ಟ್ವಿಟರ್‌ನಲ್ಲಿ ಎಲ್ಲರ ಮನಗೆದ್ದ ಪುಟಾಣಿ ಕೇಜ್ರಿವಾಲ್

ಹೊಸದಿಲ್ಲಿ, ಫೆ.11: ದಿಲ್ಲಿಯ ಆಮ್ ಆದ್ಮಿ ಪಕ್ಷದ ಕಚೇರಿ ಎದುರು ಕಾಣಿಸಿಕೊಂಡ ಈ ಮಫ್ಲರ್ ಧರಿಸಿದ್ದ ಮಗು ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಆಕರ್ಷಣೆಯ ಕೇಂದ್ರಬಿಂದುವಾಗಿದೆ.
ಆಪ್ ತನ್ನ ಟ್ವಿಟರ್ ಖಾತೆಯಲ್ಲಿ ಈ ಮಗುವಿನ ಚಿತ್ರವನ್ನು ಟ್ವೀಟ್ ಮಾಡಿದ ಬಳಿಕ ಮಧ್ಯಾಹ್ನ 1 ರ ಸುಮಾರಿಗೆ 9,000ಕ್ಕೂ ಅಧಿಕ ಮಂದಿ ಲೈಕ್ ಮಾಡಿದ್ದಾರೆ.
ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಅದ್ಮಿ ಪಕ್ಷ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಅಧಿಕಾರವನ್ನು ತನ್ನಲ್ಲೇ ಉಳಿಸಿಕೊಳ್ಳುವ ದಾಪುಗಾಲಿಟ್ಟಿದ್ದು, 58 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 12 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ಶೂನ್ಯ ಸಂಪಾದಿಸಿದೆ.
Next Story





