Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆಲೂರು ಸಿದ್ದಾಪುರ: ಫೆ.23ರಂದು ಅರೆಭಾಷೆ...

ಆಲೂರು ಸಿದ್ದಾಪುರ: ಫೆ.23ರಂದು ಅರೆಭಾಷೆ ಸಾಹಿತ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ12 Feb 2020 5:21 PM IST
share
ಆಲೂರು ಸಿದ್ದಾಪುರ: ಫೆ.23ರಂದು ಅರೆಭಾಷೆ ಸಾಹಿತ್ಯ ಸಮ್ಮೇಳನ

ಮಡಿಕೇರಿ, ಫೆ.12: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ದ್ವಿತೀಯ ಅರೆಭಾಷೆ ಸಾಹಿತ್ಯ ಸಮ್ಮೇಳನ ಹೊದ್ದೇಟಿ ಭವಾನಿಶಂಕರ್ ಅವರ ಅಧ್ಯಕ್ಷತೆಯಲ್ಲಿ ಫೆ.23 ರಂದು ಶನಿವಾರಸಂತೆ ಸಮೀಪದ ಆಲೂರು ಸಿದ್ದಾಪುರದ ಸಂಗಯ್ಯನಪುರದಲ್ಲಿ ನಡೆಯಲಿದೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅಕಾಡೆಮಿಯ ಅಧ್ಯಕ್ಷ ಲಕ್ಷ್ಮಿನಾರಾಯಣ ಕಜೆಗದ್ದೆ ಅವರು, ಆಲೂರು ಸಿದ್ದಾಪುರ ಅರೆಭಾಷೆ ಗೌಡ ಸಮಾಜದ ಸಹಯೋಗದಲ್ಲಿ ನಡೆಯಲಿರುವ ಸಮ್ಮೇಳನದ ಅಂಗವಾಗಿ ಅಂದು ಬೆಳಗ್ಗೆ 9.30ಕ್ಕೆ ನಡೆಯಲಿರುವ ಮೆರವಣಿಗೆಯನ್ನು ತಾಲೂಕು ಪಂಚಾಯತ್ ನಿವೃತ್ತ ವಿಸ್ತರಣಾಧಿಕಾರಿ ಕೆದಂಬಾಡಿ ಈರಪ್ಪ, ದ್ವಾರವನ್ನು ಅರಕಲಗೋಡು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಹುಲಿಮನೆ ಮಾದಪ್ಪ ಉದ್ಘಾಟಿಸಲಿದ್ದಾರೆ. ರಾಷ್ಟ್ರ ಧ್ವಜಾರೋಹಣವನ್ನು ಗಣಗೂರು ಗ್ರಾ.ಪಂ.ಅಧ್ಯಕ್ಷೆ ಸವಿತಾ ಸುಕುಮಾರ್, ಸಮ್ಮೇಳನದ ಧ್ವಜವನ್ನು ಅಲೂರುಸಿದ್ದಾಪುರ ಗ್ರಾ.ಪಂ.ಅಧ್ಯಕ್ಷೆ ವೀಣಾ ರಮೇಶ್ ಆರೋಹಣ ಮಾಡಲಿದ್ದಾರೆ ಎಂದರು.

ಬಳಿಕ ವಸ್ತು ಪ್ರದರ್ಶನವನ್ನು ಅಬ್ಬೂರುಕಟ್ಟೆ ಕ್ಷೇತ್ರದ ತಾ.ಪಂ. ಸದಸ್ಯೆ ಬಟ್ಯನ ಸವಿತಾ ಈರಪ್ಪ ಹಾಗೂ ಪುಸ್ತಕ ಪ್ರದರ್ಶನವನ್ನು ಗೋಪಾಲಪುರ ಕ್ಷೇತ್ರದ ತಾ.ಪಂ. ಸದಸ್ಯೆ ಲೀಲಾವತಿ ಮಹೇಶ್ ಅವರು ಉದ್ಘಾಟಿಸಲಿದ್ದಾರೆ ಎಂದರು.

