Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಫೆ.17ಕ್ಕೆ ಜಂಟಿ ಅಧಿವೇಶನ, ಮಾ.5ಕ್ಕೆ...

ಫೆ.17ಕ್ಕೆ ಜಂಟಿ ಅಧಿವೇಶನ, ಮಾ.5ಕ್ಕೆ ಬಜೆಟ್: ಸುದ್ದಿವಾಹಿನಿಗಳ ಕ್ಯಾಮರಾಗಳಿಗೆ ನಿರ್ಬಂಧ

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

ವಾರ್ತಾಭಾರತಿವಾರ್ತಾಭಾರತಿ14 Feb 2020 10:13 PM IST
share
ಫೆ.17ಕ್ಕೆ ಜಂಟಿ ಅಧಿವೇಶನ, ಮಾ.5ಕ್ಕೆ ಬಜೆಟ್: ಸುದ್ದಿವಾಹಿನಿಗಳ ಕ್ಯಾಮರಾಗಳಿಗೆ ನಿರ್ಬಂಧ

ಬೆಂಗಳೂರು, ಫೆ. 14: ಹದಿನೈದನೆ ವಿಧಾನಸಭೆಯ ವರ್ಷದ ಮೊದಲ ಅಧಿವೇಶನ ಫೆ.17ರಿಂದ ಆರಂಭಗೊಳ್ಳಲಿದ್ದು, ರಾಜ್ಯಪಾಲ ವಜುಭಾಯಿ ವಾಲಾ ಅವರು ವಿಧಾನ ಮಂಡಲ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿನ ತನ್ನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.17ರಿಂದ ಫೆ.20ರ ವರೆಗೆ ಅಧಿವೇಶನ ನಡೆಯಲಿದ್ದು, ಸಂತಾಪ, ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಚರ್ಚೆ ನಡೆಯಲಿದೆ ಎಂದು ತಿಳಿಸಿದರು.

ಸಂವಿಧಾನದ ಬಗ್ಗೆ ವಿಶೇಷ ಚರ್ಚೆ: ಮಾ.2 ಮತ್ತು 3ರಂದು ಸಂವಿಧಾನದ ಆಶಯಗಳು, ಸ್ವರೂಪ ಹಾಗೂ ಸಾಕಾರ ಕುರಿತಂತೆ ವಿಧಾನಸಭೆಯಲ್ಲಿ ಎರಡು ದಿನಗಳ ವಿಶೇಷ ಚರ್ಚೆ ನಡೆಯಲಿದೆ. ಸಂವಿಧಾನ ಅಂಗೀಕಾರ, ಅನುಷ್ಠಾನಗೊಂಡು 70 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ರಾಜಕೀಯೇತರ ಚರ್ಚೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಸಂವಿಧಾನದ ಕುರಿತು ಅರ್ಥಗರ್ಭಿತ ಚರ್ಚೆ ನಡೆಸಬೇಕು ಎಂದ ಅವರು, ಸದನ ಕಲಾಪ ಸಲಹಾ ಸಮಿತಿ(ಬಿಎಸ್‌ಸಿ)ಯಲ್ಲಿ ಕಾರ್ಯಕ್ರಮದ ರೂಪುರೇಷಗಳ ಬಗ್ಗೆ ಚರ್ಚಿಸಿ, ರಚನಾತ್ಮಕ ಚರ್ಚೆಗೆ ನೀಲನಕ್ಷೆ ಸಿದ್ಧಪಡಿಸಲಾಗುವುದು ಎಂದರು.

ಮಾ.5ಕ್ಕೆ ಆಯವ್ಯಯ: ಮಾರ್ಚ್ 5ಕ್ಕೆ ಹಣಕಾಸು ಸಚಿವರೂ ಆಗಿರುವ ಸಿಎಂ ಯಡಿಯೂರಪ್ಪ ಆಯವ್ಯಯ ಮಂಡಿಸಲಿದ್ದಾರೆ. ಲೋಕಾಯುಕ್ತ(ತಿದ್ದುಪಡಿ), ನಾವೀನ್ಯತಾ ಪ್ರಾಧಿಕಾರ, ರಾಷ್ಟ್ರೀಯ ಕಾನೂನು ವಿವಿ (ತಿದ್ದುಪಡಿ), ರಾಜ್ಯ ಭಾಷಾ (ತಿದ್ದುಪಡಿ), ನಗರಪಾಲಿಕೆಗಳ (ತಿದ್ದುಪಡಿ) ಹಾಗೂ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ(ತಿದ್ದುಪಡಿ) ಸೇರಿ 6 ವಿಧೇಯಕಗಳ ಮಂಡನೆ ಮಾಡಲಾಗುವುದು ಎಂದರು.

