Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಳಗಾವಿ-ಹುಬ್ಬಳ್ಳಿ-ಧಾರವಾಡ ತ್ರಿವಳಿ...

ಬೆಳಗಾವಿ-ಹುಬ್ಬಳ್ಳಿ-ಧಾರವಾಡ ತ್ರಿವಳಿ ನಗರದ ಅಭಿವೃದ್ಧಿ ನಮ್ಮ ಕನಸು: ಸಚಿವ ಜಗದೀಶ್ ಶೆಟ್ಟರ್

ಉದ್ಯೋಗ ಮೇಳ: ವಿಶೇಷ ಜಾಲತಾಣ ಅನಾವರಣ

ವಾರ್ತಾಭಾರತಿವಾರ್ತಾಭಾರತಿ16 Feb 2020 10:12 PM IST
share
ಬೆಳಗಾವಿ-ಹುಬ್ಬಳ್ಳಿ-ಧಾರವಾಡ ತ್ರಿವಳಿ ನಗರದ ಅಭಿವೃದ್ಧಿ ನಮ್ಮ ಕನಸು: ಸಚಿವ ಜಗದೀಶ್ ಶೆಟ್ಟರ್

ಬೆಳಗಾವಿ, ಫೆ.16: ಶಿಕ್ಷಣ ಪೂರ್ಣಗೊಳಿಸಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕ, ಯುವತಿಯರಿಗೆ ಅವರ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಉದ್ಯೋಗವನ್ನು ಕಲ್ಪಿಸುವ ಉದ್ಧೇಶದಿಂದ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರಗಳ ವತಿಯಿಂದ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಇಲ್ಲಿನ ಶಿವಬಸವ ನಗರದಲ್ಲಿರುವ ಎಸ್.ಜಿ.ಬಾಳೇಕುಂದ್ರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಫೆ.28 ಹಾಗೂ 29ರಂದು ನಡೆಯಲಿರುವ ಬೆಳಗಾವಿ-ಹುಬ್ಬಳ್ಳಿ -ಧಾರವಾಡ ಜಿಲ್ಲೆಗಳ ಪ್ರಾದೇಶಿಕ ಉದ್ಯೋಗ ಮೇಳದ ಅಂಗವಾಗಿ ಅಭಿವೃದ್ಧಿ ಪಡಿಸಲಾಗಿರುವ ವಿಶೇಷ ಅಂತರ್ಜಾಲ ತಾಣ www.belagaviudyogamela.in ವನ್ನು ನಗರದ ಪ್ರವಾಸಿ ಮಂದಿರದಲ್ಲಿ ರವಿವಾರ ಅನಾವರಣಗೊಳಿಸಿ ಅವರು ಮಾತನಾಡಿದರು.

ಫೆ.28 ಹಾಗೂ 29ರಂದು ಬೆಳಗಾವಿಯಲ್ಲಿ ಉದ್ಯೋಗ ಮೇಳೆ ನಡೆಯಲಿದ್ದು, ಈ ಉದ್ಯೋಗ ಮೇಳದಲ್ಲಿ 150 ಕಂಪೆನಿಗಳು ಭಾಗವಹಿಸುವ ನಿರೀಕ್ಷೆಯಿದೆ. ಸುಮಾರು 15 ರಿಂದ 16 ಸಾವಿರ ಜನರು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದಾರೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.

ಬೆಂಗಳೂರು ಹೊರತುಪಡಿಸಿ ಪ್ರಥಮ ಬಾರಿಗೆ ದೊಡ್ಡಮಟ್ಟದ ಉದ್ಯೋಗ ಮೇಳ ಬೆಳಗಾವಿಯಲ್ಲಿ ಮಾಡುತ್ತಿದ್ದೇವೆ. ಈ ಉದ್ಯೋಗ ಮೇಳಕ್ಕೆ ಎಲ್ಲರ ಸಹಕಾರ ಮುಖ್ಯ. ಉದ್ಯೋಗ ಮೇಳ ಮಾಡುವುದರಿಂದ ಯುವಕರಿಗೆ ಹೆಚ್ಚಿನ ಅವಕಾಶಗಳು ಸಿಗುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.

ಉದ್ಯೋಗ ಮೇಳ ಹಾಗೂ ಹೂಡಿಕೆದಾರರ ಸಮಾವೇಶಗಳ ಮೂಲಕ ಉತ್ತರ ಕರ್ನಾಟಕದಲ್ಲಿ ಒಂದು ಪ್ರಯೋಗ ಮಾಡುತ್ತಿದ್ದೇವೆ. ಈ ಪ್ರಯತ್ನ ಮುಂದುವರೆಯಲಿದ್ದು ಬೆಳಗಾವಿಯಲ್ಲಿ 1 ಸಾವಿರ ಕೋಟಿ ರೂ.ಬಂಡವಾಳ ಹೂಡಿಕೆ ಆಗಲಿದೆ. ಮುಂದಿನ ದಿನಗಳಲ್ಲಿ ಕಿತ್ತೂರು-ಹುಬ್ಬಳ್ಳಿ ರೈಲ್ವೆ ಮಾರ್ಗ ಆದರೆ ಬೆಳಗಾವಿ, ಹುಬ್ಬಳ್ಳಿ ಹಾಗೂ ಧಾರವಾಡ ನಗರಗಳನ್ನು ತ್ರಿವಳಿ ನಗರ ಮಾಡುವುದು ನಮ್ಮ ಕನಸಾಗಿದೆ ಎಂದು ಜಗದೀಶ್ ಶೆಟ್ಟರ್ ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಧಾರವಾಡ, ಬೆಳಗಾವಿ ಹಾಗೂ ಹುಬ್ಬಳ್ಳಿಯ ಚೇಂಬರ್ ಆಫ್ ಕಾಮರ್ಸ್ ಜತೆ ಮಾತನಾಡಿದ್ದೇವೆ. ಉದ್ಯೋಗ ಮೇಳಕ್ಕೆ ಸುಮಾರು 16 ಸಾವಿರ ಜನ ಬರುವ ನಿರೀಕ್ಷೆ ಇದೆ. ಇಂದು ಉದ್ಘಾಟನೆ ಮಾಡುವ ವೆಬ್ಸೈಟ್‌ನಲ್ಲಿ ಉದ್ಯೋಗ ಮೇಳಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಗಳು ದೊರೆಯಲಿದೆ ಎಂದು ತಿಳಿಸಿದರು.

ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಮಾಜಿ ಶಾಸಕ ಸಂಜಯ ಪಾಟೀಲ್, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆಯ ಆಯುಕ್ತ ಜಗದೀಶ್ ಕೆ.ಎಚ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ದೊಡ್ಡಬಸವರಾಜ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X