Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಟಿಪ್ಪು, ಪ್ರಗತಿಪರರ ವಿರುದ್ಧ...

ಟಿಪ್ಪು, ಪ್ರಗತಿಪರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ವಿವಿಧ ಸಂಘಟನೆಗಳಿಂದ ಮೈಸೂರಿನಲ್ಲಿ ಧರಣಿ

ವಾರ್ತಾಭಾರತಿವಾರ್ತಾಭಾರತಿ19 Feb 2020 10:59 PM IST
share
ಟಿಪ್ಪು, ಪ್ರಗತಿಪರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ವಿವಿಧ ಸಂಘಟನೆಗಳಿಂದ ಮೈಸೂರಿನಲ್ಲಿ ಧರಣಿ

ಮೈಸೂರು,ಫೆ.19: ಟಿಪ್ಪು ಮತ್ತು ಪ್ರಗತಿಪರರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಸಂವಿಧಾನ ಹೋರಾಟ ಸಮಿತಿ, ದಸಂಸ ಸೇರಿದಂತೆ ಪ್ರಗತಿಪರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಕಲಾಮಂದಿರದ ರಂಗಾಯಣದ ಆವರಣದಲ್ಲಿ ಬಹುರೂಪಿ ನಾಟಕೋತ್ಸವದ ಅಂತಿಮ ದಿನವಾದ ಬುಧವಾರ ಸಮಾವೇಶಗೊಂಡ ಪ್ರತಿಭಟನಾಕಾರರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರೆಗೋಡು ಮಾತನಾಡಿ, ರಂಗಾಯಣದ ನಿರ್ದೇಶಕ ಸ್ಥಾನ ಅಲಂಕರಿಸುವ ಯೋಗ್ಯತೆ ಅಡ್ಡಂಡ ಸಿ.ಕಾರ್ಯಪ್ಪ ಅವರಿಗಿಲ್ಲ. ಆತನೊಬ್ಬ ಅಸಭ್ಯ ಮತ್ತು ಅನೈತಿಕ ವ್ಯಕ್ತಿ, ಆತ ಮಹಿಳೆಯರ ಬಗ್ಗೆ ಕೀಳು ಮನೋಭಾವ ಹೊಂದಿರುವಾತ, ಆತನನ್ನು ಕೊಡಗಿನ ಜನ ಒದ್ದು ಓಡಿಸಿದ್ದಾರೆ. ಇಂತಹ ವ್ಯಕ್ತಿ ಬಿಜೆಪಿ ನಾಯಕರ ಕಾಲು ಹಿಡಿದು ಈ ಸ್ಥಾನಕ್ಕೆ ಬಂದು ಕುಳಿತಿದ್ದಾನೆ ಎಂದು ವಾಗ್ದಾಳಿ ನಡೆಸಿದರು. ಟಿಪ್ಪು ಬಗ್ಗೆ ಕೇವಲವಾಗಿ ಮಾತನಾಡಿದ್ದನ್ನು ಖಂಡಿಸಿದ ರಂಗಾಯಣದ ಮಾಜಿ ನಿರ್ದೇಶಕ ಜನಾರ್ಧನ್ (ಜನ್ನಿ) ಅವರ ವಿರುದ್ಧ ಅವನೊಬ್ಬ ಕುಡುಕ ಎಂಬ ಪದವನ್ನು ಬಳಸಿದ್ದಾರೆ. ಜೊತೆಗೆ ಪ್ರಗತಿಪರರ ವಿರುದ್ಧವೂ ಕೇವಲವಾಗಿ ಮಾತನಾಡಿದ್ದಾರೆ. ಹಾಗಾಗಿ ಈತನನ್ನು ಕೂಡಲೇ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ದಸಂಸ ಜಿಲ್ಲಾ ಸಂಚಾಲಕ ಆಲಗೂಡು ಶಿವಕುಮಾರ್ ಮಾನಾಡಿ, ಇವನ್ನೊಬ್ಬ ಮಹಿಳಾ ವಿರೋಧಿ ಮನೋಭಾವ ಹೊಂದಿರುವ ವ್ಯಕ್ತಿ, ಈತನ ಬಗ್ಗೆ ಒಳ್ಳೆಯ ಅಭಿಪ್ರಾಯ ಇಲ್ಲ, ಮೈಸೂರಿನಂತ ಪ್ರತಿಷ್ಠಿತ ರಂಗಾಯಣಕ್ಕೆ ಈತನನ್ನು ನಿರ್ದೇಶಕನನ್ನಾಗಿ ಮಾಡಿರುವುದೇ ದೊಡ್ಡ ತಪ್ಪು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಪ್ರಗತಿಪರ ಚಿಂತಕರಾದ ಡಾ.ಎಲ್.ಲಕ್ಷ್ಮಿನಾರಾಯಣ್, ಸಾಹಿತಿ ರತಿರಾವ್, ಪತ್ರಕರ್ತರಾದ ಟಿ.ಗುರುರಾಜ್, ಕೆ.ದೀಪಕ್, ಕರ್ನಾಟಕ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಶಿವರಾಂ, ಡಾ.ಕೃಷ್ಣಮೂರ್ತಿ ಚಮರಂ, ದಸಂಸ ಮೈಸೂರು ತಾಲ್ಲೂಕು ಅಧ್ಯಕ್ಷ ಕಲ್ಲಹಳ್ಳಿ ಕುಮಾರ್, ಗೋಪಾಲ್ ಕೃಷ್ಣ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಬಹು ಸಂಸ್ಕೃತಿ ಹೊಂದಿಲ್ಲದ ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರನ್ನು ಕೂಡಲೇ ವಜಾಗೊಳಿಸುವ ಮೂಲಕ ರಂಗಾಯಣದ ಘನೆಯನ್ನು ಕಾಪಾಡಬೇಕಿದೆ.
-ಕಲ್ಲಹಳ್ಳಿ ಕುಮಾರ್, ದಸಂಸ ತಾಲೂಕು ಅಧ್ಯಕ್ಷ, ಮೈಸೂರು.

