ವಿಧಾನ ಮಂಡಲ ಅಧಿವೇಶನ: ಫೆ.16ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು, ಫೆ. 11: ಇದೇ ತಿಂಗಳ 17ರಿಂದ ಆರಂಭಗೊಳ್ಳಲಿರುವ ವಿಧಾನ ಮಂಡಲ ಅಧಿವೇಶನದ ಹಿನ್ನೆಲೆಯಲ್ಲಿ ಫೆ.16ರ ಸಂಜೆ 5ಗಂಟೆಗೆ ನಗರದ ಖಾಸಗಿ ಹೊಟೇಲ್‌ನಲ್ಲಿ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ವಿಧಾನ ಮಂಡಲ ಅಧಿವೇಶನದಲ್ಲಿ ಯಾವ ರೀತಿ ಚರ್ಚಿಸಬೇಕು. ಯಾವ ವಿಚಾರಗಳನ್ನು ಮುಂದಿಟ್ಟುಕೊಂಡು ಸರಕಾರವನ್ನು ತರಾಟೆಗೆ ತೆಗೆದುಕೊಳ್ಳಬೇಕು ಎಂಬುದು ಸೇರಿದಂತೆ ಸರಕಾರದ ವೈಫಲ್ಯಗಳ ವಿರುದ್ಧ ಅಧಿವೇಶನ ಕಲಾಪದಲ್ಲಿ ಹೇಗೆ ಹೋರಾಟ ನಡೆಸಬೇಕೆಂಬ ಬಗ್ಗೆ ಶಾಸಕರೊಂದಿಗೆ ಚರ್ಚಿಸುವ ಸಾಧ್ಯತೆಗಳಿವೆ.
ಪ್ರವಾಹ ಪರಿಹಾರ ವಿಳಂಬ, ಅಭಿವೃದ್ದಿ ಕಾರ್ಯಗಳಲ್ಲಿ ಹಿನ್ನಡೆ ಮುಂತಾದ ವಿಚಾರಗಳನ್ನು ಮುಂದಿಟ್ಟುಕೊಂಡು ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಕಾಂಗ್ರೆಸ್ ಕಾರ್ಯತಂತ್ರ ರೂಪಿಸುತ್ತಿದೆ. ಫೆ.16ರ ರವಿವಾರ ನಗರದ ಲಲಿತ್ ಅಶೋಕ್ ಹೊಟೇಲ್‌ನಲ್ಲಿ ಸಿಎಲ್‌ಪಿ ಕರೆಯಲಾಗಿದೆ ಎಂದು ಗೊತ್ತಾಗಿದೆ.
Next Story





