Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಾರ್ಕೂರು: ನೇಷನಲ್ ಕಾಲೇಜಿನ ದಲಿತ...

ಬಾರ್ಕೂರು: ನೇಷನಲ್ ಕಾಲೇಜಿನ ದಲಿತ ಉಪನ್ಯಾಸಕರಿಗೆ ದೌರ್ಜನ್ಯ

ಆರೋಪಿಗಳ ಬಂಧನಕ್ಕೆ ದಸಂಸ (ಅಂಬೇಡ್ಕರ್‌ವಾದ) ಆಗ್ರಹ

ವಾರ್ತಾಭಾರತಿವಾರ್ತಾಭಾರತಿ12 Feb 2020 11:08 PM IST
share

ಉಡುಪಿ, ಫೆ.12: ಬಾರಕೂರಿನ ನೇಷನಲ್ ಪದವಿ ಪೂರ್ವ ಕಾಲೇಜಿನಲ್ಲಿ ದಲಿತ ಉಪನ್ಯಾಸಕರಾದ ವಿರೂಪಾಕ್ಷ ಎನ್. ಸುಂಕದ ಇವರಿಗೆ ಜೇಷ್ಠತೆ ಆಧಾರದಲ್ಲಿ ಪ್ರಾಂಶುಪಾಲ ಹುದ್ದೆ ನೀಡದೆ ಮಾನಸಿಕ ಹಿಂಸೆ, ಕಿರುಕುಳ, ದೌರ್ಜನ್ಯ ಎಸಗಿರುವ ಆರೋಪಿತರಾಗಿರುವ ಕಾಲೇಜಿನ ಆಡಳಿತ ಮಂಡಳಿ ಕಾರ್ಯದರ್ಶಿ ಸೀತಾರಾಮ ಶೆಟ್ಟಿ, ಅಧ್ಯಕ್ಷರಾದ ಶಾಂತಾರಾಮ ಶೆಟ್ಟಿ, ಉಪಾಧ್ಯಕ್ಷರಾದ ವಿಠಲ ಶೆಟ್ಟಿ, ಜತೆ ಕಾರ್ಯದರ್ಶಿ ಶಂಕರ್, ಕೋಶಾಧಿಕಾರಿ ಕೃಷ್ಣ ಹಾಗೂ ಉಪನ್ಯಾಸಕರಾದ ಕೊಟ್ರಸ್ವಾಮಿ ಇವರ ಮೇಲೆ ಪ.ಜಾತಿ/ಪ.ಪಂಗಡದ ದೌರ್ಜನ್ಯದಡಿ ಪ್ರಕರಣ ದಾಖಲಾಗಿದ್ದು, ಇವರನ್ನು ತಕ್ಷಣ ಬಂಧಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ವಾದ ಜಿಲ್ಲಾ ಪ್ರಧಾನ ಸಂಚಾಲಕರಾದ ಸುಂದರ್ ಮಾಸ್ತರ್ ಆಗ್ರಹಿಸಿದ್ದಾರೆ.

ಫಿರ್ಯಾದಿದಾರರಾದ ವಿರೂಪಾಕ್ಷ ಎನ್. ಸುಂಕದ ಇವರು 1991ರಲ್ಲಿ ಬಾರಕೂರಿನ ನೇಷನಲ್ ಪದವಿಪೂರ್ವ ಕಾಲೇಜಿನಲ್ಲಿ ನೇಮಕಾತಿ ಹೊಂದಿದ್ದು, ಸಂಸ್ಥೆಯು ಸರಕಾರಿ ಅನುದಾನಕ್ಕೆ ಒಳಪಟ್ಟಿದೆ. ಇವರು ಈ ಕಾಲೇಜಿನಲ್ಲಿ ಜೇಷ್ಠತೆಯಲ್ಲಿದ್ದರೂ, ವಾಸುದೇವ ಶೆಟ್ಟಿ ಎಂಬವರನ್ನು ಪ್ರಾಂಶುಪಾಲರಾಗಿ ಮಾಡಿದರು. ವಾಸುದೇವ ಶೆಟ್ಟಿ ನಿವೃತ್ತಿಯಾದ ನಂತರ ಆರೋಪಿತರಾದ ಕೊಟ್ರಸ್ವಾಮಿ ಅವರನ್ನು ಪ್ರಭಾರ ಪ್ರಾಂಶುಪಾಲ ರಾಗಿ ನೇಮಿಸಿದರು ಎಂದು ಸುಂದರ ಮಾಸ್ತರ್ ಒತ್ತಾಯಿಸಿದ್ದಾರೆ.

