Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫೆ.12: ಮಂಗಳೂರು ತಾಪಂ ನೂತನ ಕಟ್ಟಡ...

ಫೆ.12: ಮಂಗಳೂರು ತಾಪಂ ನೂತನ ಕಟ್ಟಡ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ9 Feb 2020 10:37 PM IST
share
ಫೆ.12: ಮಂಗಳೂರು ತಾಪಂ ನೂತನ ಕಟ್ಟಡ ಲೋಕಾರ್ಪಣೆ

ಮಂಗಳೂರು, ಫೆ.9: ನಗರದ ಮಿನಿ ವಿಧಾನಸೌಧ ಪಕ್ಕದಲ್ಲಿ ಸುಮಾರು 4.25 ಕೋಟಿ ರೂ. ಅನುದಾನದಲ್ಲಿ ಮಂಗಳೂರು ತಾಲೂಕು ಪಂಚಾಯತ್‌ನ ನೂತನ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು, ಫೆ.12ರಂದು ಬೆಳಗ್ಗೆ 9:30ಕ್ಕೆ ಲೋಕಾರ್ಪಣೆಗೊಳ್ಳಲಿದೆ.

ನಗರದಲ್ಲಿ ರವಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷ ಮುಹಮ್ಮದ್ ಮೋನು, ನೂತನ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟನೆ ನೆರವೇರಿಸಲಿದ್ದಾರೆ. ಶಾಸಕರಾದ ಯು.ಟಿ. ಖಾದರ್, ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಸಂಸದ ನಳಿನ್‌ ಕುಮಾರ್ ಕಟೀಲು, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ವಿಧಾನ ಪರಿಷತ್ ಸದಸ್ಯರಾದ ಹರೀಶ್‌ಕುಮಾರ್, ಐವನ್ ಡಿಸೋಜ, ಬಿ.ಎಂ. ಫಾರೂಕ್, ಭೋಜೆಗೌಡ ಮತ್ತಿತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದರು.

ತಾಪಂ ನೂತನ ಕಟ್ಟಡದ ಶಿಲಾನ್ಯಾಸವನ್ನು 2017ರ ಮೇ ತಿಂಗಳಲ್ಲಿ ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ರಮಾನಾಥ ರೈ ಹಾಗೂ ಶಾಸಕ ಯು.ಟಿ. ಖಾದರ್ ನೆರವೇರಿಸಿದ್ದರು. ಜಿಲ್ಲಾ ಪಂಚಾಯತ್‌ನ ಅನುದಾನದಲ್ಲಿ ಕಟ್ಟಡ ಕಾಮಗಾರಿ ಇದೀಗ ಸರ್ವ ವ್ಯವಸ್ಥೆಗಳೊಂದಿಗೆ ಮುಕ್ತಾಯವಾಗಿದೆ ಎಂದರು.

ನೂತನ ಕಟ್ಟಡದಲ್ಲಿ ಆರು ಮಳಿಗೆಗಳ ವಾಣಿಜ್ಯ ಸಂಕೀರ್ಣವಿದ್ದು, ಇದರಿಂದ ತಿಂಗಳಿಗೆ ಸುಮಾರು ಒಂದು ಲಕ್ಷ ರೂಪಾಯಿ ಆದಾಯ ದೊರೆಯುವ ನಿರೀಕ್ಷೆ ಇದೆ ಎಂದರು.

ನಗರದ ವೆನ್ಲಾಕ್ ಆಸ್ಪತ್ರೆಯಿಂದ ಪೊಲೀಸ್ ಆಯುಕ್ತಾಲಯದವರೆಗಿನ ಯಾವುದೇ ಸರಕಾರಿ ಕಟ್ಟಡಗಳಲ್ಲಿ ಆದಾಯ ತಂದುಕೊಡುವ ವಾಣಿಜ್ಯ ಸಂಕೀರ್ಣವನ್ನು ನಿರ್ಮಿಸಿಲ್ಲ. ಈಗ ತಾಲೂಕು ಪಂಚಾಯತ್‌ನಲ್ಲಿ ಆರಂಭವಾಗಿರುವುದು ವಿಶೇಷ ಎಂದು ಮುಹಮ್ಮದ್ ಮೋನು ತಿಳಿಸಿದರು.

ಬಾಡಿಗೆಗೂ ಸಿಗಲಿದೆ ಮೀಟಿಂಗ್ ಹಾಲ್: ನೂತನ ಕಟ್ಟಡದಲ್ಲಿ ಬೇಸ್‌ಮೆಂಟ್ ಸೇರಿ ಮೂರು ಅಂತಸ್ತುಗಳಿವೆ. ಬೇಸ್‌ಮೆಂಟ್‌ನಲ್ಲಿ ಪಾರ್ಕಿಂಗ್ ಸ್ಥಳಾವಕಾಶ ಇದ್ದರೆ, ತಳ ಅಂತಸ್ತಿನಲ್ಲಿ ಆಡಳಿತ ಕಚೇರಿ, ಕಾರ್ಯ ನಿರ್ವಹಣಾಧಿಕಾರಿ ಕಚೇರಿ, ಅಕೌಂಟ್ ಸೆಕ್ಷನ್ ಕಾರ್ಯ ನಿರ್ವಹಿಸಲಿದೆ ಎಂದು ಮುಹಮ್ಮದ್ ಮೋನು ಹೇಳಿದರು.

ಮೊದಲನೇ ಮಹಡಿಯನ್ನು ಅಧ್ಯಕ್ಷ- ಉಪಾಧ್ಯಕ್ಷರ ಕೊಠಡಿ, ಸ್ಥಾಯಿ ಸಮಿತಿ ಮೀಟಿಂಗ್ ಹಾಲ್, ಅಕ್ಷರ ದಾಸೋಹ ಕಚೇರಿಗೆ ಮೀಸಲಿರಿಸಲಾಗಿದೆ. ಎರಡನೇ ಮಹಡಿಯಲ್ಲಿ 600 ಚದರ ಅಡಿ ವಿಸ್ತೀರ್ಣದ 300 ಜನರು ಕೂರಬಹುದಾದ ಮೀಟಿಂಗ್ ಹಾಲ್ ವ್ಯವಸ್ಥೆ ಗೊಳಿಸಲಾಗಿದೆ. ಇದರಲ್ಲಿ ಸರಕಾರಿ ಕಾರ್ಯಕ್ರಮಗಳು ಅಲ್ಲದೆ ಖಾಸಗಿ ಕಾರ್ಯಕ್ರಮಗಳಿಗೆ ಬಾಡಿಗೆ ಆಧಾರದಲ್ಲಿ ನೀಡುವ ಯೋಜನೆ ಇದೆ. ತಳ ಅಂತಸ್ತಿನ ರಸ್ತೆಬದಿಯಲ್ಲಿ ಆರು ಅಂಗಡಿಗಳ ವಾಣಿಜ್ಯ ಸಂಕೀರ್ಣವನ್ನು ನಿರ್ಮಿಸಲಾಗಿದ್ದು, ಶೀಘ್ರದಲ್ಲಿ ಹರಾಜಿನ ಮೂಲಕ ಇವುಗಳನ್ನು ನೀಡಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ತಾಪಂ ಉಪಾಧ್ಯಕ್ಷೆ ಪೂರ್ಣಿಮಾ ಪೂಜಾರಿ, ಕಾರ್ಯನಿರ್ವಾಹಕ ಅಧಿಕಾರಿ ಜಿ.ಸದಾನಂದ, ಇಂಜಿನಿಯರ್ ಪ್ರದೀಪ್ ಭಟ್ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X