Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಂಸತ್ತಿನಲ್ಲಿ ಶೇ.50ರಷ್ಟು ಅಪರಾಧ...

ಸಂಸತ್ತಿನಲ್ಲಿ ಶೇ.50ರಷ್ಟು ಅಪರಾಧ ಹಿನ್ನೆಲೆಯುಳ್ಳವರು: ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಡಾ.ಶಂಕರ ಬಿದರಿ

ವಾರ್ತಾಭಾರತಿವಾರ್ತಾಭಾರತಿ11 Feb 2020 7:38 PM IST
share
ಸಂಸತ್ತಿನಲ್ಲಿ ಶೇ.50ರಷ್ಟು ಅಪರಾಧ ಹಿನ್ನೆಲೆಯುಳ್ಳವರು: ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಡಾ.ಶಂಕರ ಬಿದರಿ

ಬೆಂಗಳೂರು, ಫೆ.11: ನ್ಯಾಯಾಂಗ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ತರುವ ಅವಶ್ಯಕತೆಯಿದ್ದು, ಪೊಲೀಸರು ನ್ಯಾಯಾಂಗದ ಅವಿಭಾಜ್ಯವಾಗಿ ಕಾರ್ಯನಿರ್ವಹಿಸಲು ಸ್ವತಂತ್ರ ಬೇಕಾಗಿದೆ ಎಂದು ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಡಾ.ಶಂಕರ ಬಿದರಿ ಹೇಳಿದ್ದಾರೆ.

ಮಂಗಳವಾರ ಜಯನಗರದ ನ್ಯಾಷನಲ್ ಕಾಲೇಜಿನ ಎಚ್.ಎನ್. ಕಲಾಕ್ಷೇತ್ರದಲ್ಲಿ ನ್ಯಾಷನ್ ಎಜುಕೇಷನ್ ಸೊಸೈಟಿ ಆಫ್ ಕರ್ನಾಟಕದ ವತಿಯಿಂದ ಆಯೋಜಿಸಿದ್ದ ಪರಿಣಾಮಕಾರಿ ಮಾಧ್ಯಮ ಮತ್ತು ಸಾರ್ವಜನಿಕ ಸಂಪರ್ಕ ವಿಷಯ ಕುರಿತ ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಾಗೂ ರಾಜ್ಯದ ಹಿತರಕ್ಷಣೆಗೆ ಮಾಧ್ಯಮ ಹಾಗೂ ಪೊಲೀಸ್ ಬಹುಮುಖ್ಯ ಪಾತ್ರ ವಹಿಸುತ್ತವೆ. ಈ ನಿಟ್ಟಿನಲ್ಲಿ ಮಾಧ್ಯಮಗಳು ವೃತ್ತಿಪರತೆ ಮತ್ತು ವಸ್ತುನಿಷ್ಠವಾಗಿ ನ್ಯಾಯಾಂಗ, ಶಾಸಕಾಂಗ ಮತ್ತು ಕಾರ್ಯಾಂಗದ ಲೋಪದೋಷಗಳನ್ನು ಹೊರಗೆಳೆದು ಸರಿಪಡಿಸಬೇಕು ಎಂದು ಸಲಹೆ ನೀಡಿದರು.

ಶೇ.50 ರಷ್ಟು ಅಪರಾಧ ಹಿನ್ನೆಲೆಯುಳ್ಳವರೇ ಸಂಸತ್ತಿನಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ನ್ಯಾಯಾಂಗ ವ್ಯವಸ್ಥೆ ಬಲಗೊಳ್ಳಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಅವರು, ನ್ಯಾಯಾಂಗ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಕಾಣಬೇಕಿದೆ ಎಂದು ತಿಳಿಸಿದರು.

ನಮ್ಮ ನ್ಯಾಯಾಂಗ ವ್ಯವಸ್ಥೆಯಲ್ಲಿ 1978ರ ಬೆಹಾಯಿ ಹತ್ಯಾಕಾಂಡ, ಬೋಫೋರ್ಸ್ ಹಗರಣದಂತಹ ಅನೇಕ ಪ್ರಕರಣಗಳು ಬೆಳಕಿಗೆ ಬಂದರೂ ಅಪರಾಧಿಗಳಿಗೆ ಶಿಕ್ಷೆಯಾಗಿಲ್ಲ. ಯಾವೊಂದು ಪ್ರಕರಣಗಳು ಇತ್ಯರ್ಥಗೊಂಡಿಲ್ಲ. ಪೊಲೀಸರು ನಡೆಸಿದ ತನಿಖೆಗೆ ಕಿಮ್ಮತ್ತಿಲ್ಲ. ದುಷ್ಟರನ್ನು ಶಿಕ್ಷಿಸಲು ಪೊಲೀಸರಿಗೆ ಸ್ವಾತಂತ್ರವೂ ಇಲ್ಲ. ಹೀಗಾಗಿ, ಕ್ರಿಮಿನಲ್ ಹಿನ್ನೆಲೆಯುಳ್ಳವರು ನಮ್ಮನ್ನಾಳುತ್ತಿದ್ದಾರೆ ಎಂದರು.

