Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇಂದ್ರದ ವಿರುದ್ಧ ಕೊಡಗು ಮಹಿಳಾ...

ಕೇಂದ್ರದ ವಿರುದ್ಧ ಕೊಡಗು ಮಹಿಳಾ ಕಾಂಗ್ರೆಸ್‍ನಿಂದ ವಿನೂತನ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ18 Feb 2020 11:02 PM IST
share
ಕೇಂದ್ರದ ವಿರುದ್ಧ ಕೊಡಗು ಮಹಿಳಾ ಕಾಂಗ್ರೆಸ್‍ನಿಂದ ವಿನೂತನ ಪ್ರತಿಭಟನೆ

ಮಡಿಕೇರಿ, ಫೆ.18: ಅಡುಗೆ ಅನಿಲದ ಸಹವಾಸ ಬೇಡವೆಂದು ಸೌದೆಯಲ್ಲೇ ಅಡುಗೆ ಮಾಡಿದರು, ಖಾಲಿ ಸಿಲಿಂಡರ್ ಗಳನ್ನು ಜಿಲ್ಲಾಡಳಿತದ ಭವನಕ್ಕೆ ತಂದರು. ಕೇಂದ್ರ ಸರ್ಕಾರದ ವಿರುದ್ಧ ಮಹಿಳೆಯರು ಘೋಷಣೆಗಳನ್ನು ಕೂಗಿದರು...ಹೀಗೆ, ಅಡುಗೆ ಅನಿಲದ ಬೆಲೆಯನ್ನು ದುಬಾರಿ ಮಾಡಿದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ಸಿಗರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಮಹಿಳಾ ಕಾರ್ಯಕರ್ತರು ಸೌದೆ ಒಲೆಯಲ್ಲಿ ಕಾಫಿ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭ ಮಾತನಾಡಿದ ಮಹಿಳಾ ಕಾಂಗ್ರೆಸ್‍ನ ರಾಜ್ಯಾಧ್ಯಕ್ಷೆ ಡಾ.ಪುಷ್ಪ ಅಮರನಾಥ್, 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೊಡ್ಡ ದೊಡ್ಡ ಭರವಸೆಗಳೊಂದಿಗೆ ಅಧಿಕಾರಕ್ಕೆ ಬಂದು, ಉತ್ತಮ ಆಡಳಿತ ನೀಡುವ ವಿಶ್ವಾಸ ಮೂಡಿಸಿದಂತೆ ಮಾಡಿ ಈಗ ಶ್ರೀಮಂತರ ಪರವಾದ ಆಡಳಿತ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. 

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಆಳ್ವಿಕೆಯ ಸಂದರ್ಭ ಜನಸಮಾನ್ಯರಿಗೆ ಕಡಿಮೆ ದರದಲ್ಲಿ ಅಡುಗೆ ಅನಿಲ ವಿತರಣೆಯಾಗುತ್ತಿತ್ತು. ಮಹಿಳೆಯರು ನೆಮ್ಮದಿಯಿಂದ ಜೀವನ ಸಾಗಿಸುವ ವಾತಾವರಣ ದೇಶದಲ್ಲಿ ಸೃಷ್ಟಿಯಾಗಿತ್ತು. ಆದರೆ ಈಗಿನ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತೈಲೋತ್ಪನ್ನಗಳು ಮಾತ್ರವಲ್ಲದೆ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡುತ್ತಲೇ ಬರುತ್ತಿದ್ದು, ಜನಸಾಮಾನ್ಯರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ಸಂಸದರ ವಿರುದ್ಧ ಅಸಮಾಧಾನ
ಎರಡು ಭಾರಿ ಕೊಡಗನ್ನು ಪ್ರತಿನಿಧಿಸಿದ ಸಂಸದ ಪ್ರತಾಪ್ ಸಿಂಹ ಅವರು ಚುನಾವಣೆ ಸಂದರ್ಭ ಮತಗಳಿಕೆಗಾಗಿ ತೋರಿದ ಕಾಳಜಿಯನ್ನು ಈಗ ತೋರುತ್ತಿಲ್ಲ. ಗೆದ್ದು ಬಂದ ನಂತರ ಜಿಲ್ಲೆಯ ಜನರ ಸಮಸ್ಯೆಗಳನ್ನು ಆಲಿಸಲು ತಿರುಗಿಯೂ ನೋಡುತ್ತಿಲ್ಲವೆಂದು ಡಾ.ಪುಷ್ಪ ಅಮರನಾಥ್ ಟೀಕಿಸಿದರು.
ನೆರೆ ಸಂತ್ರಸ್ತರು ಮನೆಗಳನ್ನು ಕಳೆದುಕೊಂಡು ಅತಂತ್ರ ಸ್ಥಿತಿಯಲ್ಲಿದ್ದು, ಬಿಜೆಪಿಯ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿದ ತಪ್ಪಿಗೆ ಇಂದು ಕಣ್ಣೀರು ಹಾಕಿಕೊಂಡು ಬೀದಿಯಲ್ಲಿ ಪ್ರತಿಭಟನೆ ನಡೆಸಬೇಕಾದ ದುಸ್ಥಿತಿ ಬಂದೊದಗಿದೆ ಎಂದು ಆರೋಪಿಸಿದರು.

