Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದುಷ್ಟರಿಗೆ ಶಿಕ್ಷೆ- ಶಿಷ್ಟರಿಗೆ ರಕ್ಷಣೆ...

ದುಷ್ಟರಿಗೆ ಶಿಕ್ಷೆ- ಶಿಷ್ಟರಿಗೆ ರಕ್ಷಣೆ ನ್ಯಾಯಾಲಯದ ಮುಖ್ಯ ಧ್ಯೇಯ: ನ್ಯಾ.ಕೆ.ಎನ್.ಫಣೀಂದ್ರ

ವಾರ್ತಾಭಾರತಿವಾರ್ತಾಭಾರತಿ16 Feb 2020 11:02 PM IST
share

ಗದಗ, ಫೆ.16: ದುಷ್ಟರ ಸಂಹಾರ ಶಿಷ್ಟರ ರಕ್ಷಣೆ ಎಂಬ ಸಂದೇಶ ರವಾನೆ ಮಾಡುವುದು ನ್ಯಾಯಾಲಯದ ಮುಖ್ಯ ಉದ್ದೇಶವಾಗಿದೆ ಎಂದು ಹೈಕೋರ್ಟ್‌ನ ನ್ಯಾಯಮೂರ್ತಿ ಹಾಗೂ ರಾಜ್ಯ ನ್ಯಾಯಾಂಗ ಅಕಾಡೆಮಿಯ ಗವರ್ನರ್ ಕೆ.ಎನ್.ಫಣೀಂದ್ರ ತಿಳಿಸಿದರು.

ರವಿವಾರ ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಜ್ಯ ನ್ಯಾಯಾಂಗ ಅಕಾಡೆಮಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳು, ಪೊಲೀಸ್ ಹಾಗೂ ಅಭಿಯೋಜಕ ಇಲಾಖೆಗಳ ಸಹಯೋಗದಲ್ಲಿ ವಿದ್ಯುನ್ಮಾನ ಸಾಕ್ಷಿ ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಮಾನಗಳಲ್ಲಿ ಈ ಉಪಕರಣಗಳ ಬಳಕೆ ಹೆಚ್ಚಾಗುತ್ತಿದ್ದು ಇವುಗಳ ದುರುಪಯೋಗವೂ ಹೆಚ್ಚಾಗುತ್ತಿದೆ. ಮುಂದಿನ ದಿನಮಾನಗಳಲ್ಲಿ ವಿದ್ಯುನ್ಮಾನ ಸಾಕ್ಷಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಬೇಕಾಗುತ್ತದೆ. ಯಾವುದೇ ಒಂದು ಪ್ರಕರಣದ ತನಿಖೆಯಲ್ಲಿ ತನಿಖಾಧಿಕಾರಿಗಳ ಪಾತ್ರ ಮಹತ್ವದಾಗಿದ್ದು, ಪ್ರಕರಣದ ಸಾಕ್ಷ ಸಂಗ್ರಹದಲ್ಲಿ ತನಿಖಾಧಿಕಾರಿ ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕಾಗುತ್ತದೆ ಎಂದು ಅವರು ಹೇಳಿದರು.

ನ್ಯಾಯಾಲಯದಲ್ಲಿ ನೈತಿಕತೆ ಆಧಾರದ ಮೇಲೆ ಪ್ರಕರಣ ಇತ್ಯರ್ಥಗಳಾಗಬೇಕು. ಇಂದಿನ ದಿನಮಾನಗಳಲ್ಲಿ ಸಾಕ್ಷಗಳ ಡಿಜಿಟಲೀಕರಣ ಮಾಡುವುದು ಅತೀ ಅವಶ್ಯಕವಾಗಿದ್ದು, ನ್ಯಾಯಾಲಯಗಳಿಗೆ ವಿದ್ಯುನ್ಮಾನ ಸಾಕ್ಷಗಳನ್ನು ಒದಗಿಸುವಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕಿದ್ದು ಈ ಉಪಕರಣಗಳ ಬಳಕೆ ಬಗ್ಗೆ ಪ್ರತಿಯೊಬ್ಬರು ಜ್ಞಾನ ಹೊಂದುವದು ಅತೀ ಅವಶ್ಯಕವಾಗಿದೆ ಎಂದು ಫಣೀಂದ್ರ ತಿಳಿಸಿದರು.

