Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪರಿಶಿಷ್ಟ ಜಾತಿಯ ನಕಲಿ ಪ್ರಮಾಣ ಪತ್ರ...

ಪರಿಶಿಷ್ಟ ಜಾತಿಯ ನಕಲಿ ಪ್ರಮಾಣ ಪತ್ರ ಬಳಸುವವರನ್ನು ಕೆಲಸದಿಂದ ವಜಾ ಮಾಡಿ: ರಾಮ್‌ಶಂಕರ್ ಕಥೇರಿಯಾ

ವಾರ್ತಾಭಾರತಿವಾರ್ತಾಭಾರತಿ14 Feb 2020 10:17 PM IST
share
ಪರಿಶಿಷ್ಟ ಜಾತಿಯ ನಕಲಿ ಪ್ರಮಾಣ ಪತ್ರ ಬಳಸುವವರನ್ನು ಕೆಲಸದಿಂದ ವಜಾ ಮಾಡಿ: ರಾಮ್‌ಶಂಕರ್ ಕಥೇರಿಯಾ

ಬೆಂಗಳೂರು, ಫೆ.14: ಪರಿಶಿಷ್ಟ ಜಾತಿಯ ನಕಲಿ ಪ್ರಮಾಣ ಪತ್ರ ಬಳಸುವವರ ವಿರುದ್ಧ ಎಫ್‌ಐಆರ್ ದಾಖಲಿಸಿ, ಕೆಲಸದಿಂದ ವಜಾ ಮಾಡಬೇಕು ಎಂದು ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಅಧ್ಯಕ್ಷ ರಾಮ್‌ಶಂಕರ್ ಕಥೇರಿಯಾ ಸೂಚನೆ ನೀಡಿದ್ದಾರೆ.

ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಕಲಿ ಜಾತಿ ಪ್ರಮಾಣ ಪತ್ರಗಳ ಬಳಕೆ ಕುರಿತು ಗಂಭೀರ ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಪರಿಶೀಲನೆಗೆ ರಾಜ್ಯ ಮಟ್ಟದಲ್ಲಿ ಸಮಿತಿ ರಚಿಸಬೇಕು ಎಂದರು.

ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಿಗೆ ಬಜೆಟ್ ಹಂಚಿಕೆ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಉತ್ತಮವಾಗಿದೆ. ಕರ್ನಾಟಕದಲ್ಲಿನ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಹಂಚಿಕೆಯಾಗಿದೆ. ರಾಜ್ಯದಲ್ಲಿ ಶೇ 17.15ರಷ್ಟು ಪರಿಶಿಷ್ಟ ಜಾತಿ ಜನಸಂಖ್ಯೆ ಇದ್ದು, ಶೇಕಡ 17 ರಷ್ಟು ಬಜೆಟ್ ಮೀಸಲಿರಿಸಲಾಗಿದೆ. ಇದೊಂದು ಸಂತಸದ ವಿಚಾರ ಎಂದು ಅವರು ಹೇಳಿದರು.

ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗಾಗಿ ಹಾಸ್ಟೆಲ್ ವ್ಯವಸ್ಥೆ, ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಮುದಾಯ ಭವನ ನಿರ್ಮಾಣದಲ್ಲೂ ಕರ್ನಾಟಕದ ಸ್ಥಿತಿ ಉತ್ತಮವಾಗಿದೆ. ಆದರೆ, ಬ್ಯಾಂಕ್ ಸಾಲ ಮತ್ತು ಹೊಸ ಸ್ವಂತ ಉದ್ಯೋಗಗಳ ಆರಂಭಿಸುವ ವಿಚಾರದಲ್ಲಿ ಮಾತ್ರ ಕರ್ನಾಟಕದ ಪರಿಶಿಷ್ಟ ಜಾತಿಗಳ ಯುವಕರು ಸದುಪಯೋಗಪಡಿಸಿಕೊಳ್ಳುವಲ್ಲಿ ಹಿಂದೆ ಬಿದ್ದಿದ್ದಾರೆ ಎಂದು ರಾಮ್‌ಶಂಕರ್ ಕಥೇರಿಯಾ ತಿಳಿಸಿದರು.

ಕೇಂದ್ರ ಸರಕಾರದ ಯೋಜನೆಗಳಾದ ಮುದ್ರಾ ಲೋನ್, ಸ್ಪಾರ್ಟ್ ಅಪ್ ಸಾಲ ವಿಚಾರದಲ್ಲಿ ಪರಿಶಿಷ್ಟರಿಗೆ ಸೌಲಭ್ಯ ನಿರೀಕ್ಷಿತ ಮಟ್ಟದಲ್ಲಿ ಸಿಕ್ಕಿಲ್ಲ. ಈ ಸಂಬಂಧ ತಕ್ಷಣವೇ ಬ್ಯಾಂಕ್ ಮುಖ್ಯಸ್ಥರ ಸಭೆ ಕರೆದು ಸೂಚನೆ ನೀಡುವಂತೆ ಮುಖ್ಯಕಾರ್ಯದರ್ಶಿಗೆ ತಿಳಿಸಿದ್ದೇನೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಮುದ್ರಾ ಯೋಜನೆಯಡಿ ಒಟ್ಟು 11 ಸಾವಿರ ಅರ್ಜಿ ಸಲ್ಲಿಕೆಯಾಗಿದ್ದು, ಕೇವಲ 88 ಮಂದಿ ಮಾತ್ರ ಸಾಲ ಪಡೆದುಕೊಂಡಿದ್ದಾರೆ. ಇದು ಪ್ರಧಾನಿಯವರ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು ಹೆಚ್ಚು ಗಮನ ಕೊಡುವಂತೆ ಸೂಚಿಸಲಾಗಿದೆ ಎಂದು ರಾಮ್‌ಶಂಕರ್ ಕಥೇರಿಯಾ ತಿಳಿಸಿದರು.

ರಾಜ್ಯದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ, ಉಜ್ವಲ ಯೋಜನೆಯಲ್ಲಿ ಪರಿಶಿಷ್ಟರಿಗೆ ಅವಕಾಶಗಳು ಸಿಕ್ಕಿರುವುದು ತೃಪ್ತಿಕರವಾಗಿದೆ. ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಪರಿಶಿಷ್ಟರ ಮೇಲಿನ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಅಂಕಿ ಆಂಶ ಪರಿಶೀಲಿಸಲಾಯಿತು. ದೇಶದ ಅಂಕಿ ಅಂಶಕ್ಕೆ ಹೋಲಿಸಿದರೆ ಕರ್ನಾಟಕದ ಸ್ಥಿತಿ ಉತ್ತಮವಾಗಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿರುವ ಪರಿಶಿಷ್ಟ ಜಾತಿಗೆ ಸೇರಿದ ಜನರ ಸಮಸ್ಯೆಗಳು ಹಾಗೂ ಅವರಿಗೆ ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ನ್ಯಾಯಯುತವಾಗಿ ದೊರೆಯಬೇಕಾದ ಸವಲತ್ತು, ಸೌಲಭ್ಯಗಳ ಕುರಿತು ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗವು ಎರಡು ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡಿ, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸರಕಾರದ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿತು.

ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಸದಸ್ಯರು, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರಕಾರದ ಉನ್ನತ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X