ಮೈಸೂರಿನಲ್ಲಿ ಗೋಡ್ಸೆಗಳ ಆಟ ನಡೆಯುವುದಿಲ್ಲ
ಮೈಸೂರಿನಲ್ಲಿ ಗೋಡ್ಸೆಗಳ ಆಟ ನಡೆಯುವುದಿಲ್ಲ. ತಮ್ಮ ಸಾಂಸ್ಕೃತಿಕ ಪ್ರಭುಗಳನ್ನು ಮೆಚ್ಚಿಸಲು ಹಿಂದಿನ ನಿರ್ದೇಶಕರೊಬ್ಬರನ್ನು ಅನಾವಶ್ಯಕವಾಗಿ ತನ್ನ ಆತ್ಮೀಯ ಸ್ನೇಹಿತ, ಆದರೆ ಕುಡುಕ ಎಂದು ನಿಂದಿಸುವಷ್ಟು ಕೆಳಮಟ್ಟಕ್ಕಿಳಿದಿರುವುದು ಇವರ ಕುಲದ ನೆಲೆಯನ್ನು ತಿಳಿಸುತ್ತದೆ. ಕಾರ್ಯಪ್ಪನವರ ಮುಖದಲ್ಲಿ ಅಪ್ಪಟ ಕುಡುಕನ ಕಳೆ ಎದ್ದು ಕಾಣುತ್ತದೆಯೇ ಹೊರತು ಸಾಂಸ್ಕೃತಿಕ ಶ್ರೀಮಂತಿಕೆ ಕಳೆ ಎಳ್ಳಷ್ಟು ಗೋಚರಿಸುವುದಿಲ್ಲ

ಪ್ರೊ.ಮಹೇಶ್ ಚಂದ್ರಗುರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X