Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವೈವಿಧ್ಯ
  3. ಕೊಲೆಸ್ಟ್ರಾಲ್ ಅಪಾಯಗಳು

ಕೊಲೆಸ್ಟ್ರಾಲ್ ಅಪಾಯಗಳು

-ಎನ್.ಕೆ.-ಎನ್.ಕೆ.11 Feb 2020 12:12 AM IST
share
ಕೊಲೆಸ್ಟ್ರಾಲ್ ಅಪಾಯಗಳು

ಕೊಲೆಸ್ಟ್ರಾಲ್‌ನ ಅಪಾಯ ಇಂದು ಎಷ್ಟು ಸಾಮಾನ್ಯವಾಗಿಬಿಟ್ಟಿದೆ ಎಂದರೆ ಯುವಜನರು, ಮಧ್ಯವಯಸ್ಕರು ಮತ್ತು ಹಿರಿಯರು ಎಂಬ ಭೇದವಿಲ್ಲದೆ ಎಲ್ಲರೂ ಎಚ್ಚರಿಕೆಯಿಂದಿರಬೇಕಿದೆ. ಅದು ಎಷ್ಟೊಂದು ಅಪಾಯಕಾರಿಯೆಂದರೆ ತನ್ನ ಬಗ್ಗೆ ಸ್ವಲ್ಪವೂ ಸುಳಿವು ಬಿಟ್ಟುಕೊಡದೆ ನಮ್ಮ ಒಟ್ಟಾರೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ವುೂಲಕ ದಿಢೀರ್ ಪ್ರಕಟಗೊಳ್ಳುತ್ತದೆ.

ಶರೀರಕ್ಕೆ ಕೊಲೆಸ್ಟ್ರಾಲ್ ಅಗತ್ಯವಾಗಿದೆ ಎನ್ನುವುದು ಗಮನಿಸಬೇಕಾದ ಮುಖ್ಯ ಅಂಶವಾಗಿದೆ. ಅದು ಜೀವಕೋಶಗಳ ರಚನೆ ಮತ್ತು ಹಾರ್ಮೋನ್‌ಗಳಿಗೆ ಅಗತ್ಯವಾಗಿರುವ ರಾಸಾಯನಿಕ ಸಂಯುಕ್ತವಾಗಿದೆ. ಆದರೆ ಶರೀರದಲ್ಲಿ ಈ ಕೊಲೆಸ್ಟ್ರಾಲ್ ಪ್ರಮಾಣಕ್ಕೂ ಒಂದು ಮಿತಿಯಿದೆ, ಈ ಮಿತಿಯನ್ನು ದಾಟಿದಾಗ ಮಾತ್ರ ಅದು ಶರೀರದ ಮೇಲೆ ದುಷ್ಪರಿಣಾಮಗಳನ್ನು ಬೀರಲು ಆರಂಭಿಸುತ್ತದೆ. ಅಧಿಕ ಕೊಲೆಸ್ಟ್ರಾಲ್ ಮಟ್ಟ ಇರುವವರು ಹೃದ್ರೋಗ, ಹೃದಯಾಘಾತ ಮತ್ತು ಬಾಹ್ಯ ಅಪಧಮನಿ ರೋಗ ಇವುಗಳಿಗೆ ತುತ್ತಾಗುವ ಹೆಚ್ಚಿನ ಅಪಾಯದಲ್ಲಿರುತ್ತಾರೆ.

