Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರತೀ ಗ್ರಾಪಂಗಳಲ್ಲಿ ತ್ಯಾಜ್ಯ ಘಟಕ...

ಪ್ರತೀ ಗ್ರಾಪಂಗಳಲ್ಲಿ ತ್ಯಾಜ್ಯ ಘಟಕ ಕಡ್ಡಾಯ: ದಿನಕರ ಬಾಬು

ವಾರ್ತಾಭಾರತಿವಾರ್ತಾಭಾರತಿ11 Feb 2020 8:40 PM IST
share

ಉಡುಪಿ, ಫೆ.11: ಡಿಸೆಂಬರ್ ಅಂತ್ಯದೊಳಗೆ ಉಡುಪಿ ಜಿಲ್ಲೆಯ ಪ್ರತಿ ಗ್ರಾಪಂಗಳಲ್ಲೂ ತ್ಯಾಜ್ಯ ಘಟಕ ಕಡ್ಡಾಯವಾಗಿ ಸ್ಥಾಪಿಸಬೇಕು ಎಂದು ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಜಿಲ್ಲೆಯ ಬಹುತೇಕ ಗ್ರಾಪಂಗಳಲ್ಲಿ ಈಗಾಗಲೇ ಘಟಕದ ಅನುಷ್ಠಾನ ಆಗಿದೆ. ಆದರೆ ಉಡುಪಿ ತಾಲೂಕಿನ ಗ್ರಾಪಂಗಳಲ್ಲಿ ಸಾಕಷ್ಟು ಹಿನ್ನಡೆ ಯಾಗಿದ್ದು, ಇದನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕು ಎಂದು ಅವರು ಸೂಚಿಸಿದರು.

ಜಿಪಂ ಮುಖ್ಯ ಯೋಜನಾ ಅಧಿಕಾರಿ ಶ್ರೀನಿವಾಸ್ ರಾವ್ ಮಾತನಾಡಿ, ಗ್ರಾಮೀಣ ನೈರ್ಮಲ್ಯಕ್ಕಾಗಿ ಆದ್ಯತೆಯನ್ನು ನೀಡಬೇಕು. ಸಾರ್ವಜನಿಕ ಸ್ಥಳದಲ್ಲಿ ಶೌಚಾಲಯದ ಬಳಕೆ ಆಗದೆ ಇದ್ದಲ್ಲಿ ಅದನ್ನು ಪರಿಶೀಲನೆ ಮಾಡಬೇಕು. ಸಿಂಗಲ್ ಪಿಟ್ ಟಾಯ್ಲೆಟ್‌ನಿಂದ ಆರೋಗ್ಯ ಸಮಸ್ಯೆ ಆಗುತ್ತಿದೆ. ಮುಂದಿನ ದಿನಗಳಲ್ಲಿ ಡಬಲ್ ಪಿಟ್ ಟಾಯ್ಲೆಟ್‌ಗೆ ಆದ್ಯತೆ ನೀಡಬೇಕು. ಹೊಸ ಮನೆ ಕಟ್ಟುವಾಗ ಡಬಲ್ ಪಿಟ್ ಟಾಯ್ಲೆಟ್‌ನ್ನು ತಯಾರಿಸುವಂತೆ ಷರತ್ ಹಾಕಬೇಕು. ಡೋರ್ ನಂಬರ್ ಕೊಡುವಾಗ ಅದನ್ನು ಖಾತ್ರಿ ಪಡಿಸಿಕೊಳ್ಳಬೇಕು. ಜನರಿಗೆ ಇದರ ಬಗ್ಗೆ ಅರಿವಿಲ್ಲ ದಿರುವುದರಿಂದ ಜನರಿಗೆ ಪ್ರಚಾರ ನೀಡಿ ಅರಿವನ್ನು ಮೂಡಿಸಬೇಕು ಎಂದರು.

ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಎಲ್ಲ ತಾಲೂಕುಗಳಲ್ಲಿ ಪ್ರೇರಣಾ ಶಿಬಿರಗಳನ್ನು ಆರಂಭಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಅನುಕೂಲ ವಾಗುವಂತೆ ಇಂತಹ ಶಿಬಿರಗಳನ್ನು ಇನ್ನಷ್ಟು ಹೆಚ್ಚಿಸಲಾಗುವುದು ಎಂದು ಸಭೆಗೆ ಡಿಡಿಪಿಐ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಮಲೇರಿಯಾ 6, ಚಿಕನ್‌ಗುನ್ಯಾ 5 ಪ್ರಕರಣಗಳು ಕಂಡು ಬಂದಿದ್ದು, ಈ ಪ್ರದೇಶದ ಪಂಚಾಯತ್‌ಗಳಲ್ಲಿ ರೋಗ ನಿಯಂತ್ರಣಕ್ಕೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ತಿಳಿಸಿದರು. ತೋಟಗಾರಿಕೆ ಇಲಾಖೆಯಡಿ ಹಣ್ಣು ಸಸಿಗಳ ವಿತರಣೆ ಶೇ.90 ರಷ್ಟು ಮಾಡಲಾಗಿದ್ದು, 150 ರಷ್ಟು ಹೆಕ್ಟೇರ್ ಅಭಿವೃದ್ದಿ ಆಗಿದೆ ಎಂದರು.

ಕುಂದಾಪುರ ತಾಲೂಕಿನ ಹೆಮ್ಮಾಡಿ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾಕಷ್ಟು ರೈತರು ಸೇವಂತಿಗೆ ಬೆಳೆಯುತ್ತಿದ್ದು, ಈ ವರ್ಷ ಇಳುವರಿ ಸಾಕಷ್ಟು ಕಡಿಮೆ ಯಾಗಿದೆ. ಈ ನಿಟ್ಟಿನಲ್ಲಿ ರೈತರಿಗೆ ಪರಿಹಾರ ನೀಡಬೇಕು ಎಂದು ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಶೋಭಾ ಜಿ.ಪುತ್ರನ್ ಆಗ್ರಹಿಸಿದರು.

ಜಿಲ್ಲೆಯ ಬಹುತೇಕ ಗ್ರಾಪಂಗಳು ವಿದ್ಯುತ್ ಬಳಕೆಯ ಶುಲ್ಕ ಲಕ್ಷಾಂತರ ರೂ. ಮೆಸ್ಕಾಂಗೆ ಬಾಕಿ ಇರಿಸಿವೆ. ಇದನ್ನು ಕೂಡಲೇ ಪಾವತಿಸಬೇಕು ಎಂದು ಸಭೆಯಲ್ಲಿ ಸೂಚಿಸಲಾಯಿತು. ಗ್ರಾಪಂಗಳಲ್ಲಿ ವಿದ್ಯುತ್ ಬಿಲ್ ಪಾವತಿಸಲು ಬಾಕಿ ಇದ್ದು, ಇದನ್ನು ಪರಿಶೀಲಿಸಬೇಕು ಎಂದರು.

ಸಭೆಯಲ್ಲಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಡಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋತ್, ಉಪ ಕಾರ್ಯದರ್ಶಿ ಕಿರಣ್ ಪಡ್ನೇಕರ್, ಯೋಜನಾ ನಿರ್ದೇಶಕ ಗುರುದತ್ತ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X