Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 2023ರಲ್ಲಿ ಜೆಡಿಎಸ್ ಅನ್ನು ಮತ್ತೆ...

2023ರಲ್ಲಿ ಜೆಡಿಎಸ್ ಅನ್ನು ಮತ್ತೆ ಅಧಿಕಾರಕ್ಕೆ ತರುತ್ತೇನೆ: ಎಚ್.ಡಿ.ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ11 Feb 2020 6:31 PM IST
share
2023ರಲ್ಲಿ ಜೆಡಿಎಸ್ ಅನ್ನು ಮತ್ತೆ ಅಧಿಕಾರಕ್ಕೆ ತರುತ್ತೇನೆ: ಎಚ್.ಡಿ.ದೇವೇಗೌಡ

ಬೆಂಗಳೂರು, ಫೆ.11: ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಅನೇಕ ಜನ ನನ್ನ ಸ್ನೇಹಿತರಿದ್ದಾರೆ. ಅವರ್ಯಾರಿಗೂ ಆ ಎರಡು ಪಕ್ಷದಲ್ಲಿ ಇರೋಕೆ ಇಷ್ಟ ಇಲ್ಲ. ಆದರೆ, ಕೆಲವು ಅಧಿಕಾರಶಾಹಿಗಳಿಗೆ ಹೆದರಿ ಆ ಪಕ್ಷದಲ್ಲಿ ಇದ್ದಾರೆಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನತಾ ಪರಿವಾರದ ಹಲವು ನಾಯಕರು ಸದ್ಯ ಬೇರೆ ಬೇರೆ ಪಕ್ಷಗಳಲ್ಲಿ ಇದ್ದಾರೆ. ಅವರನ್ನೆಲ್ಲಾ ಒಗ್ಗೂಡಿಸುವಂತೆ ನಾಯಕರು ಮನವಿ ಮಾಡಿದ್ದಾರೆ. ಕೆಲ ರಾಷ್ಟ್ರೀಯ ನಾಯಕರು ನನ್ನನ್ನು ಸಂಪರ್ಕಿಸಿದ್ದು, ಒಗ್ಗೂಡುವಂತೆ ಮನವಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ ನಮಗೆ ಸಮಯಾವಕಾಶ ಬೇಕು. ಡಿಸೆಂಬರ್ 2020ರೊಳಗೆ ನಮ್ಮ ಪಕ್ಷಕ್ಕೆ ಬರುವವರನ್ನೆಲ್ಲಾ ಒಗ್ಗೂಡಿಸಲು ಯತ್ನಿಸಲಾಗುತ್ತದೆ ಎಂದು ಹೇಳಿದರು.

ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸೋಲಿಗೆ ಉತ್ತರ ಈಗ ಕೊಡುವುದಿಲ್ಲ. ನನಗೆ ವಯಸ್ಸು 82 ಇರಬಹುದು, ಆದರೆ ಆ ವಯಸ್ಸು ನನಗೆ ಯಾವುದೇ ಅಡ್ಡಿ ಆಗಲ್ಲ. 2023ರಲ್ಲಿ ಜೆಡಿಎಸ್ ಅನ್ನು ಮತ್ತೆ ಅಧಿಕಾರಕ್ಕೆ ತರಲಿದ್ದೇನೆ. ಅದಕ್ಕಾಗಿ ಹೋರಾಟ ಮಾಡಲು ಸಿದ್ಧನಿದ್ದೇನೆ ಎಂದು ಅವರು ಹೇಳಿದರು.

2023ರ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಪ್ರಯತ್ನ ಮಾಡಲಿದ್ದೇನೆ. ಯಾರಿಗೂ ಹೆದರುವ ಅಗತ್ಯ ಇಲ್ಲ. ನಾನು ಹೋರಾಟ ಮಾಡಲು ಸಿದ್ಧನಿದ್ದೇನೆ. ಪಕ್ಷದ ಸಂಘಟನೆಗಾಗಿ ನಾನು ಏನು ಬೇಕಾದರೂ ಮಾಡಲು ಸಿದ್ಧನಿದ್ದೇನೆ. ಮಂತ್ರಿಗಳಿಗೆ, ಪೊಲೀಸರಿಗೆ ಹೆದರುವ ಅಗತ್ಯವಿಲ್ಲ. ನಿಷ್ಠಾವಂತ ಕಾರ್ಯಕರ್ತರನ್ನು ಕೈ ಬಿಡುವುದಿಲ್ಲ. ಮುಂದಿನ ದಿನಗಳಲ್ಲಿ 45,000 ಮಹಿಳೆಯರನ್ನು ಒಟ್ಟುಗೂಡಿಸಿ ಅರಮನೆ ಮೈದಾನದಲ್ಲಿ ಮಹಿಳಾ ಸಮಾವೇಶ ಮಾಡಲಿದ್ದೇವೆ ಎಂದು ಅವರು ಹೇಳಿದರು.

ಅರವಿಂದ್ ಕೇಜ್ರಿವಾಲ್ ತಾನು ಕಟ್ಟಿದ ಪಕ್ಷಕ್ಕೆ ನಿಷ್ಠೆಯಿಂದ ಇದ್ದವರು. ಮೊದಲ ಬಾರಿ ಅಧಿಕಾರ ಕಳೆದುಕೊಂಡರು. ಎರಡನೇ ಬಾರಿ ಅಧಿಕಾರ ಪಡೆದರು. ಅವರ ನಿರಂತರ ಹೋರಾಟ ಪರಿಶ್ರಮದಿಂದ ಇವತ್ತು ಎಎಪಿ ಜಯ ಗಳಿಸಿದೆ. ಕೇಜ್ರಿವಾಲ್ ಜನರ ಸಾಮಾನ್ಯ ಸಮಸ್ಯೆಗಳತ್ತ ಗಮನ ಹರಿಸಿ ಜನಪರ ಯೋಜನೆಗಳನ್ನು ತಂದರು. ಶಿಕ್ಷಣ, ನೀರಾವರಿ, ಸಾರಿಗೆ ಸೇರಿದಂತೆ ಜನಸಾಮಾನ್ಯರ ಅಗತ್ಯತೆಗಳಿಗೆ ವಿಶೇಷ ಒತ್ತು ನೀಡಿದರು. ಅದರ ಪರಿಣಾಮವಾಗಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿದೆ.

-ಎಚ್.ಡಿ.ದೇವೇಗೌಡ, ಜೆಡಿಎಸ್ ವರಿಷ್ಠ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X