ಬಡ ಮಕ್ಕಳಿಗೆ ಮೂಲಭೂತ ಸೌಕರ್ಯ ಪೂರೈಸುತ್ತಿರುವ ‘ಓಸಾಟ್’
ಸಂಸ್ಥೆಯ ಅಧ್ಯಕ್ಷ ಜಗದೀಶ್
ಬೆಂಗಳೂರು, ಫೆ.12: ಕೆಲ ಸ್ವಯಂ ಸೇವಕರು ಸೇರಿ ಸ್ಥಾಪಿಸಿರುವ ಓಸಾಟ್ ಸಂಸ್ಥೆಯು, ಭಾರತದ ಹಳ್ಳಿಗಳಲ್ಲಿ ಬೆಳೆಯುತ್ತಿರುವ ಬಡ ಮಕ್ಕಳ ಬಗ್ಗೆ ಕಾಳಜಿ ಹೊಂದಿದ್ದು, ಅವರಿಗಾಗಿ ಮೂಲಭೂತ ಸೌಕರ್ಯಗಳನ್ನು ಪೂರೈಸುತ್ತಿದೆ ಎಂದು ಸಂಸ್ಥೆಯ ಅಧ್ಯಕ್ಷ ಜಗದೀಶ್ ತಿಳಿಸಿದ್ದಾರೆ.
ಬುಧವಾರ ಪ್ರೆಸ್‌ಕ್ಲಬ್‌ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಹಳ್ಳಿಗಳಲ್ಲಿ ಬೆಳೆಯುತ್ತಿರುವ ಬಡ ಮಕ್ಕಳಿಗೆ ಊಟ, ವಸತಿ, ಬಟ್ಟೆ, ಕಂಪ್ಯೂಟರ್ ವ್ಯವಸ್ಥೆ ಸೇರಿದಂತೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಗತ್ಯವಿರುವ ಮೂಲಭೂತ ಅವಶ್ಯಕತೆಗಳನ್ನು ನಮ್ಮ ಸಂಸ್ಥೆಯ ವತಿಯಿಂದ ನೀಡಲಾಗುತ್ತಿದೆ ಎಂದು ತಿಳಿಸಿದರು.
ಭಾರತದ ಶಾಲೆಗಳಲ್ಲಿ ಹಲವು ಸರಕಾರಿ ಶಾಲೆಯ ಕಟ್ಟಡಗಳು ಕುಸಿದು ಬಿದ್ದಿವೆ. ಅಲ್ಲದೇ, ಕೆಲವೊಂದು ಶಿಥಿಲಾವಸ್ಥೆಯಲ್ಲಿವೆ. ಈ ಪೈಕಿ ನಮ್ಮ ಸಂಸ್ಥೆಯು ಈಗಾಗಲೇ 31ಕ್ಕೂ ಹೆಚ್ಚಿನ ಶಾಲೆಗಳನ್ನು ಪುನರ್ ನಿರ್ಮಿಸಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಈ ರೀತಿಯ ಕಾರ್ಯವನ್ನು ಮುಂದುವರೆಸಲಿದೆ ಎಂದು ತಿಳಿಸಿದರು.
Next Story





