Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಧರ್ಮದ ಆಧಾರದಲ್ಲಿ ದೇಶ ಒಡೆಯಲು ಯತ್ನಿಸಿದ...

ಧರ್ಮದ ಆಧಾರದಲ್ಲಿ ದೇಶ ಒಡೆಯಲು ಯತ್ನಿಸಿದ ಬಿಜೆಪಿಗೆ ದಿಲ್ಲಿ ಜನತೆಯಿಂದ ಕಪಾಳಮೋಕ್ಷ: ಬೃಂದಾ ಕಾರಟ್

ವಾರ್ತಾಭಾರತಿವಾರ್ತಾಭಾರತಿ13 Feb 2020 10:02 PM IST
share
ಧರ್ಮದ ಆಧಾರದಲ್ಲಿ ದೇಶ ಒಡೆಯಲು ಯತ್ನಿಸಿದ ಬಿಜೆಪಿಗೆ ದಿಲ್ಲಿ ಜನತೆಯಿಂದ ಕಪಾಳಮೋಕ್ಷ: ಬೃಂದಾ ಕಾರಟ್

ಕಲಬುರಗಿ, ಫೆ.13: ದೇಶವನ್ನು ಧರ್ಮದ ಆಧಾರದ ಮೇಲೆ ಒಡೆಯಲು ಯತ್ನಿಸುತ್ತಿರುವ ಬಿಜೆಪಿಗೆ ದಿಲ್ಲಿಯ ಮತದಾರರು ತಕ್ಕ ಉತ್ತರ ನೀಡಿದ್ದಾರೆ. ಜನರ ಮಧ್ಯೆ ವಿಷ ಬೀಜಿ ಬಿತ್ತುತ್ತಿರುವ ಬಿಜೆಪಿಗರಿಗೆ ದಿಲ್ಲಿ ಜನತೆ ಜಬರ್ದಸ್ತ್ ಕಪಾಳಮೋಕ್ಷ ಮಾಡಿದ್ದಾರೆ ಎಂದು ಸಿಪಿಐ(ಎಂ) ಪಾಲಿಟ್ ಬ್ಯೂರೋ ಸದಸ್ಯೆ ಬೃಂದಾ ಕಾರಟ್ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಸಿಎಎ, ಎನ್‌ಆರ್ ಸಿ ವಿರೋಧಿಸಿ ನಡೆದ ಮಹಿಳಾ ಮಹಾ ಸಮಾವೇಶದಲ್ಲಿ ಮುಖ್ಯ ಅಥಿತಿಯಾಗಿ ಮಾತನಾಡಿದ ಅವರು, ದೇಶದ ಜನರಿಗೆ ಉದ್ಯೋಗ ನೀಡದೆ ಜನರನ್ನು ತಪ್ಪು ದಾರಿಗೆ ತಂದು ಧರ್ಮಗಳ ಹೆಸರಲ್ಲಿ ರಾಜಕೀಯ ಮಾಡುವ ನರೇಂದ್ರ ಮೋದಿ, ಹಾಗೂ ಅಮಿತ ಶಾರಿಗೆ ದಿಲ್ಲಿಯ ಮತದಾರರು ತಕ್ಕ ಉತ್ತರ ನೀಡಿದ್ದಾರೆ. ದಿಲ್ಲಿ ವಿಧಾನಸಭಾ ಚುನಾವಣೆ ಪ್ರಚಾರಕ್ಕಾಗಿ ಬಿಜೆಪಿ ಹಾಗೂ ಆರೆಸ್ಸೆಸ್ ನ ಎಲ್ಲಾ ದೊಡ್ಡ ದೊಡ್ಡ ನಾಯಕರು ಆಗಮಿಸಿದರು. ಅವರ ಬಾಯಲ್ಲಿ ಕೇವಲ ಗುಂಡು ಮತ್ತು ಬೈಗುಳಗಳು ಮಾತ್ರ ಇದ್ದವು. ದಿಲ್ಲಿ ಜನರಿಗೆ ಉದ್ಯೋಗ ನೀಡುವ, ಮನೆಗಳ ನಿರ್ಮಾಣದ ಭರವಸೆ, ಉತ್ತಮ ವ್ಯವಸ್ಥೆಯ ಭರವಸೆ ಯಾವುದೂ ಅವರಲ್ಲಿ ಇರಲಿಲ್ಲ. ಆದರೆ ಅಧಿಕಾರದಲ್ಲಿರುವ ಪಕ್ಷದವರು ಎಲ್ಲಿಯೂ ಅವಾಚ್ಯ ಶಬ್ದ ಬಳಸಲಿಲ್ಲ ಎಂದು ಹೇಳಿದರು.

