Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹೊಟ್ಟೆಪಾಡಿಗಾಗಿ ವಲಸೆ ಬಂದವರ ವಿರುದ್ಧ...

ಹೊಟ್ಟೆಪಾಡಿಗಾಗಿ ವಲಸೆ ಬಂದವರ ವಿರುದ್ಧ ಧ್ವನಿ ಎತ್ತುವುದು ಸರಿಯಾದ ಕ್ರಮವಲ್ಲ: ಕೆ.ನೀಲಾ

ವಾರ್ತಾಭಾರತಿವಾರ್ತಾಭಾರತಿ9 Feb 2020 11:26 PM IST
share
ಹೊಟ್ಟೆಪಾಡಿಗಾಗಿ ವಲಸೆ ಬಂದವರ ವಿರುದ್ಧ ಧ್ವನಿ ಎತ್ತುವುದು ಸರಿಯಾದ ಕ್ರಮವಲ್ಲ: ಕೆ.ನೀಲಾ

ಬೆಂಗಳೂರು, ಫೆ.9: ಹೊಟ್ಟೆಪಾಡಿಗಾಗಿ ದುಡಿಯಲು ಬಂದವರನ್ನು ರಾಜ್ಯ ಬಿಟ್ಟು ಹೋಗಿ ಎನ್ನುವುದು ತಪ್ಪಾಗುತ್ತದೆ. ಸರಕಾರವೇ ಉದ್ಯೋಗದ ವಿಚಾರದಲ್ಲಿ ಹೊಸ ನೀತಿಗಳನ್ನು ಜಾರಿಗೆ ತರಬೇಕೆಂದು ಸಾಮಾಜಿಕ ಚಿಂತಕಿ, ಬರಹಗಾರ್ತಿ ಕೆ.ನೀಲಾ ಅಭಿಪ್ರಾಯಪಟ್ಟಿದ್ದಾರೆ.

ರವಿವಾರ ಪುರ ಭವನದ ಮುಂಭಾಗ ಕನ್ನಡಪರ ಸಂಘಟನೆಗಳು ಆಯೋಜಿಸಿದ್ದ ವಲಸಿಗರೆ ಕರ್ನಾಟಕ ಬಿಟ್ಟು ತೊಲಗಿ ಎಂಬ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ದುಡಿಯಲು ಹೋಗಲು ಅವಕಾಶವಿದೆ. ಅದೇ ರೀತಿಯಾಗಿ ರಾಜ್ಯದ ಕನ್ನಡಿಗರು ಮುಂಬೈ ಸೇರಿ ಇನ್ನಿತರ ರಾಜ್ಯಗಳಿಗೆ ದುಡಿಯಲು ಹೋಗಿದ್ದಾರೆ. ಆ ರಾಜ್ಯದವರು ಏನಾದರೂ ಕನ್ನಡಿಗರು ತಮ್ಮ ರಾಜ್ಯಗಳಿಗೆ ಹೋಗಿ ಎಂದರೆ ಸಮಸ್ಯೆಗಳು ಮತ್ತಷ್ಟು ಜಟಿಲವಾಗುತ್ತದೆ. ಹೀಗಾಗಿ, ಕರ್ನಾಟಕ ಸರಕಾರವೇ ಉದ್ಯೋಗದ ವಿಚಾರದಲ್ಲಿ ಹೊಸ ನೀತಿಗಳನ್ನು ಜಾರಿಗೆ ತರಬೇಕೆಂದು ಅಭಿಪ್ರಾಯಪಟ್ಟರು.

ಸದ್ಯ ಎಲ್ಲ ಸರಕಾರಿ ವಲಯಗಳು ಖಾಸಗೀಕರಣಗೊಳ್ಳುತ್ತಿದೆ. ಮಾಲಕರೂ ತಮಗೆ ಬೇಕಾದವರಿಗೆ ಕೆಲಸ ನೀಡುತ್ತಿದ್ದಾರೆ. ಹಾಗೊಂದು ಬಾರಿ ಉದ್ಯೋಗಕ್ಕಾಗಿ ವಲಸೆ ಬರುವವರನ್ನು ತಡೆಗಟ್ಟಲು ಹೋದರೆ, ಕೋಮುವಾದಕ್ಕೆ ಆಸ್ಪದ ಮಾಡಿಕೊಡುವ ಸಾಧ್ಯತೆ ಇದೆ ಎಂದು ಹೇಳಿದರು.

ನಾಟಕಕಾರ, ನಿರ್ದೇಶಕ ಬಿ. ಸುರೇಶ್ ಮಾತನಾಡಿ, ಅನ್ಯ ಭಾಷಿಗರನ್ನು ರಾಜ್ಯ ಬಿಟ್ಟು ತೊಲಗಿ ಎಂದು ಹೇಳುವುದು ಸರಿಯಾದ ನಿಲುವಲ್ಲ ಬದಲಾಗಿ ಅವರನ್ನು ನಾವು ಒಳಗೊಳ್ಳಬೇಕು. ಸರಕಾರಿ ಹಾಗೂ ಖಾಸಗಿ ಕ್ಷೇತ್ರಗಳ ಉದ್ಯೋಗದಲ್ಲಿ ಸ್ಥಳೀಯರಿಗೆ ಅಂದರೆ ಕನ್ನಡ ಮಾತನಾಡುವವರಿಗೆ ಶೇ.60 ರಷ್ಟು ಅವಕಾಶವನ್ನು ನೀಡಬೇಕು. ಜೊತೆಗೆ ಕರ್ನಾಟಕಕ್ಕೆ ಬಂದವರು ಕನ್ನಡವನ್ನು ಕಡ್ಡಾಯವಾಗಿ ಕಲಿಯಬೇಕು ಎಂದರು.

ಡಿವೈಎಫ್‌ಐ ಯುವಜನ ಸಂಘಟನೆಯ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ, ನಿರುದ್ಯೋಗದ ವಿರುದ್ಧವಾದ ಹೋರಾಟಗಳು ಸರಕಾರದ ನೀತಿಗಳ ವಿರುದ್ಧ ಹಾಗೂ ಉದ್ಯೋಗ ಸೃಷ್ಟಿಗಾಗಿ ನಡೆಯಬೇಕು. ಹೊರತಾಗಿ, ಪರರಾಜ್ಯದ ವಲಸೆ ಕಾರ್ಮಿಕರ ವಿರುದ್ಧ ದ್ವೇಷ ಹುಟ್ಟಿಸುವುದು ಉದ್ಯೋಗ ಹಕ್ಕಿನ ವಿರುದ್ಧದ ಹೋರಾಟವನ್ನು ದಾರಿತಪ್ಪಿಸುತ್ತದೆ. ಸ್ಥಳೀಯರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಿ ಎಂದು ಕೇಳುವುದು ಸರಿಯಾಗಿದೆ. ಆದರೆ ಬೇರೆ ರಾಜ್ಯದ ಜನರ ವಿರುದ್ಧ ಕನ್ನಡಿಗರನ್ನು ಎತ್ತಿಕಟ್ಟುವುದು ತಪ್ಪಾದ ನಡೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X