Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಿಂದೆ ನಾನು ಗಾಂಧಿ ಪುಸ್ತಕ...

ಹಿಂದೆ ನಾನು ಗಾಂಧಿ ಪುಸ್ತಕ ಓದುತ್ತಿದ್ದಾಗ ಅಳುತ್ತಿದ್ದೆ: ಸಚಿವ ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ14 Feb 2020 9:59 PM IST
share
ಹಿಂದೆ ನಾನು ಗಾಂಧಿ ಪುಸ್ತಕ ಓದುತ್ತಿದ್ದಾಗ ಅಳುತ್ತಿದ್ದೆ: ಸಚಿವ ಸಿ.ಟಿ.ರವಿ

ಮೈಸೂರು,ಫೆ.14: ಇನ್ನು ಕೆಲವೇ ವರ್ಷಗಳಲ್ಲಿ ಮಹಾತ್ಮ ಗಾಂಧಿ ಅಂತರಾಷ್ಟ್ರೀಯ ದೇವರಾಗುತ್ತಾರೆ, ಅಂಬೇಡ್ಕರ್ ರಾಷ್ಟ್ರೀಯ ದೇವರಾಗುತ್ತಾರೆ. ಯಾಕೆಂದರೆ ನಾವೆಲ್ಲರೂ ಅವರ ಕಲ್ಲು ಮುಳ್ಳಿನ ದಾರಿಯಲ್ಲಿ ನಡೆಯಲಾಗದೆ ಅವರನ್ನು ದೇವರನ್ನಾಗಿ ಮಾಡಿಬಿಡುತ್ತೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ಹೇಳಿದ್ದಾರೆ.

ರಂಗಾಯಣದಲ್ಲಿ ಆಯೋಜಿಸಿರುವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಶುಕ್ರವಾರ ರಂಗಸಂಚಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು. ನಾನು ಹಿಂದೆ ದೂರ ಪ್ರಯಾಣ ಮಾಡುತ್ತಿದ್ದಾಗ ಗಾಂಧಿ ಕುರಿತ ಪುಸ್ತಕ ಓದುತ್ತಿದ್ದೆ. ನನಗೆ ಗೊತ್ತಾಗದಂತೆ ನಾನು ಅಳುವುದಕ್ಕೆ ಶುರು ಮಾಡಿದ್ದೆ. ಪಕ್ಕದಲ್ಲಿದ್ದವರು ಯಾಕೆ ಅಂತ ಕೇಳಿದರು. ಗಾಂಧಿ ನಿಜಕ್ಕೂ ಜಗತ್ತಿನಲ್ಲೇ ಮಹಾತ್ಮರಾದರು. ಅವರಂತೆ ನಡೆಯಲು ನಮಗೆ ಆಗುವುದಿಲ್ಲವಲ್ಲ ಅಂತ ಹೇಳಿದೆ. ನಮ್ಮ ದೇಶದಲ್ಲಿ ಗಾಂಧಿಯನ್ನು ದೇವರನ್ನಾಗಿಸಿ ಅವರಿಗೆ ಪೂಜೆ ಮಾಡಿ, ನೈವೇದ್ಯ ಇಟ್ಟು ಬಳಿಕ ಆ ನೈವೇದ್ಯವನ್ನು ತಿಂದುಬಿಟ್ಟಿದ್ದಾರೆ ಎಂದು ಸಿ.ಟಿ ರವಿ ಹೇಳಿದರು.

ಗಾಂಧಿ ಸವೆಸಿದ ಕಲ್ಲು ಮುಳ್ಳಿನ ಹಾದಿಯಲ್ಲಿ ನಾವು ನಡೆಯದಿದ್ದಾಗ ದೇವರನ್ನಾಗಿಸುತ್ತೇವೆ. ಹಾಗಾಗಿಯೇ ಗಾಂಧಿ ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ದೇವರಾಗುತ್ತಾರೆ. ಅವರು ಹಾಡುತ್ತಿದ್ದ ಭಜನೆಗಳು ದೇವಸ್ಥಾನ, ಮಸೀದಿ, ಚರ್ಚುಗಳಲ್ಲಿ ಹಾಡಿದರೆ ಧರ್ಮದ ಸಂಘರ್ಷವೇ ಇರುವುದಿಲ್ಲ. ರಂಗಭೂಮಿ ಎಲ್ಲರನ್ನೂ ಒಟ್ಟುಗೂಡಿಸುವ ವೇದಿಕೆಯಾಗಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಗಾಂಧಿ ತತ್ವದ ಕೋತಿಗಳಿಗೆ ಖಾದಿ ಮಾಲಾರ್ಪಣೆ ಮಾಡುವ ಮೂಲಕ ಹಿರಿಯ ನಟ ಅನಂತ್‍ನಾಗ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್.ನಾಗೇಂದ್ರ, ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ, ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನ ಸ್ವಾಮಿ, ಕೆನರಾ ಬ್ಯಾಂಕ್ ವ್ಯವಸ್ಥಾಪಕ ವಿಜಯಕುಮಾರ್ ಪಾಲ್ಗೊಂಡಿದ್ದರು.

ಡೈಲಾಗ್, ಹಾಡು ಹೇಳಿ ರಂಜಿಸಿದ ನಟ ಅನಂತ್‍ನಾಗ್
ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಚಾಲನೆ ನೀಡಿದ ಹಿರಿಯ ನಟ ಅನಂತ್‍ನಾಗ್ ಸಿನಿಮಾ ಸಂಭಾಷಣೆ ಮತ್ತು 'ಭಾಗ್ಯದ ಲಕ್ಷ್ಮೀ ಬಾರಮ್ಮ' ಹಾಡು ಹೇಳುವ ಮೂಲಕ ರಂಜಿಸಿದರು. ಅಲ್ಲದೆ ರಂಗಾಯಣದ ಜತೆ ಇದ್ದ ಒಡನಾಟ ಹಂಚಿಕೊಂಡ ಅನಂತ ನಾಗ್, 'ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಈ ರಂಗಾಯಣ ಸ್ಥಾಪಿಸಿದರು. ಬಿ.ವಿ. ಕಾರಂತರ ಜತೆ ಇಲ್ಲಿಗೆ ಬಂದಿದ್ದೆ. ನಂತರ ಪ್ರಸನ್ನ ಚಿಣ್ಣರ ಮೇಳಕ್ಕೆ ಕರೆಸಿದ್ದರು. ಈಗ ಕಾರ್ಯಪ್ಪ ನಾಟಕೋತ್ಸವ ಉದ್ಘಾಟನೆಗೆ ಕರೆಸಿದ್ದಾರೆ. ನನಗೆ ಸಂತೋಷವಾಗಿದೆ. ನಾನು ಆನಂದಾಶ್ರಮದಲ್ಲಿ ಬೆಳೆದಿದ್ದರಿಂದ ಗಾಂಧಿಯನ್ನು ಆಗ ಓದಿಕೊಂಡಿದ್ದೆ' ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X