ಫೆ.15: ಹರೇಕಳ ಹಾಜಬ್ಬ ಶಾಲೆಗೆ ಶಿಕ್ಷಣ ಸಚಿವರ ಭೇಟಿ
ಮಂಗಳೂರು, ಫೆ.14: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಫೆ.15ರಂದು ಬೆಳಗ್ಗೆ 11:50ಕ್ಕೆ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಶಾಲೆಗೆ ಭೇಟಿ ನೀಡಲಿದ್ದಾರೆ.
ಇದಕ್ಕೂ ಮೊದಲು ಬೆಳಗ್ಗೆ 9:30ಕ್ಕೆ ಮಂಗಳಜ್ಯೋತಿ ಇಂಟರ್‌ನ್ಯಾಷನಲ್ ಶಾಲೆಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಸರಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮಧ್ಯಾಹ್ನ 3:30ಕ್ಕೆ ನಿಟ್ಟೆ ವಿದ್ಯಾಸಂಸ್ಥೆಯ ನ್ಯೂ ಎಜುಕೇಶನ್ ಬ್ಲಾಕ್‌ನ್ನು ಉದ್ಘಾಟಿಸಲಿದ್ದಾರೆ. ಬಳಿಕ ಶಾಲಾ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸುವರು.
ಸಂಜೆ 6 ಗಂಟೆಗೆ ಸರಕಾರಿ ಅತಿಥಿ ಗೃಹದಲ್ಲಿ ಪಿಯುಸಿ ಮತ್ತು ಪ್ರೌಢ ಶಾಲಾ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಿದ್ದಾರೆ. ರಾತ್ರಿ 8:40ಕ್ಕೆ ವಿಮಾನದ ಮೂಲಕ ಕೇಂದ್ರ ಸ್ಥಾನಕ್ಕೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





