ಸಹಕಾರ ಖಾತೆಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ: ನೂತನ ಸಚಿವ ಎಸ್.ಟಿ. ಸೋಮಶೇಖರ್

ಬೆಂಗಳೂರು, ಫೆ.10: ಸಹಕಾರ ಖಾತೆ ಸಿಕ್ಕಿದ್ದಕ್ಕೆ ಸಂತಸವಾಗಿದೆ. ಮೊದಲ ಬಾರಿಗೆ ಸಹಕಾರ ಸಚಿವನಾಗುವ ಅವಕಾಶ ಸಿಕ್ಕಿದೆ. ಅದಕ್ಕಾಗಿ ಕ್ಷೇತ್ರದ ಜನತೆ ಹಾಗೂ ಸಹಕಾರಿ ವಲಯದವರ ಪರವಾಗಿ ಮುಖ್ಯಮಂತ್ರಿ ಯಡಿಯೂರಪ್ಪಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ನೂತನ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತದ್ದೇ ಖಾತೆ ಬೇಕು ಎಂದು ನಾನು ಬೇಡಿಕೆ ಇಟ್ಟಿರಲಿಲ್ಲ. ಯಾವ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಹೇಳಿದ್ದೆ ಎಂದರು.
ಸಹಕಾರ ವಲಯದಲ್ಲಿ ನಾನಗೆ ಸಾಕಷ್ಟು ಅನುಭವವಿದೆ. ಅದರ ಆಧಾರದಲ್ಲಿ ಸಹಕಾರ ಇಲಾಖೆಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಸೋಮಶೇಖರ್ ವಿಶ್ವಾಸ ವ್ಯಕ್ತಪಡಿಸಿದರು.
Next Story