ಬದಲಾವಣೆ ತರಲು ಶ್ರೀರಾಮನೇ ಬಂದನೆಂದು ಭಾವಿಸಿ ದೇಶದ ಜನರು ಆತನ ಹಿಂಬಾಲಕರಾದರು. ಆದರೆ, ಕಳೆದ ಆರು ವರ್ಷಗಳಿಂದ ಯಾವುದೇ ಬದಲಾವಣೆಯಾಗಿಲ್ಲ. 20-30 ವರ್ಷಗಳಿಂದ ರಾಜ್ಯವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವಂತಹ ಒಬ್ಬ ಮುಖ್ಯಮಂತ್ರಿ ಬರಲಿಲ್ಲ. 224 ಕ್ಷೇತ್ರಗಳು ಪ್ರತ್ಯೇಕ ರಾಜ್ಯಗಳೇ ಆಗಿಬಿಟ್ಟಿವೆ. ಅಲ್ಲಿನ ಶಾಸಕನೇ ಅಲ್ಲಿನ ಮುಖ್ಯಮಂತ್ರಿಯಾಗಿಬಿಟ್ಟಿದ್ದಾನೆ. ಪ್ರಜೆಗಳ ಒಂದು ಪಡಿತರ ಚೀಟಿಗೂ ಶಾಸಕನ ಶಿಫಾರಸ್ಸು ಬೇಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ನಿವೃತ್ತ ಲೋಕಾಯುಕ್ತ ನ್ಯಾ.ಎನ್.ಸಂತೋಷ್ ಹೆಗ್ಡೆ ಮಾತನಾಡಿ, ದೇಶದ ಬಹುತೇಕರಲ್ಲಿ ಅಧಿಕಾರದಿಂದ ಹಣ, ಹಣದಿಂದ ಅಧಿಕಾರ ಎಂಬ ಭ್ರಮೆ ಇದ್ದು, ಶ್ರೀಮಂತಿಕೆ, ಅಧಿಕಾರ ಪೂಜಿಸುವ ಈ ಸಮಾಜದಲ್ಲಿ ಸತ್ಯವಂತರಿಗೆ ಬೆಲೆ ಇಲ್ಲದಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಎನ್‌ಇಎಸ್ ಕಾರ್ಯದರ್ಶಿ ಪ್ರೊ.ಎಸ್.ಎನ್.ನಾಗರಾಜರೆಡ್ಡಿ, ಪತ್ರಕರ್ತ ಗೌರೀಶ್ ಅಕ್ಕಿ, ಕಾಲೇಜು ಪ್ರಾಂಶುಪಾಲೆ ಡಾ.ಬಿ.ಆರ್.ಪರಿಣಿತ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಎಸ್.ಜಯಸಿಂಹ ಸೇರಿದಂತೆ ಮತ್ತಿತರರಿದ್ದರು.

ಹಾದಿ ತಪ್ಪಿದ ಮಾಧ್ಯಮ

ಇತ್ತೀಚಿನ ದಿನಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿಯೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇನ್ನು, ಕಾಸಿಗಾಗಿ ಸುದ್ದಿ ಮತ್ತು ಮೆಚ್ಚುಗೆ, ಬಣ್ಣಿಸುವ ಸುದ್ದಿ ಪ್ರಸಾರ ಅಧಿಕವಾಗಿದೆ. ಸುದ್ದಿ ಸಂಸ್ಥೆಗಳ ನೈತಿಕ ಮೌಲ್ಯಗಳು ಕುಸಿಯುತ್ತಿದೆ. ಸಮಾಜವನ್ನು ಸದಾ ಎಚ್ಚರದಲ್ಲಿಡಬೇಕಾದ ಮಾಧ್ಯಮವಿಂದು ಹಾದಿ ತಪ್ಪಿದೆ. ಶಾಸಕಾಂಗ, ಕಾರ್ಯಾಂಗ ಹಾಗೂ ಮಾಧ್ಯಮ ರಂಗದ ಮೇಲೆ ಜನರಿಗೆ ನಂಬಿಕೆ ಇಲ್ಲದಂತಾಗಿದೆ.

-ಸಂತೋಷ್ ಹೆಗ್ಡೆ, ನಿವೃತ್ತ ನ್ಯಾಯಮೂರ್ತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X