ಸಮ್ಮೇಳನವನ್ನು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಉದ್ಘಾಟಿಸಲಿದ್ದು, ರಾಜ್ಯ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ಪುಸ್ತಕ ಲೋಕಾರ್ಪಣೆ: ಇದೇ ಸಂದರ್ಭ ಅಕಾಡೆಮಿ ವತಿಯಿಂದ ಪ್ರಕಟಿಸಲಾದ ಅರೆಭಾಷೆ ಕಾದಂಬರಿಗಳಾದ ‘ಪುಂಸ್ತ್ರೀ’, ‘ಕಲ್ಯಾಣಸ್ವಾಮಿ’ ಮತ್ತು ಕಥಾಸಂಕಲನ ‘ಅಪೂರ್ವ ಸಂಗಮ’ವನ್ನು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಲೋಕಾರ್ಪಣೆ ಮಾಡಲಿದ್ದು, ಶಾಸಕ ಕೆ.ಜಿ.ಬೋಪಯ್ಯ ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್, ಸೋ.ಪೇಟೆ ತಾ.ಪಂ. ಅಧ್ಯಕ್ಷೆ ಪುಷ್ಪಾ ರಾಜೇಶ್ ಭಾಗವಹಿಸಲಿದ್ದು, ನಿಕಟಪೂರ್ವ ಸಮ್ಮೇಳಾನಧ್ಯಕ್ಷ ಕೆ.ಆರ್.ಗಂಗಾಧರ ಅವರು ಸಮ್ಮೇಳನದ ಬಗ್ಗೆ ಮಾತನಾಡಲಿದ್ದಾರೆ. ತನ್ನ ಅಧ್ಯಕ್ಷತೆಯಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಜಿ.ಪಂ. ಸದಸ್ಯೆ ಸರೋಜಮ್ಮ, ಅಕಾಡೆಮಿಯ ಮಾಜಿ ಅಧ್ಯಕ್ಷರುಗಳಾದ ಕೊಲ್ಯದ ಗಿರೀಶ್, ಪಿ.ಸಿ.ಜಯರಾಂ ಭಾಗವಹಿಸಲಿದ್ದಾರೆ ಎಂದು ನುಡಿದರು.

ಅರೆಭಾಷೆ ಸಾಹಿತ್ಯ ವಿಚಾರಗೋಷ್ಠಿ

ಮಧ್ಯಾಹ್ನ 12ಗಂಟೆಗೆ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ವಿಶ್ವನಾಥ ಬದಿಕಾನ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಅರೆಭಾಷೆ ಸಾಹಿತ್ಯ ವಿಚಾರಗೋಷ್ಠಿಯಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ  ಅವರು ಅರೆಭಾಷೆ ಮತ್ತು ಸಂಸ್ಕೃತಿ ಅಂದು-ಇಂದು-ಮುಂದೆ ಹಾಗೂ ಸುಳ್ಯದ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಐ.ಸಿ.ಡಿ.ಎಸ್ ಮೇಲ್ವಿಚಾರಕಿ  ಶೈಲಜಾ ದಿನೇಶ್ ಅವರು ‘ಅರೆಭಾಷೆ ಮತ್ತು ಸಂಸ್ಕೃತಿ ಪ್ರಸರಣದಲ್ಲಿ ಅವ್ವ’ ಎಂಬ ವಿಷಯದ ಕುರಿತು ವಿಚಾರಮಂಡನೆ ಮಾಡಲಿದ್ದಾರೆ ಎಂದರು.

ಅಪರಾಹ್ನ 1ಗಂಟೆಗೆ ಊರುಬೈಲು ಲೋಕೇಶ್ ಮತ್ತು ತಂಡದವರಿಂದ ‘ಸಿರಿ ಸುಗ್ಗಿ’ ಜನಪದ ಶೈಲಿಯ ಅರೆಭಾಷೆ ಹಾಡುಗಳ ಗಾಯನ ನಡೆಯಲಿದ್ದು, 2ಗಂಟೆಗೆ ಬಾರಿಯಂಡ ಜೋಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಅರೆಭಾಷೆ ಕವಿಗೋಷ್ಠಿಯಲ್ಲಿ ಕವಿಗಳಾದ ಎಡಿಕೇರಿ ವಿಶ್ವನಾಥ, ವಿನೋದ್ ಮೂಡಗದ್ದೆ, ಲೀಲಾ ದಾಮೋದರ, ಕೃಪಾ ದೇವರಾಜ್ ಪೂಜಾರಿರ, ಸಂಜೀವ ಕುದ್ಪಾಜೆ ಮತ್ತು ಹರ್ಷಿತಾ ಪೇರಿಯನ ಕವನಗಳನ್ನು ವಾಚಿಸಲಿದ್ದಾರೆ ಎಂದರು ತಿಳಿಸಿದರು.

