವಕುಮಾರ್ ಕಿಡಿಕಾರಿದರು.

‘ಸಿಎಎ ಹಾಗೂ ಎನ್‌ಆರ್‌ಸಿ ವಿಚಾರವಾಗಿ ಜನ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದನ್ನು ಕಾಂಗ್ರೆಸ್ ಪಕ್ಷ ಮಾಡಿಸುತ್ತಿದೆಯೇ? ಇಲ್ಲ. ಕೇಂದ್ರ ಸರಕಾರದ ಧೋರಣೆ ವಿರುದ್ಧ ಜನ ಸಿಟ್ಟಿಗೆದ್ದು ಸ್ವಯಂ ಪ್ರೇರಣೆಯಿಂದ ಬೀದಿಗಿಳಿದು ಚಳವಳಿ ನಡೆಸುತ್ತಿದ್ದಾರೆ’

-ಡಿ.ಕೆ.ಶಿವಕುಮಾರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X