ಹಿರಿಯಡಕ: ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮ
![ಹಿರಿಯಡಕ: ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮ ಹಿರಿಯಡಕ: ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮ](https://www.varthabharati.in/sites/default/files/images/articles/2020/02/10/231541-1581351376.jpg)
ಉಡುಪಿ, ಫೆ.10: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡಕದ ಸಹಯೋಗದಲ್ಲಿ ‘ಡಾ.ಬಿ.ಆರ್.ಅಂಬೇಡ್ಕರ್ ಓದು’ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು.
ಸುಂಕದಕಟ್ಟೆಯ ನಿರಂಜನಸ್ವಾಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ರಾದ ಡಾ.ಲತಾ ಕೆ., ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಉಪನ್ಯಾಸ ನೀಡಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ತಿಳಿಸಿದಂತೆ ಶಿಕ್ಷಣ, ಸಂಘಟನೆ ಹಾಗೂ ಹೋರಾಟದಿಂದ ಸಾಮಾಜಿಕ ನ್ಯಾಯವನ್ನು ಪಡೆಯಲು ಸಾಧ್ಯ. ಭ್ರಾತೃತ್ವ ಭಾವದಿಂದ ಬದುಕಿದಾಗ ಸಂವಿಧಾನದ ಆಶಯ ಈಡೇರುತ್ತದೆ ಎಂದು ಅಭಿಪ್ರಾಯಪಟ್ಟರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ನಿಕೇತನ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಸುಜಯಾ ಕೆ.ಎಸ್. ಅತಿಥಿಗಳನ್ನು ಪರಿಚಯಿಸಿದರು. ಕನ್ನಡ ಉಪನ್ಯಾಸಕ ರವಿಚಂದ್ರ ಬಾಯಿರಿ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ. ರಾಘವೇಂದ್ರ ಪಿ.ಕೆ. ವಂದಿಸಿದರು.