ಮಲಾರ್ ಮದ್ರಸ ವಿದ್ಯಾರ್ಥಿನಿಯರ ಅಪಹರಿಸಿ ಅತ್ಯಾಚಾರಕ್ಕೆ ಯತ್ನ : ಎನ್.ಡಬ್ಲ್ಯೂ.ಎಫ್. ಖಂಡನೆ
ಮಂಗಳೂರು: ನಗರದ ಹೊರ ವಲಯ ಕೋಣಾಜೆ ಸಮೀಪದ ಮಲಾರ್ ಉಗ್ಗನಬೈಲ್ ನಲ್ಲಿ ಮದ್ರಸಕ್ಕೆ ತೆರಳುತ್ತಿದ್ದ ಮೂವರು ವಿದ್ಯಾರ್ಥಿನಿಯರನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆಯನ್ನು ನ್ಯಾಷನಲ್ ವಿಮೆನ್ಸ್ ಫ್ರಂಟ್ ತೀವ್ರವಾಗಿ ಖಂಡಿಸಿದೆ.
ಪ್ರಕರಣದ ಆರೋಪಿಗಳನ್ನು ಸದ್ಯ ಬಂಧಿಸಲಾಗಿದ್ದರೂ ಅವರ ಮೇಲೆ ಕಠಿಣವಾದ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಪದೇ ಪದೇ ಮರುಕಳಿಸುತ್ತಿದ್ದು ಮಕ್ಕಳು, ಪೋಷಕರು ಮತ್ತು ಶಿಕ್ಷಕರು ತೀವ್ರ ಭಯಭೀತರಾಗಿದ್ದಾರೆ. ಆರೋಪಿಗಳು ರಾಜಕೀಯ ಪ್ರಭಾವದಿಂದ ಶಿಕ್ಷೆಯಿಂದ ಪಾರಾಗುತ್ತಿದ್ದು, ಜನರು ನ್ಯಾಯದ ಭರವಸೆಯನ್ನು ಕಳೆದುಕೊಳ್ಳುತ್ತಿದ್ದಾರೆ. ಸರಕಾರವು ಕೂಡಲೇ ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು, ಅದೇ ರೀತಿ ಮದ್ರಸ ಹಾಗೂ ಶಾಲಾ ಮಕ್ಕಳಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ನ್ಯಾಷನಲ್ ವಿಮೆನ್ಸ್ ಫ್ರಂಟ್ ದ.ಕ. ಜಿಲ್ಲಾ ಸಮಿತಿ ಒತ್ತಾಯಿಸಿದೆ.
Next Story