ಸಮಾರೋಪ-ಸನ್ಮಾನ: ಅಪರಾಹ್ನ ಗಂಟೆ 3ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಸಂಸದ ಪ್ರತಾಪ್ ಸಿಂಹ ಅಧ್ಯಕ್ಷತೆವಹಿಸಲಿದ್ದು, ಮೈಸೂರಿನ ವಿಶ್ರಾಂತ ಕುಲಪತಿ ಡಾ. ಕೊಳಂಬೆ ಚಿದಾನಂದ ಗೌಡ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದು, ಈ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹೊಸೂರು ಶಿವಪ್ರಕಾಶ್ (ಸಮಾಜ ಸೇವೆ) ಅತ್ಯಾಡಿ.ಎಂ.ಪೂವಯ್ಯ (ಸಂಸ್ಕೃತಿ) ಅಜಿರಂಗಲ ರಾಮಣ್ಣ (ಕೃಷಿ) ನವನೀತ ಪಟ್ಟೆಮನೆ (ಕ್ರೀಡೆ), ಪಿ.ಜಿ.ಅಂಬೆಕಲ್ (ಸಾಹಿತ್ಯ) ಹರಿಪ್ರಸಾದ್ ಅಡ್ಪಂಗಾಯ (ಪತ್ರಿಕೋದ್ಯಮ), ನಿಂಗರಾಜು ನಂಗಾರು (ಶಿಕ್ಷಣ) ಅಮ್ಮಾಜೀರ ಹರ್ಷಿತ್ (ಯುವ ಸಾಧಕ) ಅವನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.

ಸಂಜೆ 5ಕ್ಕೆ ಪೊನಿಧ್ವನಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಾವೇರಿ ನಾಡ್ ಕಲಾವಿದರಿಂದ ನಾಟ್ಯರೂಪಕ ‘ನಾಡ್‍ನ ಸಂಸ್ಕೃತಿ ಹಿರಿಮೆ’ ನಾಟ್ಯ ರೂಪಕ, ಆಲೂರು ಸಿದ್ದಾಪುರ ಅರೆಭಾಷೆ ಗೌಡ ಸಮಾಜದವರಿಂದ ಅರೆಭಾಷೆ ಸಾಂಸ್ಕೃತಿಕ ವೈವಿಧ್ಯ ನಡೆಯಲಿದೆ ಎಂದು ತಿಳಿಸಿದರು.

ಪುಸ್ತಕ ಮಾರಾಟಕ್ಕೆ ಮಳಿಗೆಗಳು ಲಭ್ಯವಿದ್ದು, ಮಾರಾಟ ಮಾಡಲು ಇಚ್ಛಿಸುವವರು ರಿಜಿಸ್ಟ್ರಾರ್ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಪಾ ಕಟ್ಟಡ, ಮಡಿಕೇರಿ ದೂ: 08272-223055. ಅಥವಾ ಅಕಾಡೆಮಿ ಸದಸ್ಯ ಧನಂಜಯ ಅಗೋಳಿಕಜೆ ಮೊ. ನಂ. 9449731238 ನ್ನು ಸಂಪರ್ಕಿಸಬಹುದಾಗಿದೆ.

ಫೆ.16 ರಂದು ಕೆಡ್ಡಸ ಗೌಜಿ
ಅಕಾಡೆಮಿಯ ಸದಸ್ಯ ಧನಂಜಯ ಅಗೋಳಿಕಜೆ ಮಾತನಾಡಿ, ಅರೆಭಾಷೆ ಸಂಸ್ಕೃತಿಯನ್ನು ಬಿಂಬಿಸುವ ನಿಟ್ಟಿನಲ್ಲಿ ಫೆ.16 ರಂದು ಚೆಂಬುವಿನ ಕೂಡಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಅರೆಭಾಷೆ ಸಿರಿ ಸಂಸ್ಕೃತಿ ಮತ್ತು ಕೆಡ್ಡಸ ಗೌಜಿ’ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿ.ಪಂ ಅಧ್ಯಕ್ಷ ಬಿ.ಎ.ಹರೀಶ್ ಉದ್ಘಾಟಿಸಲಿದ್ದಾರೆ ಎಂದರು.