ಯಾವುದೇ ಪ್ರಕರಣದಲ್ಲಿ ತನಿಖಾಧಿಕಾರಿ, ನ್ಯಾಯವಾದಿ ಹಾಗೂ ನ್ಯಾಯಾಧೀಶರ ಪರಸ್ಪರ ಸಮನ್ವಯತೆ ಅತೀ ಅವಶ್ಯಕ. ಇದರಿಂದ ಅಪರಾಧಿಗೆ ಶಿಕ್ಷೆ ನೀಡಲು ಸಹಕಾರಿಯಾಗುತ್ತದೆ. ಇಂದು ನಡೆಯುತ್ತಿರುವ ವಿದ್ಯುನ್ಮಾನ ಸಾಕ್ಷ ಕಾರ್ಯಾಗಾರ ದಲ್ಲಿ ಚರ್ಚಿಸಲಾಗುವ ವಿಷಯಗಳನ್ನು ಅರಿತು ಚಿಂತನ ಮಂಥನ ಮಾಡಿ ತಮ್ಮ ಕರ್ತವ್ಯಗಳನ್ನು ಶ್ರದ್ಧೆಯಿಂದ ನಿಭಾಯಿಸಿ ಇತರರಿಗೂ ಈ ಕುರಿತು ಮಾಹಿತಿ ನೀಡುವಂತೆ ಅವರು ಹೇಳಿದರು.

ಹೈಕೋರ್ಟ್ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯರೂರ್ ಮಾತನಾಡಿ, ಆಧುನಿಕತೆಯ ದಿನಮಾನಗಳಲ್ಲಿ ವಿದ್ಯುನ್ಮಾನ ಸಾಕ್ಷಗಳ ಪ್ರಾಮುಖ್ಯತೆಯು ಹೆಚ್ಚಾಗುತ್ತಿದೆ. ಇಂತಹ ಸಾಕ್ಷಗಳನ್ನು ನ್ಯಾಯಾಲಯದಲ್ಲಿ ಹಾಜರು ಪಡಿಸುವ ಕಾರ್ಯವು ಅತ್ಯಂತ ಪ್ರಮುಖವಾಗಿದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಗದಗ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಮಾತನಾಡಿ, ಯಾವುದೇ ಪ್ರಕರಣದಲ್ಲಿ ವಿದ್ಯುನ್ಮಾನ ಸಾಕ್ಷದ ಬಗ್ಗೆ ನ್ಯಾಯಾಧೀಶರ ಜೊತೆಗೆ ಪೊಲೀಸ್, ಅಭಿಯೋಜನೆ ಹಾಗೂ ನ್ಯಾಯಾಲಯಗಳ ಸಿಬ್ಬಂದಿಗಳ ಪಾತ್ರವು ಮಹತ್ವದಾಗಿದೆ. ಸಾಕ್ಷ ಸಂಗ್ರಹದಲ್ಲಿ ಪೊಲೀಸ್ ಇಲಾಖೆ ಮುತುವರ್ಜಿ ವಹಿಸುವುದು ಅತೀ ಅವಶ್ಯಕವಾಗಿದೆ ಎಂದರು.

ವಿದ್ಯುನ್ಮಾನ ಸಾಕ್ಷಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಅದರ ನೈಜತೆಯನ್ನು ಗುರುತಿಸುವ ಮಹತ್ತರ ಕಾರ್ಯವಾಗಬೇಕಿದೆ. ಸಂವಿಧಾನದ ಹಕ್ಕಿಗೆ ಚ್ಯುತಿ ಬಂದಂತಹ ಸಂದರ್ಭದಲ್ಲಿ ಎಲ್ಲರೂ ಕೈ ಜೋಡಿಸಿ ದುಷ್ಟರಿಗೆ ಶಿಕ್ಷೆ ನೀಡಿ ಸಂವಿಧಾನದ ಆಶೋತ್ತರ ನೆರವೇರಿಸಲು ಎಲ್ಲರೂ ಸಹಕರಿಸಬೇಕು ಎಂದು ಅವರು ಕರೆ ನೀಡಿದರು.

ಕಾರ್ಯಗಾರದಲ್ಲಿ ಹೈಕೋರ್ಟ್‌ನ ನ್ಯಾಯವಾದಿ ಸಂದೇಶ್ ಜೆ.ಚೌಟಾ, ವಿದ್ಯುನ್ಮಾನ ಸಾಕ್ಷಗಳನ್ನು ನ್ಯಾಯಾಲಯದಲ್ಲಿ ಹಾಜರುಪಡಿಸುವಿಕೆ, ಗುರುತಿಸುವಿಕೆ ಇವುಗಳ ಕುರಿತು, ರಾಮಯ್ಯ ತಾಂತ್ರಿಕ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಮನಿಷ್ ಕುಮಾರ್-ಅಂತರ್ಜಾಲ ಅಪರಾಧ ಹಾಗೂ ಡಿಜಿಟಲ್ ಫೋರೆನ್ಸಿಕ್ ಕುರಿತು ಮತ್ತು ಸಿ.ಐ.ಡಿಯ ಕಾನೂನು ಸಲಹೆಗಾರ ಮಹೇಶ್ ವೈದ್ಯ- ವಿದ್ಯುನ್ಮಾನ ಸಾಕ್ಷ ಸಂಗ್ರಹಣೆ ಹಾಗೂ ಸಂರಕ್ಷಣೆ ಕುರಿತು ಉಪನ್ಯಾಸ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X