ಬಂದ್‌ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲವಿಲ್ಲ: ರಾಜ್ಯಾಧ್ಯಕ್ಷ ನಾರಾಯಣಗೌಡ
ಬೆಳಗಾವಿ, ಫೆ.11: ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳು ಫೆ.13ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ನೀಡುವುದಿಲ್ಲ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ. ಸರೋಜಿನಿ ಮಹಿಷಿ ವರದಿ ಜಾರಿ ವಿಚಾರವಾಗಿ ಕರವೇ ಹೋರಾಟ ಮುಂದುವರಿಯಲಿದೆ. ಆದರೆ, ವಿವಿಧ ಸಂಘಟನೆಗಳು ಕರೆ ನೀಡಿರುವ ಬಂದ್‌ಗೆ ಯಾವುದೇ ಬೆಂಬಲವನ್ನು ನೀಡುವುದಿಲ್ಲ. ಕೆಲ ಕನ್ನಡ ಸಂಘಟನೆಗಳು ಸುಖಾ ಸುಮ್ಮನೆ ಬಂದ್‌ಗೆ ಕರೆ ನೀಡುತ್ತಿವೆ. ಇದರ ನಷ್ಟ ಕನ್ನಡಿಗರಿಗೆ ಆಗುತ್ತದೆ ಎಂದು ತಿಳಿಸಿದರು.
ಮಾರ್ಚ್ ನಲ್ಲಿ ಡಾ. ಸರೋಜಿನಿ ಮಹಿಷಿ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಬೃಹತ್ ರ‍್ಯಾಲಿಯನ್ನು ಕರವೇ ಆಯೋಜನೆ ಮಾಡಲಿದೆ. ರ‍್ಯಾಲಿ ಮೂಲಕ ಮುಖ್ಯಮಂತ್ರಿಗಳಿಗೆ ವರದಿ ಜಾರಿ ಮಾಡಬೇಕು ಎಂದು ರಾಜ್ಯ ಸರಕಾರವನ್ನು ಒತ್ತಾಯಿಸಲಾಗುವುದು ಎಂದು ತಿಳಿಸಿದರು.
Next Story