ಜಿಲ್ಲಾಡಳಿತ ಮಳೆಗಾಲಕ್ಕೂ ಮೊದಲು ಸಂತ್ರಸ್ತರಿಗೆ ಸೂಕ್ತ ಪರಿಹಾರವನ್ನು ಕಲ್ಪಿಸಬೇಕು, ಜಿಲ್ಲಾಡಳಿತಕ್ಕೆ ಸರಕಾರ ಅಗತ್ಯ ಸಹಕಾರವನ್ನು ನೀಡಬೇಕು. ತಪ್ಪಿದಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ಸಂತ್ರಸ್ತರ ಪರವಾದ ಹೋರಾಟ ತೀವ್ರಗೊಳ್ಳಲಿದೆ ಎಂದು ಡಾ.ಪುಷ್ಪ ಅಮರನಾಥ್ ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ ಆರ್ಥಿಕ ಸ್ಥಿತಿ ಸಂಪೂರ್ಣವಾಗಿ ಕುಸಿದು ಹೋಗಿದೆ. ಮತ್ತೊಂದೆಡೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಡವರು, ಶ್ರೀಮಂತರು ಎಂಬ ತಾರತಮ್ಯದ ಕಂದಕವನ್ನು ದೊಡ್ಡದು ಮಾಡಲಾಗುತ್ತಿದೆ ಎಂದು ಆರೋಪಿಸಿದರು. 

ಈ ಹಿಂದೆ ಯುಪಿಎ ನೇತೃತ್ವದ ಸರ್ಕಾರವಿದ್ದಾಗ ದೇಶದಲ್ಲಿ ಆರ್ಥಿಕ ಸ್ವಾತಂತ್ರ್ಯವಿತ್ತು, ಜನರು ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದರು. ಎಲ್ಲರನ್ನೂ ಸಮಾನವಾಗಿ ಕಾಣಲಾಗುತ್ತಿತ್ತು, ಆದರೆ ಇಂದು ಜನರನ್ನು ಸಂಕಷ್ಟಕ್ಕೆ ಸಿಲುಕಿಸುವ ಆರ್ಥಿಕ ಪದ್ಧತಿ ಮತ್ತು ಅರ್ಥಹೀನ ನಿಯಮಗಳನ್ನು ಜಾರಿಗೆ ತರುವ ಮೂಲಕ ಬಿಜೆಪಿ ನೇತೃತ್ವದ ಸರ್ಕಾರ ಅರಾಜಕತೆಯನ್ನು ಮೂಡಿಸುತ್ತಿದೆ ಎಂದು  ಮಂಜುನಾಥ್ ಕುಮಾರ್ ಟೀಕಿಸಿದರು.

ಮಹಿಳಾ ಕಾಂಗ್ರೆಸ್‍ನ ರಾಜ್ಯ ಉಪಾಧ್ಯಕ್ಷೆ ಪುಷ್ಪವಲ್ಲಿ, ಕೆಪಿಸಿಸಿ ಮುಖಂಡರಾದ ಕೆ.ಪಿ.ಚಂದ್ರಕಲಾ, ತಾರಾಯಮ್ಮ, ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ಜಿ.ಪಂ. ಸದಸ್ಯೆ ಸುನೀತ ಮಂಜುನಾಥ್, ಮಡಿಕೇರಿ ನಗರ ಅಧ್ಯಕ್ಷೆ ಹೊಟ್ಟೆಯಂಡ ಪಾರ್ವತಿ ಫ್ಯಾನ್ಸಿ, ವಿರಾಜಪೇಟೆ ಬ್ಲಾಕ್ ಅಧ್ಯಕ್ಷೆ ಪೊನ್ನಕ್ಕಿ, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷೆ ಶೀಲಾ ಡಿಸೋಜ, ಮಹಿಳಾ ಘಟಕದ ಕಾರ್ಯಕಾರಿ ಸಮಿತಿಯ ಅಧ್ಯಕ್ಷೆ ಫೀಲೋಮಿನ, ಸೇವಾದಳದ ಅಧ್ಯಕ್ಷೆ ಪ್ರೇಮಾ ಕೃಷ್ಣಪ್ಪ, ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಈ.ಸುರೇಶ್, ನಗರಸಭಾ ಮಾಜಿ ಅಧ್ಯಕ್ಷೆ ಜುಲೇಕಾಬಿ, ಸಾಮಾಜಿಕ ಜಾಲತಾಣದ ಮಹಿಳಾ ಅಧ್ಯಕ್ಷೆ ಕೈರುನ್ನಿಸಾ, ಡಿಸಿಸಿ ಸದಸ್ಯೆ ಗೀತಾ, ಸಾಮಾಜಿಕ ಜಾಲತಾಣದ ಅಧ್ಯಕ್ಷ ಹೊಸೂರು ಸೂರಜ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎಂ.ಎ.ಉಸ್ಮಾನ್, ರಾಜೀವ್‍ ಗಾಂಧಿ ಪಂಚಾಯತ್ ರಾಜ್ ಅಧ್ಯಕ್ಷ ತೆನ್ನಿರಮೈನಾ, ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸದಾಮುದ್ದಪ್ಪ, ನಗರ ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್ ಮತ್ತಿತರ ಪ್ರಮುಖರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X