ಪರಿಶಿಷ್ಟ ಪಂಗಡಕ್ಕೆ ಸೇರಿದವರೆಂಬ ಒಂದೇ ಕಾರಣದಿಂದ ವಿರೂಪಾಕ್ಷ ಅವರನ್ನು ಪ್ರಾಂಶುಪಾಲರ ಹುದ್ದೆಗೆ ನೇಮಕ ಮಾಡದೆ, ಈ ಮೇಲಿನ ಆರೋಪಿಗಳು ಸರಕಾರದ ಆದೇಶಗಳನ್ನು ಉಲ್ಲಂಘಿಸಿ ಓರ್ವ ದಲಿತ ಉಪನ್ಯಾಸಕರಿಗೆ ಅವಮಾನ, ವಂಚನೆ ಮಾಡಿದ್ದಾರೆ. ಆರೋಪಿತರೆಲ್ಲರೂ ಅಸಾಂವಿಧಾನಿಕವಾಗಿ ಹಾಗೂ ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯ 2006ರ ನಿಯಮ 5ಕ್ಕೆ ವಿರುದ್ಧವಾಗಿ ವರ್ತಿಸಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆಡಳಿತ ಮಂಡಳಿ ನೀಡಿರುವ ಎಲ್ಲಾ ಪ್ರಸ್ತಾವನೆಗಳನ್ನು ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು, ಪರಿಶಿಷ್ಟ ಜಾತಿ, ಪಂಗಡದ ಆಯೋಗ, ಅಪರ ಕಾರ್ಯದರ್ಶಿಗಳು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಮತ್ತು ರಾಜ್ಯ ಉಚ್ಛ ನ್ಯಾಯಾಲಯ ತಿರಸ್ಕರಿಸಿದ್ದು, ವಿರೂಪಾಕ್ಷ ಸುಂಕದರವರಿಗೆ ಪ್ರಾಂಶುಪಾಲ ಹುದ್ದೆ ನೀಡುವಂತೆ ಆದೇಶ ನೀಡಿದ್ದರೂ, ದಲಿತ ವಿರೋಧಿ ನೀತಿಯಿಂದ ಇವರಿಗೆ ಮಾನಸಿಕ ಹಿಂಸೆ ಹಾಗೂ ಕಿರುಕುಳ, ದೌರ್ಜನ್ಯವೆಸಗಿರುವುದು ಖಂಡನೀಯವಾಗಿದೆ ಎಂದು ಸುಂದರ ಮಾಸ್ತರ್ ಹೇಳಿದ್ದಾರೆ.

ಇಂತಹ ಪ್ರಕರಣಗಳು ಜಿಲ್ಲೆಯ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿದ್ದು, ಈ ಬಗ್ಗೆ ಸರಕಾರ ಸೂಕ್ತ ತನಿಖೆ ನಡೆಸಬೇಕು. ತಪ್ಪಿತಸ್ಥ ಸಂಸ್ಥೆಗಳ ಮಾನ್ಯತೆ ರದ್ದುಗೊಳಿಸಬೇಕು ಹಾಗೂ ಈ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿ ಗಳನ್ನು ಕೂಡಲೇ ಬಂಧಿಸುವಂತೆ ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮರಾಜ ಬಿರ್ತಿ, ಪರಮೇಶ್ವರ ಉಪ್ಪೂರು, ಭಾಸ್ಕರ ಮಾಸ್ತರ್, ಗೋಪಾಲಕೃಷ್ಣ ಕುಂದಾಪುರ, ಹೊನ್ನಪ್ಪ ನಕ್ರೆ, ಶ್ರೀಧರ ಕುಂಜಿಬೆಟ್ಟು, ಶ್ಯಾಮಸುಂದರ್ ತೆಕ್ಕಟ್ಟೆ, ತಾಲೂಕು ಸಂಚಾಲಕರಾದ ಶಂಕರದಾಸ್ ಉಡುಪಿ, ರಾಘವ ಕಾರ್ಕಳ, ಲೋಕೇಶ್ ಕಾಪು, ನಾಗರಾಜ ಕುಂದಾಪುರ, ದೇವಣ್ಣ ಹೆಬ್ರಿ ಹಾಗೂ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ್ ಮಾಸ್ತರ್ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X