ದೇಶದ ಜನರ ಕೈಯಲ್ಲಿ ಉದ್ಯೋಗವಿಲ್ಲ. ನರೇಗಾದಂತ ಯೋಜನೆಗಳಿಗೆ ಹಣದ ಕೊರತೆ ಇದೆ. ದೊಡ್ಡ ದೊಡ್ಡ ಬಂಡವಾಳ ಶಾಹಿಗಳಿಗೆ ಬಿಜೆಪಿಯವರು ಅನುಕೂಲ ಮಾಡಿಕೊಡುತ್ತಿದ್ದಾರೆ. ಸಂವಿಧಾನವನ್ನೆ ಬದಲಾಯಿಸುವ ಹುನ್ನಾರ ಅಂತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿದೆ. ಅದಕ್ಕಾಗಿ ಪ್ರತಿಯೊಬ್ಬರು ಇಂದು ಸಂವಿಧಾನವನ್ನು ಅರಿಯಬೇಕಾಗಿದೆ. ಅಂಬೇಡ್ಕರ್ ಅವರು ಸಂವಿಧಾನವನ್ನು ಎಲ್ಲಾ ಜಾತಿ, ಧರ್ಮಗಳು ಒಂದಾಗಿ ಇರುವಂತ ಅನೇಕ ಅಂಶಗಳನ್ನು ಅಳವಡಿಸಿ ಬರೆದಿದ್ದಾರೆ. ಆದರೆ ಹಿಂದುತ್ವದ ಹೆಸರಲ್ಲಿ ದೇಶವನ್ನು ಒಡೆಯಲು ಯತ್ನಿಸಲಾಗುತ್ತಿದೆ. ಸದಾ ಪಾಕಿಸ್ತಾನದ ಹೆಸರು ಹೇಳುವ ನರೇಂದ್ರ ಮೋದಿ, ಅಮಿತ್ ಶಾ ಅವರು ನಿಜವಾಗಿ ಪಾಕಿಸ್ತಾವನ್ನು ಬಹಳ ಪ್ರೀತಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಸ್ಸಾಂನಲ್ಲಿ ಎನ್‌ಆರ್‌ಸಿಯಿಂದ 19 ಲಕ್ಷ ಜನರು ನಿರಾಶ್ರಿತರಾಗಿದ್ದಾರೆ. ಅವರಲ್ಲಿ 13 ಲಕ್ಷ ಜನರು ಹಿಂದುಗಳು ಇದ್ದಾರೆ. ಬಾಂಗ್ಲಾದೇಶದಿಂದ ಮದುವೆಯಾಗಿ ಬಂದಂತ ಸಾವಿರಾರು ಹಿಂದು ಮಹಿಳೆಯರಿಗೆ ತಮ್ಮ ದಾಖಲೆಗಳನ್ನು ತೋರಿಸಲು ಆಗಲಿಲ್ಲ. ಅವರನ್ನು ಈ ದೇಶದ ನಾಗರಿಕರಲ್ಲ ಎಂದು ಹೇಳುತ್ತಾರೆ. ಮದುವೆಯಾಗಿ ಬಂದ ಮೇಲೆ ಅವರು ಎಲ್ಲಿಂದ ದಾಖಲೆ ತರಬೇಕು ಎಂದು ಪ್ರಶ್ನಿಸಿದರು. 

ಬೀದರ್ ನಲ್ಲಿ ಶಾಹೀನ್ ಶಾಲೆ, ವಿದ್ಯಾರ್ಥಿನಿಯ ತಾಯಿ ಹಾಗೂ ಶಿಕ್ಷಕಿಯ ವಿರುದ್ಧ ದೇಶದ್ರೋಹದ ಹೆಸರಲ್ಲಿ ಪ್ರಕರಣ ದಾಖಲಿಸಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಕೂಡಲೆ ಕೇಸು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು. 

ಜನವಾದಿ ಮಹಿಳಾ ಸಂಘನೆಯ ಮುಖಂಡರಾದ ಕೆ.ನೀಲಾ ಸೇರಿದಂತೆ ಅನೇಕ ಮಹಿಳಾ ಮುಖಂಡರು ಭಾಗವಹಿಸಿದ್ದರು. ಮಹಿಳಾ ಸಮಾವೇಶದಲ್ಲಿ ವಿಜಯಪುರ ಹಾಗೂ ವಿವಿಧ ಜಿಲ್ಲೆಗಳಿಂದ ಸಾವಿರಾರು ಮಹಿಳೆಯರು ಆಗಮಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X