ಅಧಿಕ ಕೊಲೆಸ್ಟ್ರಾಲ್ ಹೃದಯ ರಕ್ತನಾಳಗಳ ರೋಗಕ್ಕೆ ಕಾರಣವಾಗುತ್ತದೆ. ಕೊರೊನರಿ ಮತ್ತು ಕ್ಯಾರೊಟಿಡ್ ಅಪಧಮನಿಗಳು ಹೆಚ್ಚುವರಿ ಕೊಲೆಸ್ಟ್ರಾಲ್ ಸಂಗ್ರಹಗೊಳ್ಳಲು ಪ್ರಶಸ್ತ ತಾಣಗಳಾಗಿವೆ. ಇವುಗಳಲ್ಲಿ ಕೊಲೆಸ್ಟ್ರಾಲ್ ಸಂಗ್ರಹಗೊಂಡಾಗ ಈ ರಕ್ತನಾಳಗಳು ಕಿರಿದಾಗಿ ರಕ್ತಸಂಚಾರಕ್ಕೆ ವ್ಯತ್ಯಯವುಂಟಾಗುತ್ತದೆ. ಕೊರೊನರಿ ಅಪಧಮನಿಯಲ್ಲಿ ಇಂತಹ ಬೆಳವಣಿಗೆಯುಂಟಾದಾಗ ಅದು ಆ್ಯಂಜಿನಾ ಅಥವಾ ಮಯೊಕಾರ್ಡಿಯಲ್ ಇನ್ಫಾರ್ಕ್ಷನ್‌ಗೆ ಕಾರಣವಾಗುತ್ತದೆ ಮತ್ತು ಕ್ಯಾರೊಟಿಡ್‌ಅಪಧಮನಿಗಳ ಪ್ರಕರಣದಲ್ಲಿ ಅದು ಆಘಾತಕ್ಕೆ ಕಾರಣವಾಗುತ್ತದೆ. ಅಧಿಕ ಕೊಲೆಸ್ಟ್ರಾಲ್ ತಾನಾಗಿಯೇ ಹೃದಯ ಬಡಿತದ ದರದ ಮೇಲೆ ಯಾವುದೇ ಪರಿಣಾಮವನ್ನು ಬೀರುವುದಿಲ್ಲ, ಆದರೆ ಅದು ಹೃದಯದ ಅಪಧಮನಿಗಳಲ್ಲಿ ಸಂಗ್ರಹಗೊಂಡರೆ ಹೃದಯಾಘಾತಕ್ಕೆ ಕಾರಣವಾಗುತ್ತದೆ, ಹೃದಯವು ರಕ್ತವನ್ನು ಪಂಪ್‌ಮಾಡುವ ಪ್ರಕ್ರಿಯೆ ನಿಧಾನಗೊಳ್ಳುತ್ತದೆ ಮತ್ತು ಆಗ ಹೃದಯ ಬಡಿತದಲ್ಲಿ ಏರುಪೇರಾಗುತ್ತದೆ.

ಅನಾರೋಗ್ಯಕ್ಕೆ ಸಕಾಲದಲ್ಲಿ ಚಿಕಿತ್ಸೆ ಪಡೆಯಬೇಕು ಎಂದು ವೈದ್ಯರು ಹೇಳುವುದಕ್ಕೂ ಕಾರಣವಿದೆ. ಅಧಿಕ ಕೊಲೆಸ್ಟ್ರಾಲ್ ದೀರ್ಘ ಕಾಲದಲ್ಲಿ ಹೃದಯ ಮತ್ತು ಮೆದುಳಿಗೆ ರಕ್ತವನ್ನು ಪೂರೈಸುವ ರಕ್ತನಾಳಗಳಲ್ಲಿ ತಡೆಗಳನ್ನು ಸೃಷ್ಟಿಸಬಹುದು. ಹೀಗಾಗಿ ಇದನ್ನು ತಡೆಯಲು ಆರಂಭಿಕ ಹಂತದಲ್ಲಿಯೇ ಚಿಕಿತ್ಸೆಯು ಅಗತ್ಯವಾಗಿದೆ.

ನಮ್ಮ ಶರೀರದಲ್ಲಿ ಒಟ್ಟು ಕೊಲೆಸ್ಟ್ರಾಲ್ ಪ್ರಮಾಣ 200 ಎಂಜಿ/ಡಿಎಲ್‌ಗಿಂತ ಕಡಿಮೆಯಿರಬೇಕು. ಎಲ್‌ಡಿಎಲ್ ಕೊಲೆಸ್ಟ್ರಾಲ್ 100 ಎಂಜಿ/ಡಿಎಲ್‌ಗಿಂತ ಕಡಿಮೆ ಮತ್ತು ಎಚ್‌ಡಿಎಲ್ ಕೊಲೆಸ್ಟ್ರಾಲ್ 40 ಎಂಜಿ/ಡಿಎಲ್‌ಗಿಂತ ಹೆಚ್ಚಿರಬೇಕು. ಕೊಲೆಸ್ಟ್ರಾಲ್ ಮುಖ್ಯವಾಗಿ ಯಕೃತ್ತಿನಲ್ಲಿರುವ ಕಿಣ್ವಗಳಿಂದ ಸಂಸ್ಕರಿಸಲ್ಪಡುತ್ತದೆ. ಆಹಾರದ ಮೂಲಕ ಭಾಗಶಃ ಕೊಲೆಸ್ಟ್ರಾಲ್ ನಮ್ಮ ಶರೀರವನ್ನು ಸೇರಿಕೊಳ್ಳುತ್ತದೆ.

ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿರಿಸಲು ಕೊಲೆಸ್ಟ್ರಾಲ್ ಅಂಶಗಳು ಹೆಚ್ಚಿರುವ ಆಹಾರ ಗಳನ್ನು ಸೇವಿಸುವುದನ್ನು ಕಡಿಮೆಮಾಡಬೇಕು.

share
-ಎನ್.ಕೆ.
-ಎನ್.ಕೆ.
Next Story
X