ಮಾರ್ಚ್ 31ರ ವರೆಗೆ ಒಟ್ಟು ಇಪ್ಪತ್ತೈದು ದಿನಗಳ ದೀರ್ಘ ಅವಧಿ ಅಧಿವೇಶನ ನಡೆಯಲಿದ್ದು, ಪ್ರಶ್ನೋತ್ತರ ಸೇರಿದಂತೆ ವಿವಿಧ ಕಲಾಪಗಳು ನಡೆಯಲಿವೆ. ಈ ಅಧಿವೇಶನದಲ್ಲಿ ರಾಜ್ಯದ ಅಭಿವೃದ್ಧಿ ಕುರಿತ ಚರ್ಚೆಗೆ ವಿಫುಲ ಅವಕಾಶ ದೊರೆಯಲಿದೆ ಎಂದು ಕಾಗೇರಿ ತಿಳಿಸಿದರು.

ಸುದ್ದಿವಾಹಿನಿಗಳಿಗೆ ನಿರ್ಬಂಧ: ಲೋಕಸಭೆ ಮತ್ತು ರಾಜ್ಯಸಭೆ ಮಾದರಿಯಲ್ಲಿ ಕಲಾಪದ ವೇಳೆ ಖಾಸಗಿ ಸುದ್ದಿವಾಹಿನಿಗಳ ಕ್ಯಾಮರಾಗಳಿಗೆ ನಿರ್ಬಂಧ ಹೇರಲಾಗಿದೆ. ಆದರೆ, ದೂರದರ್ಶನವು ಕಲಾಪವನ್ನು ಚಿತ್ರೀಕರಿಸಿ ಬ್ರಾಂಡ್‌ವಿಡ್ತ್ ಸಂಕೇತಗಳ ಮೂಲಕ ಖಾಸಗಿ ವಾಹಿನಿಗಳಿಗೆ ಕಲಾಪದ ಚಿತ್ರಣವನ್ನು ನೀಡಲಿದೆ ಎಂದು ಸ್ಪೀಕರ್ ಕಾಗೇರಿ ಸ್ಪಷ್ಟನೆ ನೀಡಿದರು. ಸುದ್ಧಿಗೋಷ್ಠಿಯಲ್ಲಿ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಹಾಜರಿದ್ದರು.

‘ಯಾವುದೇ ಕಾರಣಕ್ಕೂ ಸದನದ ಕಲಾಪ ವರದಿಗಾರಿಕೆಗೆ ಮಾಧ್ಯಮಗಳಿಗೆ ನಿರ್ಬಂಧ ಹೇರಿಲ್ಲ. ಪ್ರಜಾಪ್ರಭುತ್ವದ ನಾಲ್ಕನೆ ಅಂಗವಾಗಿರುವ ಮಾಧ್ಯಮಕ್ಕೆ ತನ್ನದೆ ಆದ ಸ್ವಾತಂತ್ರವಿದೆ. ಲೋಕಸಭೆ ಮತ್ತು ರಾಜ್ಯಸಭೆ ಮಾದರಿಯಲ್ಲಿನ ವ್ಯವಸ್ಥೆಯನ್ನೂ ಇಲ್ಲಿಯೂ ಅಳವಡಿಸಿಕೊಳ್ಳಲಾಗುತ್ತಿದೆ’

-ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಸಭೆ ಸ್ಪೀಕರ್

‘ವಿಧಾನ ಮಂಡಲ ಅಧಿವೇಶನ ಕಲಾಪ ವರದಿಗಾರಿಕೆಗೆ ಖಾಸಗಿ ಸುದ್ದಿವಾಹಿನಿಗಳ ಕ್ಯಾಮರಾಗಳಿಗೆ ನಿರ್ಬಂಧ ಹೇರುವುದು ಸರಿಯಲ್ಲ. ಸ್ಪೀಕರ್ ಕಾಗೇರಿಯವರ ಅವಧಿಯಲ್ಲಿ ಮಾಧ್ಯಮಗಳನ್ನು ಹೊರಗಿಡುವ ಮೂಲಕ ಕೆಟ್ಟ ಸಂಪ್ರದಾಯ ಜಾರಿಗೆ ನಮ್ಮ ಸ್ಪಷ್ಟ ವಿರೋಧ’

-ಎಚ್.ಡಿ.ರೇವಣ್ಣ, ಮಾಜಿ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X