ಹಿರಿಯ ನಟಿ ಕಿಶೋರಿ ಬಲ್ಲಾಳ್ ನಿಧನ
ಬೆಂಗಳೂರು: ಹಿರಿಯ ನಟಿ ಕಿಶೋರಿ ಬಲ್ಲಾಳ್ ಅವರು ಬೆಂಗಳೂರಿನ ಜಯನಗರ ಸೇವಾಕ್ಷೇತ್ರ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ ನಿಧನರಾದರು.
ಸುಮಾರು 70ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಹಿರಿಯ ನಟಿ ಕಿಶೋರಿ ಬಲ್ಲಾಳ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಶಾರೂಖ್ ಖಾನ್ ನಟನೆಯ ‘ಸ್ವದೇಶ್’ ಹಾಗು 70ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕಿಶೋರಿ ಬಲ್ಲಾಳ್ ನಟಿಸಿದ್ದಾರೆ. ಅಜ್ಜಿ, ತಾಯಿ ಪಾತ್ರದಲ್ಲಿ ಅವರು ನಟಿಸಿದ್ದು, ಮನೆ ಮಾತಾಗಿದ್ದರು. ಕನ್ನಡದ ಬಹುತೇಕ ಸ್ಟಾರ್ ನಟರೊಂದಿಗೆ ಕಿಶೋರಿ ಬಲ್ಲಾಳ್ ತೆರೆಹಂಚಿಕೊಂಡಿದ್ದಾರೆ.
Next Story