ಅಕಾಡೆಮಿ ವತಿಯಿಂದ ಚೆಂಬು ಭಗವಾನ್ ಸಂಘ, ಸ್ವಾಮಿ ವಿವೇಕಾನಂದ ಯುವಕ ಮಂಡಲ ಇದರ ಸಹಯೋಗದೊಂದಿಗೆ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮಿ ನಾರಾಯಣ ಕಜೆಗದ್ದೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ತಾ.ಪಂ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಜಿ.ಪಂ. ಸದಸ್ಯ ಕೆ.ಕುಮಾರ್, ತಾ.ಪಂ ಸದಸ್ಯ ನಾಗೇಶ್ ಕುಂದಲ್ಪಾಡಿ, ಚೆಂಬು ಗ್ರಾ.ಪಂ ಅಧ್ಯಕ್ಷ ದಿನೇಶ್ ಊರುಬೈಲ್ ಮತ್ತಿತರರು ಭಾಗವಹಿಸಲಿದ್ದಾರೆ.

ಸಭಾ ಕಾರ್ಯಕ್ರಮದ ನಂತರ ಜನಪದ ವಿದ್ವಾಂಸ ಸುಂದರ್ ಕೇನಾಜೆ ‘ಜನಪದ ಬೊದ್ಕುಲಿ ಕೆಡ್ಡಸ ಹಬ್ಬ’ ಎಂಬ ವಿಷಯ ಕುರಿತು ಮಾತನಾಡಲಿದ್ದಾರೆ.
‘ಅರೆಭಾಷಾ ಸಂಸ್ಕೃತಿಲಿ ಮನೆ ಒಕ್ಕುಲು ಜಂಬರ’ ಎಂಬ ವಿಷಯದ ಕುರಿತು ಅರೆಭಾಷಾ ಚಿಂತಕರು ಹಾಗೂ ಕೃಷಿಕರಾದ ಹೊಸೂರು ಚಂದ್ರಶೇಖರ್ ಅವರು ಮಾತನಾಡಲಿದ್ದಾರೆ. ಅರಂತೋಡು ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಶೀಲಾವತಿ ಕೃಷ್ಣಪ್ಪ ಬಿಳಿಯಾರ್ ‘ಅರೆಭಾಷಾ ಸಂಸ್ಕೃತಿಲಿ ಕೂಸ್‍ನ ತೊಟ್ಟಿಲಿಗೆ ಹಾಕುವ ಕ್ರಮ’ದ ಬಗ್ಗೆ ವಿವರಿಸಲಿದ್ದಾರೆ.

ಲೇಕಖ ದೊಡ್ಡಣ್ಣ ಬರೆಮೇಲು ‘ಅರೆಭಾಷಾ ಸಂಸ್ಕೃತಿಲಿ ಮೊದುವೆ ಜಂಬರ’ ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ. ಕೊಡಗು ಜಿಲ್ಲಾ ಸಾಹಿತ್ಯ ಪರಿಷತ್ ನಿರ್ದೇಶಕ ಹಾಗೂ ಅರೆಭಾಷೆ ಚಿಂತಕ ಲೋಕನಾಥ ಅಮೆಚೂರು ‘ಅರೆಭಾಷೆ ಸಂಸ್ಕೃತಿ ಬೊಜ್ಜದ ಕ್ರಮ’ ಕುರಿತು ಮಾತನಾಡಲಿದ್ದಾರೆ.
ಸಂಜೆ 5 ಗಂಟೆಗೆ ಸಂಪಾಜೆಯ ಹೆಸರಾಂತ ಯಕ್ಷಗಾನ ಅರ್ಥದಾರಿ ಜಬ್ಬಾರ್ ಸಮೊ ಹಾಗೂ ಬಳಗದಿಂದ ‘ಬಾಣದ ಪಾಲ’ (ಶರಸೇತು) ಅರೆಭಾಷೆಯಲ್ಲಿ ಯಕ್ಷಗಾನ ತಾಳ ಮದ್ದಳೆ ನಡೆಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಅಕಾಡೆಮಿ ಸದಸ್ಯರಾದ ಬೈತಡ್ಕ ಜಾನಕಿ ಬೆಳ್ಯಪ್ಪ, ಧನಂಜಯ ಅಗೋಳಿಕಜೆ, ಆಲೂರು ಸಿದ್ದಾಪುರ ಗೌಡ ಸಮಾಜದ ಅಧ್ಯಕ್ಷ ದೇವಾಯಿರ ಬಿ.ಗಿರೀಶ್, ಪ್ರಧಾನ ಕಾರ್ಯದರ್ಶಿ ಕುಯ್ಯಮುಡಿ ವಿ.ಜಯಕುಮಾರ್ ಹಾಗೂ ಸದಸ್ಯ ಚೀಯಂಡಿ ದೇವಯ್ಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X