Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋರ್ಟ್‌ಗೆ ಬಂದು ನಿಮ್ಮ ನವೀನ...

ಕೋರ್ಟ್‌ಗೆ ಬಂದು ನಿಮ್ಮ ನವೀನ ಕಲ್ಪನೆಯನ್ನು ಹಂಚಿಕೊಳ್ಳಿ: ಗಡ್ಕರಿಗೆ ಸುಪ್ರೀಂ ಕೋರಿಕೆ

ವಾರ್ತಾಭಾರತಿವಾರ್ತಾಭಾರತಿ19 Feb 2020 11:47 PM IST
share

ಹೊಸದಿಲ್ಲಿ, ಫೆ.19: ಮಾಲಿನ್ಯ ಸಮಸ್ಯೆ ನಿಭಾಯಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ನ್ಯಾಯಾಲಯಕ್ಕೆ ಬಂದು ತಮ್ಮಲ್ಲಿರುವ ನವೀನ ಕಲ್ಪನೆ, ಅಭಿಪ್ರಾಯವನ್ನು ಹಂಚಿಕೊಳ್ಳಬೇಕೆಂದು ವಿನಂತಿಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.

ಇದು ಸಚಿವರ ಸಹಯೋಗಕ್ಕೆ ಕೋರಿಕೆಯಾಗಿದೆ, ಸಮನ್ಸ್ ಅಲ್ಲ ಎಂದು ಮುಖ್ಯ ನ್ಯಾಯಾಧೀಶ ಎಸ್‌ಎ ಬೋಬ್ಡೆ ನೇತೃತ್ವದ ನ್ಯಾಯಪೀಠ ಸ್ಪಷ್ಟಪಡಿಸಿದೆ. ವಿದ್ಯುತ್‌ಚಾಲಿತ ವಾಹನಗಳಿಗೆ ಸಂಬಂಧಿಸಿ ಸರಕಾರದ ಕಾರ್ಯನೀತಿಯನ್ನು ಜಾರಿಗೊಳಿಸುವ ಕುರಿತ ಅರ್ಜಿಯ ವಿಚಾರಣೆ ಸಂದರ್ಭ ನ್ಯಾಯಪೀಠ ಈ ಹೇಳಿಕೆ ನೀಡಿದೆ.

ಕೇಂದ್ರ ರಸ್ತೆ ಸಾರಿಗೆ ಸಚಿವರ ಬಳಿ ನವೀನ ಕಲ್ಪನೆಯಿದೆ. ಅವರು ನಿರ್ಧಾರ ಕೈಗೊಳ್ಳುವ ಸ್ಥಾನದಲ್ಲಿರುವುದರಿಂದ ನ್ಯಾಯಾಲಯಕ್ಕೆ ಬಂದು ನಮಗೆ ನೆರವಾಗಬೇಕೆಂದು ಕೋರುತ್ತೇವೆ ಎಂದು ನ್ಯಾ. ಎಸ್‌.ಎ. ಬೋಬ್ಡೆ ಹೇಳಿದರು. ಬಳಿಕ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ನ್ಯಾಯಾಧೀಶರು, ಇದನ್ನು ರಾಜಕೀಯ ದೃಷ್ಟಿಯಿಂದ ಕಾಣುವ ಸಾಧ್ಯತೆಯಿದೆ. ನಾವು ಸಚಿವರಿಗೆ ಸಮನ್ಸ್ ನೀಡುತ್ತೇವೆ ಎಂದು ಭಾವಿಸಬೇಡಿ. ಇದು ಕೋರಿಕೆಯಾಗಿದೆ. ಅಧಿಕಾರ ಸ್ಥಾನದಲ್ಲಿರುವ ಒಬ್ಬರು ನಿರ್ಧಾರ ಕೈಗೊಳ್ಳಬೇಕು ಎಂಬುದು ನಮ್ಮ ಆಶಯವಾಗಿದೆ. ದಯವಿಟ್ಟು ಅವರು ಹಾಜರಾಗುವಂತೆ ನೋಡಿಕೊಳ್ಳಿ ಎಂದು ಸರಕಾರದ ಪರ ವಕೀಲರಿಗೆ ನ್ಯಾಯಪೀಠ ತಿಳಿಸಿತು.

ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಮೇಲೆ ಶುಲ್ಕ ವಿಧಿಸಿ, ವಿದ್ಯುತ್ ವಾಹನಗಳಿಗೆ ಸಬ್ಸಿಡಿ ಒದಗಿಸಬಹುದು ಎಂದು ಅರ್ಜಿದಾರರ ಪರ ವಕೀಲ ಪ್ರಶಾಂತ್ ಭೂಷಣ್ ಕೋರಿದರು. ಇದಕ್ಕೆ ಉತ್ತರಿಸಿದ ನ್ಯಾಯಪೀಠ, ವಿದ್ಯುತ್ ವಾಹನಗಳ ವಿಷಯ ಇತರ ಹಲವು ವಿಷಯಗಳಿಗೆ ಸಂಬಂಧಿಸಿದ್ದು ಇಂತಹ ಅರ್ಜಿಗಳು ವಿಚಾರಣೆಗೆ ಬಾಕಿಯಿದೆ. ವಾಹನಗಳಿಂದ ಆಗುವ ಮಾಲಿನ್ಯದ ಸಮಸ್ಯೆ ಕೇವಲ ದಿಲ್ಲಿ ಅಥವಾ ರಾಷ್ಟ್ರೀಯ ರಾಜಧಾನಿ ಪ್ರದೇಶಕ್ಕೆ ಮಾತ್ರ ಅನ್ವಯವಾಗುವುದಿಲ್ಲ. ಇಡೀ ದೇಶಕ್ಕೆ ಸಂಬಂಧಿಸಿದೆ. ನಿರ್ಧಾರ ಕೈಗೊಳ್ಳುವ ಅಧಿಕಾರವುಳ್ಳ ಅಧಿಕಾರಿಯ ನೆರವಿನಿಂದ ಎಲ್ಲಾ ಅರ್ಜಿಗಳನ್ನೂ ಏಕಕಾಲದಲ್ಲೇ ಪರಿಗಣಿಸುವ ಅಗತ್ಯವಿದೆ ಎಂದು ತಿಳಿಸಿದ ನ್ಯಾಯಪೀಠ, ಈ ಬಗ್ಗೆ ಉತ್ತರಿಸಲು ಕೇಂದ್ರ ಸರಕಾರಕ್ಕೆ 4 ವಾರಗಳ ಅವಕಾಶ ನೀಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X